Home ಕರಾವಳಿ Archive by category ಮಂಗಳೂರು (Page 236)

ಪಲ್ಗುಣಿ ತೀರದಲ್ಲಿ ತೇಲಿ ಬಂದ ಟನ್‍ಗಟ್ಟಳೆ ತ್ಯಾಜ್ಯ : ಸಂಘಸಂಸ್ಥೆ, ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ

ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್‍ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯ ನಡೆಸಿದರು. ಎಲ್ಲಾ ತ್ಯಾಜ್ಯಗಳನ್ನು ಸ್ವಯಂ ಸೇವಕರು ಹೆಕ್ಕಿ ಸ್ವಚ್ಛಗೊಳಿಸಿದರು.

ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು ಎಂದು ಹೇಳಿದರು” . ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ ಮೆಲ್ವಿನ್

ತಪ್ಪು ಮಾಹಿತಿ ನೀಡಿದ ಸಚಿವರು ಕ್ಷಮೆ ಯಾಚಿಸಬೇಕು : ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಹೇಳಿಕೆ

ಹತ್ತನೆ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಕದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕೈ ಬಿಟ್ಟಿಲ್ಲ ಎಂದು ಮಾಧ್ಯಮ ಗೋಷ್ಠಿಯಲ್ಲಿ ಸುಳ್ಳು ಹೇಳಿಕೆ ನೀಡಿದ ಸಚಿವ ರಾದ ಸುನಿಲ್ ಕುಮಾರ್, ಕೋಟ ಶ್ರೀ ನಿವಾಸ ಪೂಜಾರಿ ಸಾರ್ವಜನಿಕ ರಲ್ಲಿ ಕ್ಷಮೆ ಕೇಳಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಮಿಥುನ್ ರೈ ಒತ್ತಾಯಿಸಿದ್ದಾರೆ. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ

ಅವ್ಯವಸ್ಥೆಯಿಂದ ಕೂಡಿದೆ ಮಂಗಳೂರಿನ ಬಿಜೈ ಮಾರುಕಟ್ಟೆ

ಅವ್ಯವಸ್ಥೆಯಿಂದ ಕೂಡಿದೆ ಮಂಗಳೂರಿನ ಬಿಜೈ ಮಾರುಕಟ್ಟೆಅವೈಜ್ಞಾನಿಕ ಕಾಮಗಾರಿಯಿಂದಾಗಿ ಕೆಳಅಂತಸ್ತಿನಲ್ಲಿ ಮಳೆ ನೀರುಮಳೆ ನೀರು ನಿಂತು, ಸೊಳ್ಳೆ ಉತ್ಪಾದನಾ ಕೇಂದ್ರವಾಗಿದೆ ಮಾರುಕಟ್ಟೆ ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಾಣಗೊಂಡ ಮಂಗಳೂರಿನ ಬಿಜೈ ಮಾರುಕಟ್ಟೆ ಸಂಕೀರ್ಣವು ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಳೆ ನೀರು ನಿಂತು ಮಲೇರಿಯಾ ಸೊಳ್ಳೆ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದೆ. ಇದೀಗ ಕೆಳ ಅಂತಸ್ತಿನಲ್ಲಿ ಮಳೆ ನೀರಿನಿಂದಾಗಿ, ಸಿಮ್ಮಿಂಗ್ ಫುಲ್ ಆಗಿ ಕಾಣತೊಡಗಿದೆ.

ನಾರಾಯಣಗುರು ಪಠ್ಯ ಮರು ಸೇರ್ಪಡೆ, ಸಮಾಜದ ಹೋರಾಟಕ್ಕೆ ಸಂದ ಜಯ : ಬಿಲ್ಲವ ನಾಯಕರ ಸ್ಪಷ್ಟನೆ

ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ರಾಜ್ಯದ 10ನೆ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಕೈಬಿಡಲಾಗಿದ್ದ ನಾರಾಯಣ ಗುರು ವಿಷಯವನ್ನು ಮರು ಸೇರ್ಪಡೆಗೊಳಿಸಲು ಆದೇಶಿಸಿರುವುದು ಬಿಲ್ಲವ ಸಮಾಜದ ಹೋರಾಟಕ್ಕೆ ಸಂದ ಜಯವಾಗಿದೆ. ಆದರೆ ಇದರ ಲಾಭವನ್ನು ಪಡೆಯುವ ಯತ್ನ ಸ್ಥಳೀಯ ಜನಪ್ರತಿನಿಧಿಗಳು ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಬಿಲ್ಲವ ನಾಯಕರು ಸ್ಪಷ್ಟ ಪಡಿಸಿದ್ದಾರೆ.

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಮನವಿ

ಪ. ಜಾತಿ ಮತ್ತು ಪ.ಪಂಗಡದವರ 2011ರ ಜನಗಣತಿ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿವೃತ್ತಿ ನ್ಯಾಯಮೂರ್ತಿ ನಾಗ ಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸಲು ಒತ್ತಾಯಿಸಿ ಮುಖ್ಯಮಂತ್ರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವರ ಮುಖಾಂತರ ಬಿಎಸ್ಪಿ ದ.ಕ ಜಿಲ್ಲಾ ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್, ಜಿಲ್ಲಾದ್ಯಕ್ಷರು ದಾಸಪ್ಪ ಎಡಪದವು, ಜಿಲ್ಲಾ ಸಂಯೋಜಕ ರು ಗೋಪಾಲ್ ಮುತ್ತೂರು , ವಿಮಲ.ಕೆ

ಸರ್ಕಾರದಿಂದ ಅಧಿಕೃತ ಆದೇಶ ಬರುವ ತನಕ ಹೋರಾಟ ಕೈಬಿಡಲ್ಲ : ಪದ್ಮರಾಜ್ ಆರ್

ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಹೇಳಿದ್ದಾರೆ. ಆದಷ್ಟು ಶೀಘ್ರದಲ್ಲೇ ರಾಜ್ಯ

ಕಡಲು ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

ಪುರಸಭಾ ವ್ಯಾಪ್ತಿಯ ಮೂಳೂರು ತೊಟ್ಟಂ ಕಡಲ್ಕೊರೆತ ಪ್ರದೇಶಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಆಗಿದ್ದು ಎಲ್ಲೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಯೋಜನೆ ರೂಪಿಸಲಿದೆ. ಸಾರ್ವಜನಿಕ ಆಸ್ತಿ ರಕ್ಷಣೆ ಒತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ

ಕೂಳೂರು ಸೇತುವೆಯಲ್ಲಿ ಹೊಂಡಗುಂಡಿ : ಸಂಚರಿಸುವುದೇ ವಾಹನ ಸವಾರರಿಗೆ ಸವಾಲು

ಕೂಳೂರು ಸೇತುವೆಯಲ್ಲಿ ಹೊಂಡಗುಂಡಿಸಂಚರಿಸುವುದೇ ವಾಹನ ಸವಾರರಿಗೆ ಸವಾಲು ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನ ಸೇತುವೆಯಲ್ಲಿ ಬೃಹತ್ ಗಾತ್ರದ ಹೊಂಡಗಳು ಉಂಟಾಗಿದ್ದು, ವಾಹನಗಳು ಸರಾಗವಾಗಿ ಚಲಿಸಲು ಸಾಧ್ಯವಾಗದೆ ಕೆಲವು ದಿನಗಳಿಂದ ವಾಹನ ದಟ್ಟನೆ ಸಾಮಾನ್ಯವಾಗಿಬಿಟ್ಟಿದೆ.ಸೇತುವೆ ಮೇಲೆ ಹೊಂಡಗಳು ಎದ್ದಿರುವ ಕಾರಣ ವಾಹನಗಳು ನಿಧಾನವಾಗಿ ಚಲಿಸುತ್ತಿದ್ದು, ಬೆಳಗ್ಗೆ ಮತ್ತು ಸಂಜೆ ಕಿಲೋಮೀಟರ್ ಗಟ್ಟಲೆ ವಾಹನಗಳ ಸಾಲು ಕಾಣಲಾರಂಬಿಸಿದೆ. ಮಳೆ ಬರುವಾಗ ಸೇತುವೆಯಲ್ಲಿ ನೀರು