ದೇವಸ್ಥಾನ ಸಹಿತ ಪ್ರಾರ್ಥನಾ ಮಂದಿಗಳ ದ್ವಂಸ ವಿರೋಧಿ ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಪಡುಬಿದ್ರಿ ಬೀಡು ಬಳಿಯಿಂದ ಪಡುಬಿದ್ರಿ ಮುಖ್ಯ ಪೇಟೆಯವರಗೆ ನಡೆದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ನೂರಾರು ಮಂದಿ ಕಾರ್ಯಕರ್ತರು ಪಾಲ್ಗೊಂಡಿದ್ದು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು
ಮಂಗಳೂರಿನ ಕೊಂಚಾಡಿಯ ಲ್ಯಾಂಡ್ ಲಿಂಕ್ಸ್ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾದ ಸರ್ಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಿದರು. ಇದೇ ವೇಳೆ ಮಾತನಾಡಿದ ಶಾಸಕರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ. ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ. ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ
ಮಂಗಳೂರು: ಸಿದ್ದರಾಮಯ್ಯರೇ ಒಬ್ಬ ದೊಡ್ಡ ಭಯೋತ್ಪಾದಕ ಅನ್ನೋದು ನನಗೆ ಅನಿಸುತ್ತೆ ಎಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರೆಸ್ಸೆಸ್ಸಿಗರು ತಾಲಿಬಾನಿಗಳಿದ್ದಂತೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿ ಈ ರೀತಿ ಪ್ರತಿಕ್ರಿಯಿಸಿದರು. ಅವರ ಅತಂತ್ರ ಸ್ಥಿತಿಯಲ್ಲಿ ಅವರು ಇಂಥ ಹೇಳಿಕೆಗಳನ್ನು ಕೊಡ್ತಿದ್ದಾರೆ, ತಾಲಿಬಾನ್ ಸಂಸ್ಕೃತಿ ಅವರದ್ದು, ಅವರು
ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ
ಸುರತ್ಕಲ್ ಎನ್.ಐ.ಟಿ.ಕೆ ಸಮೀಪ ಜೀಪಿನಲ್ಲಿ ತೆರಳುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ತಡೆದು ದಾಂಧಲೆ ನಡೆಸಿ ಹಲ್ಲೆಗೆ ಯತ್ನಿಸಿದ ಬಿಜೆಪಿಯ ಗೂಂಡಾ ಕಾರ್ಯಕರ್ತರ ಕೃತ್ಯವನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸಿದೆ. ಪೊಲೀಸ್ ಇಲಾಖೆ ಈ ಕೂಡಲೇ ಗೂಂಡಾಗಿರಿ ನಡೆಸಿದವರ ಮೇಲೆ ಕಠಿಣ ಕಾನೂನಿನಡಿ ಶಿಕ್ಷೆಗೊಳಪಡಿಸಿ ಬಂಧಿಸಲು ಒತ್ತಾಯಿಸುತ್ತದೆ. ವಿದ್ಯಾರ್ಥಿಗಳು ಮಣಿಪಾಲಕ್ಕೆ ತೆರಳಿ ಬರುವಂತಹ ಹೊತ್ತಿನಲ್ಲಿ ಸುರತ್ಕಲ್ ಬಳಿ ತಡೆದು ಹಲ್ಲೆ ನಡೆಸಿದ ಬಿಜೆಪಿ,
ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು ವಿತರಿಸುತ್ತಿದ್ದೇವೆ. ಸಮಾಜದ ಎಲ್ಲಾರಿಗೂ ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ಸಿಗಲಿ ಎಂಬ ಉದ್ದೇಶದಿಂದ
ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ
ರಾಷ್ಟ್ರೀಯ ಸೇವಾ ಯೋಜನೆ 2019-20ನೇ ಸಾಲಿನ ಅತ್ಯುತ್ತಮ ಸ್ವಯಂಸೇವಕ ರಾಷ್ಟ್ರೀಯ ಪ್ರಶಸ್ತಿ ಪುರಸ್ಕøತ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಸುರತ್ಕಲ್‍ನ ಗೋವಿಂದ ದಾಸ ಕಾಲೇಜಿನ ರಂಗ ಮಂದಿರದಲ್ಲಿ ಸಾರ್ವಜನಿಕ ಅಭಿನಂದನಾ ಸಮಾರಂಭ ನಡೆಯಿತು. ಮೊದಲಿಗೆ ಸುರತ್ಕಲ್ ಜಂಕ್ಷನ್‍ನಿಂದ ಗೊವಿಂದದಾಸ ಕಾಲೇಜಿನ ವರೆಗೆ ಮೆರವಣಿಗೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಬಿಂದಿಯಾ ಎಲ್
ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು
ಕುಂದಾಪುರ: ಕೊರೋನಾ ಮಹಾಮಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆಯೇ ಸಂಪೂರ್ಣ ಹದಗೆಟ್ಟು ಹೋಗಿದೆ. ರೈತರು, ಕೂಲಿ ಕಾರ್ಮಿಕರು, ಜನಸಾಮಾನ್ಯರು ಪರದಾಟ ನಡೆಸುತ್ತಿರುವ ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರೈತ ವಿರೋಧಿ, ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿ ತರುವ ಮೂಲಕ ರೈತರನ್ನು, ಕಾರ್ಮಿಕರನ್ನು ಇನ್ನಷ್ಟು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್ ಆರೋಪಿಸಿದರು. ಅವರು ಕೃಷಿ ಕಾಯ್ದೆ, ವಿದ್ಯುತ್ ಮಸೂದೆ, ಕಾರ್ಮಿಕರ


















