ಕೊಲೆಗೆ ಸ್ಕೆಚ್ ಹಾಕಿದ್ದಾರೆಂದು ಸುದ್ದಿಯಾಗಿದ್ದ ಬೆಂಗಳೂರಿನ ಉದ್ಯಮಿ, ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸೋದರ ಗುಣರಂಜನ್ ಶೆಟ್ಟಿ ಅವರನ್ನು ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕೊಲೆಗೆ ಸ್ಕೆಚ್ ವಿಚಾರದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರಿಗೆ ಗೃಹ ಇಲಾಖೆಯಿಂದ ಹೊಣೆ ನೀಡಲಾಗಿದೆ.
ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು. ಹಿಂದು ಕಾರ್ಯಕರ್ತ ಹರ್ಷನ ಕತ್ತು ಕೊಯ್ದು ಅದರ ವಿಡಿಯೋವನ್ನು ಆತನ ಸೋದರಿಗೆ ಕಳಿಸಲಾಗಿತ್ತು.
ನಗರದ ಪಂಪ್‍ವೆಲ್ ಬಸ್ಸು ನಿಲುಗಡೆಯಾಗುವ ಸಮೀಪದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಒಳಗಡೆಯಿಂದ ಭಾರೀ ಪ್ರಮಾಣದಲ್ಲಿ ನೀರು ಹೊರಚಿಮ್ಮುತ್ತಿದೆ.ಬಿರುಕು ಬಿಟ್ಟಿರುವ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ನೀರು ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಯ ಕೆಳಭಾಗದಲ್ಲಿರುವ ನೀರು ಸರಬರಾಜಿನ ಪೈಪ್ ಒಡೆದಿದ್ದರಿಂದ ರಸ್ತೆ ಮಧ್ಯೆ ಬಿರುಕು ಮೂಡಿದೆ ಎನ್ನಲಾಗುತ್ತಿದೆ.ಪಂಪ್‍ವೆಲ್ ಮೇಲ್ಸೇತುವೆಯ
ಕೊಚ್ಚಿನ್: ಐಪಿಎಲ್ ಮಾದರಿಯಂತೆ ವಾಲಿಬಾಲ್‌ನಲ್ಲೂ ಹೊಸ ಲೀಗ್ ಆರಂಭವಾಗಿದ್ದು, ಮೊದಲ ಸೀಸನ್ ನ ಹರಾಜು ಪ್ರಕ್ರಿಯೆ ಇಂದು ಕೊಚ್ಚಿನ್ ನಲ್ಲಿ ನಡೆದಿದೆ. ಮಂಗಳೂರಿನ ಆಟಗಾರ ಅಶ್ವಲ್ ರೈ ಅವರು ದಾಖಲೆಯ ಮೊತ್ತಕ್ಕೆ ಕೋಲ್ಕತ್ತಾ ಥಂಡಲ್ ಬೋಲ್ಟ್ಸ್ ತಂಡದ ಪಾಲಾಗಿದ್ದಾರೆ. ಅಶ್ವಲ್ ರೈ ಅವರನ್ನು 15 ಲಕ್ಷ ರೂ. ಬೆಲೆಗೆ ಕೋಲ್ಕತ್ತಾ ತಂಡ ಖರೀದಿಸಿತು. ಇವರಂತೆ ಕಾರ್ತಿಕ್ ಎ ಮತ್ತು ಜೆರೋಮ್ ವಿನಿತ್ ಅವರನ್ನು ಪ್ರೈಮ್ ವಾಲಿಬಾಲ್ ಹರಾಜಿನಲ್ಲಿ ಕ್ರಮವಾಗಿ ಕೊಚ್ಚಿ ಬ್ಲೂ
ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾನ್ಯ ಗೃಹ ಸಚಿವರಾದ ಅರಗ ಜ್ಞಾನೇಂದ್ರ ಅವರನ್ನು ದಕ್ಷಿಣಕನ್ನಡ ಜಿಲ್ಲೆಯ ಶಾಸಕರ ನಿಯೋಗದಿಂದ ಭೇಟಿ ಮಾಡಿ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಘಟನೆಗಳು ಅಲ್ಲಲ್ಲಿ ನಡೆಯತ್ತಿದ್ದು, ಉಪ್ಪಿನಂಗಡಿಯಲ್ಲಿ ಮಂಗಳವಾರ ನಡೆದ ಘಟನೆಯನ್ನು ಪ್ರಸ್ತಾಪಿಸಲಾಯಿತು. ಪೋಲೀಸರ ಮೇಲೆ ಹಲ್ಲೆ, ಠಾಣೆಗೆ ಪ್ರವೇಶಿಸಿ ಸಿಬ್ಬಂದಿಗಳ ಮೇಲೆ ದುರ್ವರ್ತನೆ ತೋರಿದ ಆರೋಪಿಗಳ ವಿರುದ್ಧ ಕಠಿಣ ಕಾನೂನು
ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು
ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ
ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಂಪನಿಯಾದ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್‍ನ ವೆಲ್ಡಿಂಗ್ ಎಲೆಕ್ಟ್ರೋಡ್ ಮತ್ತು ಇನ್ವರ್ಟರ್ ಬ್ಯಾಟರಿ ತಯಾರಕರು ಬೈಕಂಪಾಡಿಯ ಕೆನರಾಇಂಡಸ್ಟ್ರೀಸ್ ಅಸೋಸಿಯೇಶನ್‍ನಲ್ಲಿ, ತನ್ನ ಕಂಪನಿಯ ರಾಯಭಾರಿಯನ್ನು ಪರಿಚಯಿಸುವ ಹಾಗೂ ಪ್ರಚಾರ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಪೆನಿಯ ಬ್ರಾಂಡ್ ಅಂಬಾಸಿಡರ್ ಖ್ಯಾತ ಚಲನಚಿತ್ರ ನಟ ಪೃಥ್ವಿ ಅಂಬರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು
ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ
It is a great pleasure to us to inform you that, Mangalore University, Youth Red Cross Wing has been adjudged as the Best Performing University in recognition of Youth Development Activities and support in strengthening Youth Red Cross activities at Mangalore University, Mangalagangotri at all levels for the year 2019-20. The award was distributed by […]




















