Home ಕರಾವಳಿ Archive by category ಮಂಗಳೂರು (Page 249)

ನ.12 ರಂದು ಭೇಟಿ ಕನ್ನಡ ಆಲ್ಬಾಂ ಸಾಂಗ್ ಯೂಟ್ಯೂಬ್‌ನಲ್ಲಿ ರಿಲೀಸ್

ಮನುಷ್ಯ ಮತ್ತು ಶ್ವಾನದ ನಡುವೆ ಹೆಣೆದ ಕಥೆಯೊಂದಿಗೆ ತಯಾರಾದ ವಿಶಿಷ್ಠ ಶೈಲಿಯ ಹಾಡೊಂದು ಬಿಡುಗಡೆಗೆ ಸಿದ್ಧವಾಗಿದೆ. ಮಂಗಳೂರಿನ ವಿವೇಕ್ ಗೌಡ ನಿರ್ದೇಶಿಸಿ, ನಿರ್ಮಿಸಿರುವ ಭೇಟಿ ಎಂಬ ಹೆಸರಿನ ಕನ್ನಡ ವಿಡಿಯೋ ಆಲ್ಬಾಂ ಸಾಂಗ್ ನವೆಂಬರ್ 12 ರಂದು ಯೂಟ್ಯೂಬ್‌ನಲ್ಲಿ ರಿಲೀಸ್ ಆಗಲಿದೆ. ಶ್ವಾನ ಮತ್ತು ಮನಷ್ಯನ ನಡುವೆ ಸುತ್ತ ಹೆಣೆದ ಕಥೆಯೊಂದು ಆಲ್ಬಾಂ ಸಾಂಗ್ ಮೂಲಕ

ನ.2೦ ರಂದು ಮಂಗಳಾ ಕ್ರೀಡಾಂಗಣದಲ್ಲಿಅಥ್ಲೆಟಿಕ್ ಕ್ರೀಡಾಕೂಟ

ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ನವೆಂಬರ್ 20 ರಂದು ಆಯೋಜಿಸಲಾಗಿದೆ ಎಂದು ಗೌರವ ಕಾರ್ಯದರ್ಶಿ ತಾರನಾಥ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ರೀಡಾಕೂಟವು ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಂಡು, ಸಂಜೆ 4 ಗಂಟೆಗೆ ಕ್ರೀಡಾಕೂಟದ ಸಮಾರೋಪ ನಡೆಯಲಿದೆ. ಇದರದಲ್ಲಿ ಬಾಲಕ ಬಾಲಕಿಯರ 12 ರಿಂದ 16 ರ ವಯೋಮಿತಿಯ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆ : ರಾಜ್ಯದಿಂದ 15 ಮಂದಿ ಆಯ್ಕೆ

ಬೆಂಗಳೂರು, ನ 10; ನಿರುದ್ಯೋಗ, ಬೆಲೆ ಏರಿಕೆ ಸೇರಿದಂತೆ ಜನಪರ ಸಮಸ್ಯೆಗಳ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ “ ಯಂಗ್ ಇಂಡಿಯಾ ಕಿ ಬೋಲ್ “ [ಯುವ ಭಾರತ ಮಾತನಾಡಿ] ಎಂಬ ರಾಜ್ಯ ಮಟ್ಟದ ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ನಡೆದ ಭಾಷಣ ಸ್ಪರ್ಧೆಯಲ್ಲಿ ಅಂತಿಮವಾಗಿ 15 ಮಂದಿ ಆಯ್ಕೆಯಾಗಿದ್ದಾರೆ ಎಂದು ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ

ಅಜಯ್‌ ಕೌಶಿಕ್ ನೊರೋನ್ಹಾಗೆ ಪಿಹೆಚ್‌ಡಿ ಪದವಿ

ಮುಕ್ಕ:  ಶ್ರೀನಿವಾಸ್‌ ವಿಶ್ವವಿದ್ಯಾಲಯವು ಅಜಯ್‌ ಕೌಶಿಕ್ ನೊರೋನ್ಹಾರಿಗೆ ಮೆಕ್ಯಾನಿಕಲ್‌ ಇಂಜಿನಿಯರಿಂಗ್‌ ವಿಭಾಗದಲ್ಲಿ ಪಿಹೆಚ್‌ಡಿ ಪದವಿಯನ್ನು ನೀಡಿದೆ. ಎ ಸ್ಟಡಿ ಆನ್‌ ಇಪ್ಲಿಮೆಂಟೇಶನ್‌ ಆಫ್‌ ಲೀನ್‌ ಸಿಕ್ಸ್‌ ಸಿಗ್ಮಾ ಸ್ಟ್ರಾಟರ್ಜಿ ಇನ್‌ ಡೆಂಟಲ್‌ ಹಾಸ್ಪಿಟಲ್‌ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿಯನ್ನು ನೀಡಲಾಗಿದೆ. ಇವರು ಶ್ರೀನಿವಾಸ್‌ ವಿಶ್ವವಿದ್ಯಾಲಯದ ಡಾ. ಸುಮಾ ಭಟ್‌ ಹಾಗೂ ಸಂತ ಜೋಸೆಫ್‌ ಇಂಜಿನಿಯರಿಂಗ್‌ ಕಾಲೇಜಿನ ಡಾ. ಶ್ರೀರಂಗ ಭಟ್‌ ರವರ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ : ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಸನ್ಮಾನ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಚಂದ್ರ ಬೈಕಂಪಾಡಿ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ರಾಮಚಂದ್ರ ಬೈಕಂಪಾಡಿ ಅವರ ಗಣನೀಯ ಸೇವೆಯನ್ನು ಗುರುತಿಸಿ ಕರ್ನಾಟ ರಾಜ್ಯವು ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಆ ಹಿನ್ನೆಲೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮೊಗವೀರ ಮಾಸಪತ್ರಿಕೆಯ ಸಂಪಾದಕರು

ಪದ್ಮಶ್ರೀ ಪುರಸ್ಕಾರಗೊಂಡ ಹಾಜಬ್ಬ ಶಾಲೆ ಹಾಗೂ ಮನೆಯಲ್ಲಿ ಸಂಭ್ರಮ

ಹರೇಕಳ ಹಾಜಬ್ಬ ಅವರು ಕಟ್ಟಿ ಬೆಳೆಸಿದ ನ್ಯೂಪಡ್ಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಶಾಲೆ ಯಜಮಾನನಿಗೆ ಪ್ರಶಸ್ತಿ ಪ್ರಧಾನ ನಡೆಯುವ ವೇಳೆ ಬ್ಯಾಂಡ್ ಹಾಗೂ ಚಪ್ಪಾಳೆ ಮೂಲಕ ಹಾಜಬ್ಬರನ್ನು ಹಾಡಿ ಹೊಗಳುವ ಮೂಲಕ ಗೌರವ ಸಮರ್ಪಿಸಿದರು. ಮನೆಯಲ್ಲಿ ಪತ್ನಿ , ಮೂವರು ಮಕ್ಕಳು ಹಾಗೂ ಸಂಬಂಧಿಕರು ಮೊಬೈಲ್ ಮೂಲಕ ಮನೆ ಯಜಮಾನ ಪದ್ಮಶ್ರೀ ಪುರಸ್ಕಾರ ಪಡೆಯುವುದನ್ನು ನೋಡಿ ಸಂಭ್ರಮಿಸಿದರು. ಶಾಲಾ ವಿದ್ಯಾರ್ಥಿ ಗಳಿಗೆ ಹರೇಕಳ ಹಾಜಬ್ಬನವರು ಪದ್ಮಶ್ರೀ ಪುರಸ್ಕಾರ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದ.ಕ. ಜಿಲ್ಲಾಡಳಿತದಿಂದ ಸನ್ಮಾನ

ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.

ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರು ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದು ಅವರನ್ನು ಅವರ ಅಭಿಮಾನಿಗಳು ಸ್ವಾಗತಿಸಿದರು. ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ `ಪದ್ಮಶ್ರೀ’ ಸೋಮವಾರ ಪ್ರದಾನ ಮಾಡಲಾಯಿತು. ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ನೂಕುನುಗ್ಗಲು ಉಂಟಾಯಿತು. ಗ್ರಾಮೀಣ

ಉಜಿರೆಯಲ್ಲಿ ರಾಜ್ಯಮಟ್ಟದ ಸಾಹಿತ್ಯ ಸಮ್ಮೇಳನ- ಪೂರ್ವ ತಯಾರಿ ಸಭೆ

ಉಜಿರೆಯಲ್ಲಿ ಜ.8,9 ರಂದು ಎರಡು ದಿನಗಳ ಕಾಲ ನಡೆಯಲಿರುವ ಅಖಿಲಭಾರತ ಸಾಹಿತ್ಯ ಪರಿಷತ್ತಿನ ರಾಜ್ಯ ಮಟ್ಟದ ಮೂರನೇ ರಾಜ್ಯ ಸಮ್ಮೇಳನದ ಕುರಿತಾಗಿ ಪೂರ್ವ ತಯಾರಿ ಸಭೆ ಇತ್ತೀಚೆಗೆ ಉಜಿರೆ ಶಾರದ ಮಂಟಪದಲ್ಲಿ ನಡೆಯಿತು.ಅಖಿಲಭಾರತ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ರಘುನಂದನ್ ಭಟ್ ಈ ಸಂದರ್ಭ ಮಾತನಾಡಿ ಉಜಿರೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ರಾಜ್ಯದಾದ್ಯಂತ ಅತೀ ಹೆಚ್ಚು ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳಲು ಆಸಕ್ತರು ಕಾತುರದಿಂದ ಕಾಯುತ್ತಿದ್ದಾರೆ. ರಾಜ್ಯದ

ದ.ಕ. ಜಿಲ್ಲೆಯಲ್ಲಿ ಅಂಗನವಾಡಿ ಶಾಲೆ ಆರಂಭ

ಕೊರೊನಾ ಆತಂಕ ಮರೆಯಾಗುತ್ತಿದ್ದಂತೆ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿದ್ದು, ಬರೋಬ್ಬರಿ ಒಂದೂವರೆ ವರ್ಷಗಳ ಬಳಿಕ ಅಂಗನವಾಡಿಗಳಲ್ಲಿ ಮಕ್ಕಳ ಕಲರವ ಮೊಳಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಅಂಗನವಾಡಿ ಶಾಲೆಗಳನ್ನು ಆರಂಭಿಸಲಾಗಿದೆ. ಇಂದು ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಅಂಗನವಾಡಿ ಶಾಲೆಯ ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳನ್ನು ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.