ನನ್ನ ಪತಿ ಆರೋಪಿಯಲ್ಲ. ಅವರನ್ನು ಮನೆಯಿಂದ ತನಿಖೆ ಇದೆ ಎಂದು ಪೆÇಲೀಸರು ಕರೆದುಕೊಂಡು ಹೋಗಿದ್ದಾರೆ. ಇದೀಗ ಅವರನ್ನು ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಶಫೀಕ್ ಪತ್ನಿ ಅನ್ಸಿಫಾ ಆರೋಪ ಮಾಡಿದ್ದಾರೆ. ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ತನಿಖೆಯು ಪ್ರಗತಿಯಲ್ಲಿದೆ. ಇಬ್ಬರು ಆರೋಪಿಗಳಾದ ಝಕೀರ್ ಮತ್ತು ಶಫೀಕ್ ಅವರ ಬಂಧನವನ್ನು ಎಡಿಜಿಪಿ ಅಲೋಕ್ ಕುಮಾರ್
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಯಾವುದೇ ಗಲಭೆ ಉಂಟಾಗದಂತೆ ಗಲಭೆಕೋರರಿಗೆ ಎಚ್ಚರಿಕೆಗೆ ನೀಡಲು ಮತ್ತು ಸಾರ್ವಜನಿಕರಿಗೆ ಶಾಂತಿ ಸುವ್ಯವಸ್ಥೆಗಾಗಿ ರಾಜ್ಯ ಮೀಸಲು ಪಡೆಯ ಸಶಸ್ತ್ರ ಪೊಲೀಸರಿಂದ ದ.ಕ ಜಿಲ್ಲಾ ಎಸ್ಪಿ ಋಷಿಕೇಶ್ ಸೋನಾವಣೆ ಅವರ ಸೂಚನೆಯಂತೆ ಪುತ್ತೂರು ಡಿವೈಎಸ್ಪಿ ಡಾ.ಗಾನ ಪಿ ಕುಮಾರ್ ಮತ್ತು ಇನ್ ಸ್ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಜು. 28ರಂದು ಪುತ್ತೂರು ಪೇಟೆಯಲ್ಲಿ ಪಥ ಸಂಚಲನ ನಡೆಯಿತು.
ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆಯೋಜನೆ ನ್ಯೂ ಚೆನ್ನೈ ಶಾಪಿಂಗ್ ಸಂಸ್ಥೆಯ ವತಿಯಿಂದ ವೈವಿಧ್ಯಮಯ ಹಾಗೂ ಆಕರ್ಷಕ ಶೈಲಿಯ ವಸ್ತ್ರಗಳ ಮಾರಾಟ ಮೇಳ ಬಿ.ಸಿ.ರೋಡಿನ ಹೊಟೇಲ್ ರಂಗೋಲಿ ಸಭಾಂಗಣದಲ್ಲಿ ಆರಂಭಗೊಂಡಿದ್ದು ಮೊದಲ ದಿನವೇ ಅಪಾರ ಸಂಖ್ಯೆಯಲ್ಲಿ ಗ್ರಾಹಕರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಬಿ.ಸಿ.ರೋಡು ಪರಿಸರದಲ್ಲಿ ಇದೇ ಪ್ರಥಮ ಬಾರಿಗೆ ಬೃಹತ್ ಬಟ್ಟೆಗಳ ಮಾರಾಟ ಮೇಳ ಆರಂಭಗೊಂಡಿದ್ದು ಗ್ರಾಹಕರು ಖರೀದಿಸುವ ಪ್ರತಿಯೊಂದು ಬಟ್ಟೆಯ ಬೆಲೆ ಕೇವಲ 199
ಮೂಳೂರು ಹಿಂದು ರಕ್ಷಾ ವೆಲ್ ಫೇರ್ ಟ್ರಸ್ಟ್ ನ ವತಿಯಿಂದ ಆಟಿ ಅಮಾವಾಸ್ಯೆಯ ಪ್ರಯುಕ್ತ ಹಾಲೆ ಮರದ ತೊಗಟೆಯ ಕಷಾಯವನ್ನು ಸಿದ್ಧಪಡಿಸಿ ಸಾರ್ವಜನಿಕರಿಗೆ ಮತ್ತು ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸಲಾಯಿತು.ಹಿಂದು ರಕ್ಷಾ ವೆಲ್‍ಫೇರ್ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಧೀರೇಶ್ ಡಿ. ಪಿ. ಮಾತನಾಡಿ, ತುಳುನಾಡ ಸಂಸ್ಕೃತಿಯಲ್ಲಿ ಆಟಿ ಅಮಾವಾಸ್ಯೆ ಆಚರಣೆಯು ಧಾರ್ಮಿಕವಾಗಿ, ವೈಜ್ಞಾನಿಕವಾಗಿ ಅತ್ಯಂತ ಮಹತ್ವವನ್ನು ಪಡೆದಿದೆ. ಆಟಿ ಅಮಾವಾಸ್ಯೆಯ ದಿನ ಹಾಲೆ ಮರದ
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ, ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರ್ ಅವರ ಸ್ವಗ್ರಾಮ ಬೆಳ್ಳಾರೆಯ ನೆಟ್ಟಾರುವಿನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಬಿಲ್ಲವ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಸಲಾಯಿತು. ಈ ವೇಳೆ ಕುಟುಂಬಸ್ಥರಿಗೆ ಮಾತ್ರ ಅವಕಾಶ ನೀಡಲಾಗಿದೆ. ಪ್ರವೀಣ್ ಪತ್ನಿ, ತಂದೆ-ತಾಯಿ ಸೇರಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತಂದೆಯೇ ಮಗನ ಚಿತೆಗೆ ಅಗ್ನಿ ಸ್ಪರ್ಶ ನೀಡುವ ಮೂಲಕ ಅಂತಿಮ ಸಂಸ್ಕಾರ ನಡೆಸಲಾಯಿತು.
ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆಗೆ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಮತೀಯವಾದಿ ನೀತಿಗಳೇ ನೇರ ಕಾರಣ. ಬಿಜೆಪಿ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಪೂರ್ತಿ ಕುಸಿದಿದ್ದು, ಕೋಮುವಾದಿ ಸಂಘಟನೆಗಳು ಅಂಕೆ ಮೀರಿ ವರ್ತಿಸುತ್ತಿವೆ. ಬೆಳ್ಳಾರೆಯಲ್ಲಿ ನಡೆದಿರುವ ಮಸೂದ್ ಹಾಗೂ ಪ್ರವೀಣ್ ನೆಟ್ಟಾರ್ ಕೊಲೆಗಳು ಮತೀಯ ಸಂಘರ್ಷ ಭುಗಿಳೇಲುವ ಭೀತಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಬೊಮ್ಮಾಯಿ ಈಗಲಾದರು ಎಚ್ಚೆತ್ತುಕೊಂಡು ತಮ್ಮ ಪರಿವಾರವೂ ಸೇರಿದಂತೆ
ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಸದಸ್ಯ ಪ್ರವೀಣ್ ನೆಟ್ಟಾರ್‍ಅವರ ಕೊಲೆಗೆ ಸಂಬಂಧಿಸಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಬಿ.ಸಿ.ರೋಡ್ ಸುತ್ತಮುತ್ತ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಿದಂತೆ ಹೆಚ್ಚಿನ ಅಂಗಡಿ ಮುಂಗಟ್ಟುಗಳು ಬುಧವಾರ ಬಂದ್ ಆದವು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಕಿಶೋರ್ ಪಲ್ಲಿಪ್ಪಾಡಿ, ನಿರಂತರವಾಗಿ
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಬೈಕ್ ನಲ್ಲಿ ಬಂದ ಮೂವರ ತಂಡ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ತನಿಖೆಗೆ ಐದು ವಿಶೇಷ ಪೋಲಿಸ್
ಪುತ್ತೂರು: ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಿಂದ ಅವರ ಬೆಳ್ಳಾರೆ ಮನೆಗೆ ಕೊಂಡು ಹೋಗುವ ಸಂದರ್ಭ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪುತ್ತೂರು ಉಪವಿಭಾಗದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಉಪವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಪುತ್ತೂರು ನಗರ ಠಾಣಾ ವ್ಯಾಪ್ತಿಯ ಲಿನೆಟ್ ಜಂಕ್ಷನ್ ಬಳಿ ಬಸ್ಸೊಂದಕ್ಕೆ ಕಲ್ಲು ತೂರಾಟ ನಡೆಸಿರುವ ಘಟನೆ



















