ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅನುಮೋದನೆ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ತಿಳಿಸಿದ್ದಾರೆ. ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆಅಂದಾಜು 34.8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಫ್ಲೈಓವರ್ ಗೆ ಶೀಘ್ರದಲ್ಲಿ ಟೆಂಡರ್ ಕರೆಯಲಾಗುವುದು ಎಂದು
ಕೋವಿಡ್ ಪ್ರಕರಣಗಳು ಗಣನೀಯವಾಗಿ ಕಡಿಮೆಯಾಗಿ, ಶಾಲೆ ಕಾಲೇಜುಗಳು ಸಹಿತ ಎಲ್ಲವೂ ಸಹಜ ಸ್ಥಿತಿಗೆ ಬಂದಿದ್ದರೂ ಜಿಲ್ಲೆಯಲ್ಲಿ ಸಿನಿಮಾ ಮಂದಿರಗಳನ್ನು ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡದಿರುವುದು ಹಾಗೂ ನಾಟಕ ತಂಡಗಳಿಗೆ ಪ್ರದರ್ಶನಕ್ಕೆ ಅವಕಾಶ ಮಾಡಿ ಕೊಡದಿರುವುದರಿಂದ ಕಲಾವಿದರ ಪರಿಸ್ಥಿತಿ ಹದಗೆಟ್ಟಿದೆ. ನಾಟಕ, ಸಿನಿಮಾದಿಂದಲೇ ಜೀವನ ಸಾಗಿಸುವ ಕಲಾವಿದರ ಸ್ಥಿತಿ ತುಂಬಾ ಕಠಿಣವಾಗಿದೆ. ಹೀಗಾಗಿ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ರಾಜ್ಯದ ಮುಖ್ಯಮಂತ್ರಿಯವರಿಗೆ
ಹಾವೇರಿ ಜಿಲ್ಲೆಯ ಹಲ್ಲೂರು ಗ್ರಾಮದ 23 ವರ್ಷದ ಯುವತಿ ಕವನ ಎಂಬವರು ಶಿವಮೊಗ್ಗ ಜಿಲ್ಲೆಯ ಹೊನ್ನಾಳಿ ಬಳಿ ರಸ್ತೆ ಅಪಘಾತಕ್ಕೀಡಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೆ.12ರಂದು ಮಧ್ಯಾಹ್ನ ನಗರದ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಗಂಭೀರ ಗಾಯದಿಂದ ಅವರ ಮಿದುಳು ನಿಷ್ಕ್ರೀಯಗೊಂಡಿತ್ತು. ಇದನ್ನು ತಿಳಿದ ಕವನಳ ಸಹೋದರಿ ಅಂಗಾಂಗ ದಾನಕ್ಕೆ ಮುಂದಾದರು. ಈ ಮಾಹಿತಿಯನ್ನು ಆಸ್ಪತ್ರೆಯಿಂದ ಜೀವನ ಸಾರ್ಥಕತೆ ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ
ಪುರಾತನವಾದ ದೇವಸ್ಥಾನಗಳನ್ನು ಹೊತ್ತುಗೊತ್ತು ಇಲ್ಲದ ವೇಳೆಯಲ್ಲಿ ತುಘಲಕ್ ನೀತಿಯಂತೆ ಅಕ್ರಮವಾಗಿ ತೆರವು ಗೊಳಿಸಿವುದನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳದ ಪ್ರಾಂತ ಕಾರ್ಯಾಧ್ಯಕ್ಷರಾದ ಎಂ.ಬಿ. ಪುರಾಣಿಕ್ ಹೇಳಿದರು. ಅವರು ರಾಜ್ಯದಲ್ಲಿ ಪುರಾತನ ದೇವಸ್ಥಾನ ತೆರವುಗೊಳಿಸುವ ಸರ್ಕಾರದ ನಿರ್ಧಾರವನ್ನು ಖಂಡಿಸಿ ನಗರದ ಕದ್ರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಜಿಲ್ಲಾಡಳಿತ ಸುಪ್ರೀಂ ಕೋರ್ಟ್‍ನ
ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ಕುರಿತು ಉಂಟಾಗಿರುವ ಗೊಂದಲಗಳ ಬಗ್ಗೆ ಮುಖ್ಯಮಂತ್ರಿ ಶ್ರೀ ಬಸವರಾಜು ಬೊಮ್ಮಾಯಿ ಅವರೊಂದಿಗೆ ಈಗಾಗಲೇ ಚರ್ಚಿಸಿದ್ದೇನೆ. ಕರಾವಳಿ ಭಾಗದಲ್ಲಿರುವ ದೇವಸ್ಥಾನ, ದೈವಸ್ಥಾನಗಳು ಪೌರಾಣಿಕ ಹಿನ್ನೆಲೆಗಳಿರುವ ಮತ್ತು ಅತ್ಯಂತ ಪುರಾತನವಾಗಿರುವುದೇ ಆಗಿದೆ. ಹಾಗಾಗಿ ಯಾವುದೇ ಧಾರ್ಮಿಕ ಕೇಂದ್ರಗಳಿಗೂ ಇಲ್ಲಿ ಹಾನಿಯಾಗುವುದಿಲ್ಲ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭರವಸೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿಯು
ರಾಜ್ಯದಲ್ಲಿ ದೇವಸ್ಥಾನಗಳ ತೆರವುಗೊಳಿಸುವ ಸರಿಯಲ್ಲ ರಾಜ್ಯ ಸರಕಾರದಲ್ಲಿ ತಾಲೀಬಾನ್ ಪ್ರೇರಿತ ಅಧಿಕಾರಿಗಳ ಕೃತ್ಯ ನಡೆಯುತ್ತಿದೆ ಎಂದು ಭಜರಂಗದಳದ ಮುಖಂಡ ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರ ತಕ್ಷಣವೇ ಅಧಿಕಾರಿಗಳನ್ನು ವಜಾಗೊಳಿಸಬೇಕು. ತೆರವುಗೊಳಿಸಲು ಉದ್ಧೇಶಿಸಿರುವ ದೇವಸ್ಥಾನಗಳ ಪಟ್ಟಿಯನ್ನು ಹಿಂಪಡೆಯಬೇಕು. ಮೈಸೂರಿನಲ್ಲಿ ತೆರವುಗೊಳಿಸಿದ ದೇವಸ್ಥಾನವನ್ನು ಮತ್ತೆ ಮರು ನಿರ್ಮಿಸಬೇಕು. ಸೆಪ್ಟೆಂಬರ್ ೧೬ ರಂದು ದಕ್ಷಿಣಕನ್ನಡ, ಉಡುಪಿ
ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರಕ್ಕೆ ಮಂಗಳೂರಿನ ಮಿಲಾಗ್ರಿಸ್ ಚರ್ಚ್ ವಠಾರದಲ್ಲಿಂದು ಗಣ್ಯರ ಸಮ್ಮುಖದಲ್ಲಿ ಅಂತಿಮ ಗೌರವ ಸಲ್ಲಿಸಲಾಯಿತು. ಇಂದು ಬೆಳಗ್ಗೆ ಮಾಜಿ ಸಚಿವ, ಕಾಂಗ್ರೆಸ್ ನ ಹಿರಿಯ ನಾಯಕ ಜನಾರ್ದನ ಪೂಜಾರಿ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್, ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೈನ್, ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥ್, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್
ದೇವರು, ಜಾತಿ,ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬಿಜೆಪಿ ಸರ್ಕಾರ ದೇವಸ್ಥಾನಗಳನ್ನು ಧ್ವಂಸ ಮಾಡುತ್ತಿದೆ. ಇದರಿಂದ ಜನರ ಮುಂದೆ ಬಿಜೆಪಿಯವರ ಬಣ್ಣ ಬಯಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಧರ್ಮದ ರಕ್ಷಕರು, ಹಿಂದೂ ರಕ್ಷಕರು, ಹಿಂದೂಗಳನ್ನು ಗುತ್ತಿಗೆಗೆ ತೆಗೆದುಕೊಂಡವರು, ಹಿಂದೂಗಳ ಮತ ಪಡೆದು ಸರ್ಕಾರ ರಚಿಸಿದವರು ದೇವಸ್ಥಾನಗಳನ್ನು ಧ್ವಂಸ
ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು ಜುಲೈಯಲ್ಲಿ ನಡೆಸಿದ ಅಖೀಲ ಭಾರತ ಸಿಎ ಅಂತಿಮ ಪರೀಕ್ಷೆಯಲ್ಲಿ ನಗರದ ರುಥ್ ಕ್ಲೇರ್ ಡಿ’ಸಿಲ್ವ ಅವರು ಪ್ರಥಮ ರ್‍ಯಾಂಕ್ ಪಡೆದಿದ್ದಾರೆ. ನಗರದ ಮಲ್ಲಿಕಟ್ಟೆ ನಿವಾಸಿ ರುಥ್ ಅವರು ರೋಸಿ ಮರಿಯಾ ಡಿ’ಸಿಲ್ವ ಮತ್ತು ರಫೆರ್ಟ್ ಡಿ’ಸಿಲ್ವ ಅವರ ಪುತ್ರಿ. ನಗರದ ಸಂತ ತೆರೆಸಾ ಸ್ಕೂಲ್‌ನಲ್ಲಿ ಶಿಕ್ಷಣ ಪಡೆದು ಮಂಗಳೂರು ವಿ.ವಿ.ಯಿಂದ ದೂರ ಶಿಕ್ಷಣ ಮೂಲಕ ಪದವಿ ಪೂರ್ಣಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ರ್‍ಯಾಂಕ್ ಪಡೆದ ರುಥ್ ಕ್ಲೇರ್ ಡಿ
ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ ಪ್ರಥಮ ಡೋಸ್ ಪಡೆದಿದ್ದಾರೆ. ಸುಮಾರು 56,000 ಮಂದಿ ಪ್ರಸಕ್ತ ಎರಡನೆ ಡೋಸ್ ಪಡೆಯಲು ಅರ್ಹತೆ


















