ದ. ಕ. ಜಿಲ್ಲಾ ಪೌರ ಕಾರ್ಮಿಕರ ಸಂಘದ ವತಿಯಿಂದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲು ನಡೆಯುತ್ತಿರುವ ಅನಿರ್ಧಿಷ್ಟ ಪ್ರತಿಭಟನಾ ಧರಣಿಗೆ ಬಿಎಸ್ ಪಿ ದ. ಕ. ಜಿಲ್ಲಾ ವತಿಯಿಂದ ಬೆಂಬಲ ವ್ಯಕ್ತ ಪಡಿಸಲಾಯಿತು. ಸಭೆಯನ್ನು ಉದ್ದೇಶಿಸಿ ಬಿಎಸ್ ಪಿಯ ರಾಜ್ಯ ಕಾರ್ಯದರ್ಶಿ ಕಾಂತಪ್ಪ ಅಲಂಗಾರ್ ಮತ್ತು ಬಿಎಸ್ ಪಿ ಜಿಲ್ಲಾ ಅಧ್ಯಕ್ಷ ದಾಸಪ್ಪ ಎಡಪದವುಮಾತನಾಡಿದರು. ಪೌರ
ಯುಎಇ: ಜನಪ್ರಿಯ ಸೌಂದರ್ಯ ಸ್ಪರ್ಧೆ “ಮಿಸ್ಟರ್ ಅಂಡ್ ಮಿಸೆಸ್ ಯುಎಇ ಇಂಟರ್ ನ್ಯಾಶನಲ್ ಸ್ಪರ್ಧೆಯನ್ನು ಪುರುಷರು ಮತ್ತು ಮಹಿಳೆಯರಿಗಾಗಿ ಆಯೋಜನೆ ಮಾಡಿದ್ದು, ಮಂಗಳೂರಿನ ಬೋಳಾರದ ಪ್ರಾಪ್ತಿ ರಿತೇಶ್ ಶೆಟ್ಟಿ ಅವರು ಶೈನಿಂಗ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ದುಬೈನಲ್ಲಿರುವ ಯುಎಇಯ ಸಿಲಿಕಾನ್ ಓಯಸಿಸ್‍ನ ರಾಡಿಸನ್ ಪಂಚತಾರ ಹೋಟೆಲ್‍ನ ಸಭಾಂಗಣದಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಪ್ರಾಪ್ತಿ ರಿತೇಶ್ ಶೆಟ್ಟಿ ಯವರು ಅಬುಧಾಬಿ ಯ ಶಾಲೆಯಲ್ಲಿ
ಕಳೆದ ನಾಲ್ಕು ದಿನಗಳಿಂದ ಮಳೆ ಗಾಳಿ ಅನ್ನದೆ ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳುವ ಕೆಲಸವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ಕಾಮತ್ ಅವರ ತಂಡ ಇಂದು ಮಾಡಿತು. “ನಗರವನ್ನು ಸ್ವಚ್ಚವಾಗಿ ಇಡುವಲ್ಲಿ ಪೌರ ಕಾರ್ಮಿಕರ ಪಾಲು ಅತಿ ದೊಡ್ಡದು. ಪೌರ ಕಾರ್ಮಿಕರನ್ನು ಗೌರವಯುತವಾಗಿ ಕಾಣುವುದು ನಮ್ಮೆಲ್ಲರ ಕರ್ತವ್ಯ. ಹಾಗಿರುವಾಗ ಯಾವುದೇ ಚುನಾಯಿತ ಪ್ರತಿನಿಧಿಗಳು ಮುಷ್ಕರ ನಿರತ ಪೌರ ಕಾರ್ಮಿಕರನ್ನು ಭೇಟಿಯಾಗಿ ಸಾಂತ್ವನ ಹೇಳದೆ
ಮಂಗಳೂರಿನ ಸ್ಮಾರ್ಟ್ ಸಿಟಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದೀಗ ಜನತೆಗೆ ತೊಂದರೆ ಉಂಟಾಗಿದೆ. ಅಧಿಕಾರಿಗಳು ತಪ್ಪು ಮಾಡಿದ್ದಲ್ಲಿ ಜನಪ್ರತಿನಿಧಿಗಳು ಕೇಳಬೇಕು, ಸಾಮಾನ್ಯ ಜನರಿಗೆ ನ್ಯಾಯ ಎಲ್ಲಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪೂರ್ವ ಆಲೋಚನೆ, ಪೂರ್ವ ಯೋಜನೆ ಬೇಕು.ನಗರದಲ್ಲಿ ಚರಂಡಿ, ರಾಜಕಾಲುವೆಗಳ ಹೂಳೆತ್ತುವ ಕೆಲಸ ನಾಲ್ಕು ತಿಂಗಳ ಹಿಂದೆಯೇ ಆಗಬೇಕಿತ್ತು. ಮೇ ತಿಂಗಳಲ್ಲಿ ರಸ್ತೆ
ಮಂಗಳೂರು ಪಾಲಿಕೆಯ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಅವರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ತೆಗೆದುಕೊಳ್ಳುವುದು ಸರಿಯಾದ ಕ್ರಮವಲ್ಲ. ಪೌರಕಾರ್ಮಿಕರು ಸರಿಯಾದ ಕೆಲಸ ಮಾಡಿದ್ದಲ್ಲಿ ಅವರನ್ನು ಖಾಯಂಗೊಳಿಸಿ. ಖಾಸಗಿ ಕಚೇರಿ ಕೆಲಸ ನಡೆಸುದಾದಲ್ಲಿ ಲೇಬರ್ ಡಿಪಾರ್ಟ್‍ಮೆಂಟ್ ಇದೆ. ಹಾಗಿರುವಾಗ
ಮಂಗಳೂರು ನಗರದಲ್ಲಿ ಕಳೆದ ಒಂದು ವಾರದಿಂದ ನಡೆಸಲಾದ ಕಾರ್ಯಾಚರಣೆ ವೇಳೆ ಸೂಕ್ತ ದಾಖಲೆಗಳನ್ನು ಹೊಂದಿರದ ಸುಮಾರು ೩೦೦ ಮಂದಿ ವಲಸಿಗರನ್ನು ಪತ್ತೆ ಹಚ್ಚಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಅವರೆಲ್ಲರೂ ನಿಖರವಾಗಿ ಅಕ್ರಮ ವಲಸಿಗರು ಎಂದು ಹೇಳಲಾಗದಿದ್ದರೂ ಈವರೆಗಿನ ಪರಿಶೀಲನೆ ಸಂದರ್ಭದಲ್ಲಿ ಸೂಕ್ತ ದಾಖಲೆ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಪೈಕಿ ೨೫೦ ಮಂದಿಯನ್ನು ನಗರದ ರೋಸಾರಿಯೊ ಸಭಾಂಗಣಕ್ಕೆ ಕರೆತರಲಾಗಿದ್ದು, ಇಂದು
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ವಿಟ್ಲದ ಸಿಂಹಗಿರಿ ಲಯನ್ಸ್ ಭವನದಲ್ಲಿ ನಡೆಯಿತು. ನೂತನ ಅಧ್ಯಕ್ಷ ಸುದೇಶ್ ಭಂಡಾರಿ ಎರ್ಮೆನಿಲೆ, ಕಾರ್ಯದರ್ಶಿ ಜಲಜಾಕ್ಷಿ ಬಾಲಕೃಷ್ಣ, ಕೋಶಾಧಿಕಾರಿ ರವಿಶಂಕರ್ ಅವರಿಗೆ ಲಯನ್ಸ್ ಕ್ಲಬ್ ಪ್ರಥಮ ಉಪರಾಜ್ಯಪಾಲ ಮೆಲ್ವಿನ್ ಡಿ ಸೋಜ ಪದಗ್ರಹಣಆ ನಡೆಸಿಕೊಟ್ಟರು. ಬಳಿಕ ಮಾತನಾಡಿದ ಅವರು ವಿಟ್ಲ ಲಯನ್ಸ್ ಕ್ಲಬ್ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಜಿಲ್ಲೆಗೆ ವಿಟ್ಲ ಲಯನ್ಸ್ ಕ್ಲಬ್
“ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೀನಕಳಿಯ, ಕೊಟ್ಟಾರ, ಹೊಸಬೆಟ್ಟು ಲೋಟಸ್ ಪಾರ್ಕ್ ಪ್ರದೇಶದಲ್ಲಿ ಮೊದಲ ಮಳೆಯಲ್ಲೇ ಕೃತಕ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಜನರು ಪಡಬಾರದ ಸಂಕಷ್ಟ ಅನುಭವಿಸಿದ್ದಾರೆ ಎಂದು ಮಂಗಳೂರು ಉತ್ತರ ಮಾಜಿ ಶಾಸಕ ಮೊಯಿದೀನ್ ಬಾವಾ ಆರೋಪಿಸಿದ್ದಾರೆ. ಸುರತ್ಕಲ್‍ನಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, , “2500 ಕೋಟಿ ರೂ. ಸ್ಮಾರ್ಟ್ ಸಿಟಿ ಹೆಸರಲ್ಲಿ ಹಣ ಬಂದಿದೆ. ಆದರೆ ಆ ಹಣ ಎಲ್ಲಿ ಹೋಯಿತು
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ.ಕ.ಜಿಲ್ಲಾ ಸಮಿತಿಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ರೆವರೆಂಡ್ ಹೆರ್ಮನ್ ಮೊಗ್ಲಿಂಗ್ ಸ್ಮರಣೆ ಕಾರ್ಯಕ್ರಮವು ಮಂಗಳೂರು ಥಿಯೋಲಾಜಿಕಲ್ ಕಾಲೇಜಿನಲ್ಲಿ ನಡೆಯಿತು. ಕನ್ನಡದ ಪ್ರಥಮ ಪತ್ರಿಕೆ ಮಂಗಳೂರ ಸಮಾಚಾರ ಪತ್ರಿಕೆಯ ಸಂಸ್ಥಾಪಕ ಸಂಪಾದಕ ರೆ.ಹೆರ್ಮನ್ ಮೋಗ್ಲಿಂಗ್ ಅವರ ಪ್ರತಿಮೆಗೆ ಮಾಜಿ ಶಾಸಕ ಜೆ.ಆರ್.ಲೊಬೋ ಅವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಜೆ.ಆರ್.ಲೋಬೋ ಅವರು,
ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣ ಪೂರ್ತಿ ನೀರಿನಲ್ಲಿ ಮುಳುಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ


























