Home ಕರಾವಳಿ Archive by category ಮಂಗಳೂರು (Page 244)

ಮಂಗಳೂರು: ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ

ಮಂಗಳೂರು: ಪತ್ರಕರ್ತ, ಕನ್ನಡ ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರನೋರ್ವನ ಮೇಲೆ ನಿನ್ನೆ ಸಂಜೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ನಗರದಲ್ಲಿ ನಡೆದಿದೆ. ಖಾಸಗಿ ನ್ಯೂಸ್ ಚಾನೆಲ್‍ನ ದ.ಕ ಜಿಲ್ಲಾ ವರದಿಗಾರ ಸುಖ್‍ಪಾಲ್ ಪೊಳಲಿ ಹಲ್ಲೆಗೊಳಗಾದ ಪತ್ರಕರ್ತ. ನಿನ್ನೆ ಸಂಜೆ ವ್ಯಕ್ತಿಯೊಬ್ಬ ಏಕಾಏಕಿ ಬಂದು ಸುಖ್‍ಪಾಲ್ ಪೊಳಲಿ ಮೇಲೆ ಮಾರಾಕಾಯುಧದಿಂದ ತಲೆಯ ಭಾಗಕ್ಕೆ ಹಲ್ಲೆ ನಡೆಸಲಾಗಿದ್ದು, ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪೂರ್ಣ ಹಿನ್ನೆಲೆ ಶಾಸಕ ಡಾ. ಭರತ್ ಶೆಟ್ಟಿ ಭೇಟಿ, ಪರಿಶೀಲನೆ

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಹಾಗೂ ಬೊಂದೇಲ್ – ಮಂಗಳ ಜ್ಯೋತಿ ಸಂಪರ್ಕಿಸುವ ಪಚ್ಚನಾಡಿ ಮುಖ್ಯ ರಸ್ತೆ, ಎರಡೂ ಬದಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿ ವೇಗ ಪಡೆದು ಪೂರ್ಣ ಗೊಂಡ ಹಿನ್ನೆಲೆಯಲ್ಲಿ ಲೋಕಾರ್ಪಣೆಗೊಳಿಸುವ ಮುನ್ನ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರ ಸೂಚನೆ ಮೇರೆಗೆ ಪರಿಶೀಲನೆ ನಡೆಸಲು ಪಚ್ಚನಾಡಿ ರೈಲ್ವೇ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈರವರು ಭೇಟಿ ನೀಡಿದರು.   ಇವರಿಗೆ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿ ನಿಧನ

ಹಿರಿಯ ಕಾಂಗ್ರೇಸಿಗರು, ಸಹಕಾರಿ ದುರೀಣರಾದ ಗಂಜಿಮಠ ನಾರಾಯಣ ಪೂಜಾರಿಯವರು ನಿನ್ನೆ ರಾತ್ರಿ ನಿಧನ ಹೊಂದಿರುತ್ತಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಮತ್ತು ಕಾಂಗ್ರೆಸ್ ನಾಯಕ ಗಣೇಶ್ ಪೂಜಾರಿ ಸಹಿತ 4 ಗಂಡು ಮತ್ತು 2 ಹೆಣ್ಣು ಮಕ್ಕಳನ್ನು ಅಗಲಿರುತ್ತಾರೆ.ಶ್ರೀಯುತರು ಸುಮಾರು 18 ವರ್ಷಗಳ ಕಾಲ ಗಂಜಿಮಠ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಮತ್ತು ಸುಮಾರು 30 ವರ್ಷಗಳ ಕಾಲ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ದ. ಕ. ಜಿಲ್ಲಾ

ಮಂಗಳೂರು: ಅಪ್ರಾಪ್ತ ಬಾಲಕಿಯ ಶವ ಚರಂಡಿಯಲ್ಲಿ ಪತ್ತೆ

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಹತ್ಯೆಗೈದು ಮೃತದೇಹವನ್ನು ಚರಂಡಿಗೆ ಎಸೆದಿರುವ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಉಳಾಯಿಬೆಟ್ಟು ಪರಾರಿ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ. ಸಂಜೆ ನಾಲ್ಕು ಗಂಟೆಯ ವೇಳೆ ಪರಾರಿ ಸಮೀಪದ ಕಾರ್ಖಾನೆಯ ಕಾರ್ಮಿಕರೊಬ್ಬರ ಮಗು ನಾಪತ್ತೆಯಾಗಿದ್ದಾಳೆ. ಬಾಲಕಿಯ ನಾಪತ್ತೆಯಿಂದ ಆತಂಕಕ್ಕೊಳಗಾದ ಪೊಷಕರು ಹಾಗೂ ಇತರ ಕಾರ್ಮಿಕರು ಕಾರ್ಖಾನೆ ಸೇರಿದಂತೆ ಹಲವೆಡೆಗಳಲ್ಲಿ ಶೋಧ ನಡೆಸಿದ್ದು, ಈ ವೇಳೆ ಕಾರ್ಖನೆಯ ಪಕ್ಕದ ಚರಂಡಿಯಲ್ಲಿ

ಕನ್ನಡ ಸಾಹಿತ್ಯ ಪರಿಷತ್‌ ದ.ಕ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ  ಡಾ.ಎಂ.ಪಿ.ಶ್ರೀನಾಥ್ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಉಪನ್ಯಾಸಕ  ಹಾಗೂ ಲೇಖಕ ಡಾ.ಎಂ.ಪಿ.ಶ್ರೀನಾಥ್ ಅವರು ಆಯ್ಕೆಯಾಗಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.ಭಾನುವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಹತ್ತು ಕೇಂದ್ರಗಳಲ್ಲಿ ಮತದಾನ ನಡೆದಿದ್ದು, ಶೇ.44.8ರಷ್ಟು ಸದಸ್ಯರು ಮತದಾನ ಮಾಡಿದ್ದಾರೆ.

ಚುನಾವಣಾ ಕಣದಿಂದ ಹಿಂದಕ್ಕೆ ಸರಿದ ಡಾ ಎಂ. ಎನ್. ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆ ಸ್ಪರ್ಧಾಕಣದಿಂದ ಎಸ್‍ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ. ಎನ್. ರಾಜೇಂದ್ರ ಕುಮಾರ್ ಅವರು ಹಿಂದೆ ಸರಿದಿದ್ದಾರೆ. ಶನಿವಾರ ಅಧಿಕೃತವಾಗಿ ಘೋಷಣೆ ಮಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ ಪಕ್ಷಾತೀತನಾಗಿ ಉಳಿಯುವ ಬಯಕೆ ನನ್ನದು, ಹೀಗಾಗಿ ರಾಜಕೀಯ ದಿಂದ ದೂರವಿದ್ದು, ಸಹಕಾರಿ ಕ್ಷೇತ್ರದ ಉನ್ನತಿಗೆ ಶ್ರಮಿಸುತ್ತೇನೆ ಎಂದರು. ಕಳೆದ 35 ವರ್ಷಗಳಿಂದ ಸಹಕಾರ ರಂಗದಲ್ಲಿದ್ದೇನೆ. ರಾಜಕೀಯ ಬೇಡ, ಸಹಕಾರಿ ಕ್ಷೇತ್ರಕ್ಕೂ ರಾಜಕೀಯ ತರುವುದಿಲ್ಲ ಎಂದು

ಕೋಟಾ ಶ್ರೀನಿವಾಸ ಪೂಜಾರಿ ಅವರಿಂದ ನಾಮಪತ್ರ ಸಲ್ಲಿಕೆ

ಮಂಗಳೂರು, ನ.20(ಕ.ವಾ):- ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ,

ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಜನಸ್ವರಾಜ್ ಸಮಾವೇಶ

ಮಂಗಳೂರು: ಮುಂಬರುವ 25 ಸ್ಥಾನಗಳಿಗೆ ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಗರಿಷ್ಠ ಸಂಖ್ಯಾಬಲವನ್ನು ಹೊಂದಲಿದೆ ಎಂದು ಮಾಜಿ ಮುಖ್ಯ ಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಅಡ್ಯಾರ್ ಗಾರ್ಡನ್ ಸಭಾಂಗಣ ದಲ್ಲಿಂದು ಹಮ್ಮಿಕೊಂ ಡ ಜನಸ್ವರಾಜ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಮಸೂದೆ ಅಂಗೀಕಾರ ವಾಗಬೇಕಾ ದರೆ.ಎರಡೂ

ಮಣ್ಣಿನ ಮಕ್ಕಳ ಹೋರಾಟಕ್ಕೆ ಮಣಿದ ಮೋದಿ ಸರಕಾರ, ಮಂಗಳೂರಿನಲ್ಲಿ ಸಂಭ್ರಮಾಚರಣೆ

ಮಣ್ಣಿನ ಮಕ್ಕಳ ಹೋರಾಟಕ್ಕೆ ಕೇಂದ್ರದ ನರೇಂದ್ರ ಮೋದಿ ಸರಕಾರವು ಮಣಿದಿದ್ದು,ಇದು ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ವಿಜಯವಾಗಿದೆ.ಈ ನಿಟ್ಟಿನಲ್ಲಿ ರೈತ ಕಾರ್ಮಿಕ ದಲಿತ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ಮಂಗಳೂರಿನಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ನಾಯಕರಾದ ರವಿಕಿರಣ್ ಪೂನಚ,ಜಿಲ್ಲಾ ನಾಯಕರಾದ ಕ್ರಷ್ಣಪ್ಪ ಸಾಲ್ಯಾನ್,ಓಸ್ವಾಲ್ಡ್ ಪ್ರಕಾಶ್, DYFI ರಾಜ್ಯಾಧ್ಯಕ್ಷರಾದ