ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸಹಭಾಗಿತ್ವದಲ್ಲಿ ಲೆನ್ಸ್ ಕ್ಯಾಪ್ ಪಿಕ್ಚರ್ಸ್ ನಡೆಸುವ ತುಳು ಹಾಗೂ ಕನ್ನಡ ಚಲನಚಿತ್ರ ನಟನಾ ತರಗತಿ ಸೆ.5ರಂದು ತುಳು ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ತುಳು ಹಾಗೂ ಕನ್ನಡ ಭಾಷೆಯಲ್ಲಿ
ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು. ಕದ್ರಿ ಮಲ್ಲಿಕಟ್ಟೆ ವೃತ್ತದ ಬಳಿ ಪ್ಲೆಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ಎಲ್ಲಾ
ಮಂಗಳೂರು: ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಆಗಸ್ಟ್ 30ರ ಸೋಮವಾರದಂದು ನಗರದ ತುಳು ಸಾಹಿತ್ಯ ಅಕಾಡೆಮಿಗೆ ಭೇಟಿ ನೀಡಿ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ತುಳು ಸಾಹಿತ್ಯ ಅಕಾಡೆಮಿಯ ಭವನದ ಕಾಮಗಾರಿಗೆ ಹೆಚ್ಚುವರಿ ಅನುದಾನ ನೀಡುವಂತೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್‍ಸರ್ ಈ ಸಂದರ್ಭದಲ್ಲಿ ಮನವಿ ಸಲ್ಲಿಸಿದರು.ತುಳು ಅಕಾಡೆಮಿ ರಿಜಿಸ್ಟ್ರಾರ್ ಕವಿತಾ, ತುಳು ಸಾಹಿತ್ಯ ಅಕಾಡೆಮಿಯ
ಹಿಂದೂಸ್ತಾನಿಯ ಖ್ಯಾತ ಸಂಗೀತ ಕಲಾವಿದೆ, ಕರಾವಳಿಯ ಪ್ರತಿಭೆ ವಿದ್ವಾನ್ ವಿಭಾ ಎಸ್.ನಾಯಕ್ ಅವರು ಸಂಗೀತ ನಿರ್ದೇಶಿಸಿ, ತಾವೇ ಹಾಡಿರುವ ’ರಂಗ ನಿನ್ನ’ ಎಂಬ ಶ್ರೀಕೃಷ್ಣ ದೇವರ ಕುರಿತ ಭಕ್ತಿ ಪ್ರಧಾನ ಅಲ್ಬಾಂ ಸಾಂಗ್ ಅನಾವರಣಗೊಂಡಿದೆ. ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ರಂಗ ನಿನ್ನ ಅಲ್ಬಾಂ ಸಾಂಗ್ ಬಿಡುಗಡೆ ಸಮಾರಂಭ ನಡೆಯಿತು. ಶ್ರೀಕೃಷ್ಣ ಜನ್ಮಾಷ್ಠಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣನ ಕುರಿತು ಶ್ರೀ ವ್ಯಾಸರಾಯರು ಬರೆದಿರುವ ಹಾಡಿಗೆ ವಿದ್ವಾನ್ ವಿಭಾ ಎಸ್.ನಾಯಕ’
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು. ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು
ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್‌ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೋದಿ ನೇತೃತ್ವದ ಸರಕಾರವು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಲೇ ಇದೆ. ಇದರ ವಿರುದ್ಧ ಯುವ ಜನತೆ ಸೆಟೆದು ನಿಲ್ಲಬೇಕಿದೆ. ಯುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಿದೆ ಎಂದರು.


















