Home ಕರಾವಳಿ Archive by category ಮಂಗಳೂರು (Page 267)

ಎನ್ ಎಂಪಿಟಿಯ ನೂತನ ಪ್ರವೇಶ ದ್ವಾರದ ಶಿಲಾನ್ಯಾಸ

ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಇಂದು ಎನ್‍ಎಂಪಿಟಿ ಆವರಣದಲ್ಲಿ ಪ್ರವೇಶ ದ್ವಾರಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಪ್ತವೇಶ ದ್ವಾರ 1,100 ಚದರ ಅಡಿ ವಿಸ್ತೀರ್ಣದಲ್ಲಿ 3.25 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ವಾಗಲಿದೆ. ಈ ಪ್ರವೇಶ ದ್ವಾರ

ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದ ಸುರತ್ಕಲ್‍ನ ಬಿಂದಿಯಾ ಎಲ್ ಶೆಟ್ಟಿ

ರಾಷ್ಟ್ರ ಪ್ರಶಸ್ತಿ ವಿಜೇತ ಎನ್.ಎಸ್.ಎಸ್. ಸ್ವಯಂ ಸೇವಕಿ ಸುರತ್ಕಲ್ ನ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿನಿ ಬಿಂದಿಯಾ ಎಲ್ ಶೆಟ್ಟಿ ಅವರು ಇಂದು ಹೊಸ ದಿಲ್ಲಿಯಲ್ಲಿ ರಾಷ್ಟ್ರ ಪತಿ ರಾಮನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಈಕೆ ಕಳೆದ ಬಾರಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪೆರೆಡ್ ನಲ್ಲೂ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದರು. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ಈಕೆ ಎಸ್ ಎಸ್ ಎಲ್

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ

ಮಂಗಳೂರಿನಲ್ಲಿ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.

ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್‍ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ

ಉಚ್ಚಿಲ ಬಡಾ ಗ್ರಾ.ಪಂ. ವಾಚನಾಲಯಕ್ಕೆ ಶಾಲಾ ಪಠ್ಯ ಪುಸ್ತಕ ವಿತರಣೆ

ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ

ಬೆಳಪು ಹಾಲು ಉತ್ಪಾದಕರ ವಾರ್ಷಿಕ ಸಭೆ

ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು. ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಹೈನುಗಾರಿಕೆಯಲ್ಲಿ ಲಾಭ

ಘನತ್ಯಾಜ್ಯ ನಿರ್ವವಣೆ ಮಾಡದೆ ಜನರ ಮೇಲೆ ಬರೆ : ಪಾಲಿಕೆ ವಿಪಕ್ಷ ನಾಯಕ ಎ.ಸಿ. ವಿನಯ್ ರಾಜ್ ಆರೋಪ

ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು

ಮಂಗಳೂರು ಸ್ವಚ್ಛ ನಗರ ಎಂಬ ಹೆಸರಿಗೆ ಚ್ಯುತಿ ಬಂದಿದೆ : ಜೆ.ಆರ್. ಲೋಬೋ

ಮಂಗಳೂರು ನಗರ ಸ್ವಚ್ಛ ನಗರ ಎಂಬುದಕ್ಕೆ ಹಲವು ಬಾರಿ ಪ್ರಶಸ್ತಿ ಪಡೆದಿದೆ. ಆದರೆ ಇತ್ತಿಚೀನ ದಿನಗಳಲ್ಲಿ ಆ ಹೆಸರಿಗೆ ಚ್ಯುತಿ ಬಂದಿದೆ. ಕಸ ವಿಲೇವಾರಿಯ ನಿರ್ವಹಣೆ ನಗರದಲ್ಲಿ ಸಮರ್ಪಕವಾಗಿಲ್ಲ ಎಂದು ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಸುಮಾರು 52 ಕೋಟಿ ರೂ ವೆಚ್ಚದಲ್ಲಿ ಕಸವನ್ನ ವಿಲೇವಾರಿಗೆ ಬಳಸಲು ಮುಂದಾಗಿದೆ. ಪಾಲಿಕೆ 38 ಕೋಟಿ ಕಸ ವಿಲೇವಾರಿ ವಾಹನ ಖರೀದಿಸಿ ವಾಹನ

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜು: ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಅಭಿಯಾನ

ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯುತ್ತ ಕಾಲೇಜಿನ ಅಟೊನಾಮಸ್ ವಿಭಾಗದ ಎನ್‌ಸಿಸಿ ಏರ್‌ವಿಂಗ್ ಕೆಡೆಟ್‌ಗಳಿಂದ ನಗರದ ಟಾಗೂರ್ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಒಟ್ಟು 59 ಕೆಡೆಟ್‌ಗಳಿಂದ ಸ್ವಚ್ಛಾತಾ ಕಾರ್ಯ ನೆರವೇರಿತು. ಎನ್‌ಸಿಸಿ ಏರ್‌ವಿಂಗ್‌ನ ಅಫೀಸರ್ ಅಲ್ವಿನ್ ಸ್ಟೀಪನ್ ಮಿಸ್ಕಿತ್ ಅವರು ನೇತೃತ್ವವನ್ನು ವಹಿಸಿದ್ದರು. ಟಾಗೂರ್ ಪಾರ್ಕ್‌ನಲ್ಲಿದ್ದಂತಹ ಪ್ರತಿಮೆಯನನು ವಿದ್ಯಾರ್ಥಿಗಳು ಸ್ಚಚ್ಚಗೊಳಿಸಿದರು. ಇನ್ನು ವಿದ್ಯಾರ್ಥಿಗಳು ಬ್ಯಾನರ್