ಕೇಂದ್ರ ಮತ್ತು ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರಕಾರವಿದೆ. ಎಷ್ಟೇ ಆರೋಪ ಬಂದರೂ ಕೂಡ ತನಿಖೆಗೊಳಗಾಗುವ ನೈತಿಕ ಧೈರ್ಯವು ಈ ಸರಕಾರಕ್ಕಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರ ವಿಜಯೇಂದ್ರ 20
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ರವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರ ಆದೇಶ ಪತ್ರ ವಿತರಣಾ ಸಮಾರಂಭವೂ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕೆಪಿಸಿಸಿ ಹಿಂದುಳಿದ ವರ್ಗ ಗಳ ವಿಭಾಗ
ಮಂಗಳೂರು: ಮಂಗಳಮುಖಿಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ನವಸಹಜ ಸಂಘಟನೆಯ ಅಧ್ಯಕ್ಷ ನಿಖಿಲ್ ಎಂಬಾತನನ್ನು ಪಣಂಬೂರು ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದಾರೆ. ಸಂಘಟನೆಯ ಇತರ ಆರೋಪಿಗಳು ತಪ್ಪಿಸಿಕೊಂಡಿದ್ದು ಪೊಲೀಸರು ಅವರ ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 26ರಂದು ರಾತ್ರಿ ನಿಖಿಲ್ ತನ್ನ ಇತರ ಸಂಗಡಿಗರಾದ ಅರುಂಧತಿ, ರಾಶಿ, ರೇಖಾ, ಪ್ರೀಯಾ ಮತ್ತಿತರು ಸೇರಿ ಶಾಂತಾ ಪೂರ್ಣಿಮಾ, ನೀಲಾ, ಹುಲಿಗೆಮ್ಮ ಮತ್ತು ಪಾರ್ವತಿ ಎಂಬವರ ಮೇಲೆ ಬೈಕಂಪಾಡಿ ರೈಲ್ವೆ ಗೇಟ್ ಬಳಿ
ಮಂಗಳೂರು: ನೆರೆಯ ಕೆರಳದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ತೀವ್ರಗೊಂಡಿರುವ ಹಿನ್ನಲೆಯಲ್ಲಿ ಜಿಲ್ಲೆಯಿಂದ ಕಾಸರಗೋಡುಗೆ ಸಂಚರಿಸುವ ಸರ್ಕಾರಿ ಹಾಗೂ ಖಾಸಗಿ ಬಸ್‍ಗಳನ್ನು ಆಗಸ್ಟ್ 1 ರಿಂದ ಒಂದು ವಾರದ ಕಾಲ ಸ್ಥಗಿತಗೊಳಿಸಲಾಗುವುದು ಎಂದು ಸಂಸದರಾದ ನಳೀನ್ ಕುಮಾರ್ ಕಟೀಲು ಅವರು ತಿಳಿಸಿದರು.ಅವರು ಜುಲೈ 31ರ ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ
ಖಾಸಗಿ ಬಸ್ ದರ ಏರಿಕೆಯನ್ನು ಖಂಡಿಸಿ ಡಿವೈಎಫ್‌ಐ, ಸಿಪಿಐಎಮ್ ಮತ್ತು ಜೆಎಮ್‌ಎಸ್ ಸಂಘಟನೆಗಳ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಖಾಸಗಿ ಬಸ್ ದರ ಏರಿಕೆಯನ್ನು ಮಾಡಿ ಮತ್ತಷ್ಟು ಸಂಕಷ್ಠಕ್ಕೆ ತಳ್ಳಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಸಿಪಿಐಎಮ್ ಜಿಲ್ಲಾ ಮುಂಡರಾದ ಬಾಲಕೃಷ್ಣ ಶೆಟ್ಟಿ,
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಅವರ ಪದಗ್ರಹಣ ಹಾಗೂ ವಿಭಾಗದ ಜಿಲ್ಲಾ ಪದಾಧಿಕಾರಿಗಳ ಹಾಗೂ ಬ್ಲಾಕ್ ಅಧ್ಯಕ್ಷರುಗಳ ಆದೇಶ ಪತ್ರ ವಿತರಣಾ ಸಮಾರಂಭವೂ ಆಗಸ್ಟ್ 1ರಂದು ಮಂಗಳೂರಲ್ಲಿ ನಡೆಯಲಿದೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಬೆಳಿಗ್ಗೆ 10.30 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.
ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ


















