Home ಕರಾವಳಿ Archive by category ಮಂಗಳೂರು (Page 284)

ಆಪಲ್ ಮೊಬೈಲ್ ಶೋರೂಂನಿಂದ ಕಳವು ಪ್ರಕರಣ: ಓರ್ವ ಆರೋಪಿ ಸೆರೆ, 40ಮೊಬೈಲ್ ವಶಕ್ಕೆ

 ಮಂಗಳೂರಿನ ಆಪಲ್ ಮೊಬೈಲ್ ಶೋರೂಂ ಒಂದರಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣವನ್ನು ಬೇಧಿಸಿರುವ ಮಂಗಳೂರು ಪೊಲೀಸರು ಓರ್ವ ಆರೋಪಿ ಸಹಿತ ಕಳವಾದ 40 ಮೊಬೈಲ್‌ಗಳನ್ನು ಆರೋಪಿಯಿಂದ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರ ಮೂಲದ ಆರೋಪಿಯನ್ನು ಮುಂಬೈನಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದು, ಸುಮಾರು 41 ಲಕ್ಷ ರೂ. ವೌಲ್ಯದ ಕಳವಾದ ಮೊಬೈಲ್‌ಗಳನ್ನು

‘ಸೌಹಾರ್ದ ಸಾಮೂಹಿಕ ವಿವಾಹ’ಕ್ಕೆ ಅರ್ಜಿ ಆಹ್ವಾನ

ಆರ್ಥಿಕವಾಗಿ ತೀರಾ ಹಿಂದುಳಿದಿರುವ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಂಗಳೂರಿನ ಬಜ್ಪೆ ಝಕರಿಯಾ ಫೌಂಡೇಶನ್ ಹಮ್ಮಿಕೊಂಡಿದ್ದ, ಲಾಕ್ ಡೌನ್ ಕಾರಣದಿಂದ ಮುಂದೂಡಲಾದ ‘ಸೌಹಾರ್ದ ಸಾಮೂಹಿಕ ವಿವಾಹ ಸಮಾರಂಭ’ವು ಅಕ್ಟೋಬರ್ 16ರಂದು ಮಂಗಳೂರು ತಾಲೂಕಿನ ಗಂಜಿಮಠದಲ್ಲಿ ನಿರ್ಮಾಣವಾಗುತ್ತಿರುವ ನೂತನ ಸಭಾಂಗಣ ‘ಝರಾ ಆಡಿಟೋರಿಯಂ’ನಲ್ಲಿ ನಡೆಯಲಿದೆ. ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು

ಬೆಂಗ್ರೆ ಸಾಗರಮಾಲಾ ಯೋಜನಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪ್ರತಿಭಟನಾ ನಿರತ ಮೀನುಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ

ಮಂಗಳೂರಿನ‌ ಬೆಂಗ್ರೆ ಪ್ರದೇಶದಲ್ಲಿ ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ಕಾಮಗಾರಿ ಗ್ರಾಮಸ್ಥರ ವಿರೋಧದ ನಡುವೆ ನಡೆಯುತ್ತಿದೆ. ಈ ನಡುವೆ ಕೋಸ್ಟಲ್ ಬರ್ತ್ ಕಾಮಗಾರಿ‌ ತಮ್ಮ ನಾಡದೋಣಿಗಳ ತಂಗುದಾಣಗಳನ್ನು ಆಕ್ರಮಿಸುತ್ತದೆ, ಮೀನುಗಾರರ ಕೆಲವು ಮನೆಗಳನ್ನು ಪರಿಹಾರ ಇಲ್ಲದೆ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮದ ಸಾಂಪ್ರದಾಯಿಕ ಮೀನುಗಾರರು ತಮ್ಮ ದೋಣಿಗಳನ್ನು ಯೋಜ‌ನಾ ಪ್ರದೇಶದಲ್ಲಿ ಲಂಗರು ಹಾಕಿ ಮೂರು ತಿಂಗಳಿನಿಂದ “ಪಲ್ಗುಣಿ ಸಾಂಪ್ರದಾಯಿಕ

ಎಸ್.ಡಿ.ಎಂ.ನವಿದ್ಯಾರ್ಥಿಗಳಿಗೆ ಅಮೆರಿಕಾ ವಿ.ವಿ ಪಿ.ಎಚ್.ಡಿ ಫೆಲೋಷಿಪ್

ಉಜಿರೆ, ಆ.12: ಉಜಿರೆಯಎಸ್.ಡಿ.ಎಂ ಸ್ನಾತಕೋತ್ತರಕೇಂದ್ರದರಸಾಯನಶಾಸ್ತ್ರ ವಿಭಾಗದಇಬ್ಬರು ವಿದ್ಯಾರ್ಥಿಗಳು ಅಮೆರಿಕಾದಎರಡು ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಪಿ.ಎಚ್.ಡಿ ಸಂಶೋಧನಾಅಧ್ಯಯನ ಕೈಗೊಳ್ಳಲು ಫೆಲೋಷಿಪ್ ಪಡೆದಿದ್ದಾರೆ. ವಿಭಾಗದ 2017-19ನೇ ಸಾಲಿನಲ್ಲಿಆರ್ಗ್ಯಾನಿಕ್ ಕೆಮಿಸ್ಟ್ರಿ  ವಿಭಾಗದಲ್ಲಿಸ್ನಾತಕೋತ್ತರ ವ್ಯಾಸಂಗ ಪೂರೈಸಿದ್ದ ಗಿರೀಶ್‍ಗೌಡಆರ್ ಮತ್ತುಕೆಮಿಸ್ಟ್ರಿ ವಿಭಾಗದಲ್ಲಿಅಧ್ಯಯನನಿರತರಾಗಿದ್ದಸಾಧನಾ ಭಟ್‍ಫೆಲೋಷಿಪ್ ಆಯ್ಕೆ ಪ್ರಕ್ರಿಯೆಯ

ಸ್ಟ್ರೆಚರ್‌ನಲ್ಲಿ ಆರೋಪಿಯನ್ನು ಕೋರ್ಟ್‌ಗೆ ಹಾಜರು: ಪೊಲೀಸರ ಮೇಲೆ ನ್ಯಾಯಾಧೀಶರು ಗರಂ

ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.   ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್‌ಗೆ ಹಾಜರಾಗುವಂತೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿ ಅಸೌಖ್ಯದಿಂದ ಹಾಸಿಗೆ ಹಿಡಿದಿದ್ದ. ಕುಟುಂಬ ವರ್ಗದಿಂದ

ಶ್ರೀನಿವಾಸ ವಿವಿ ವತಿಯಿಂದ ಕ್ಯಾಂಪಸ್ ಸಂದರ್ಶನ

ಕೋವಿಡ್‍ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್‍ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಉದ್ಯೋಗಕ್ಕಾಗಿ ಸಿದ್ದರಾಗುವಂತೆ ತಯಾರು ಮಾಡಿ ಯಶಸ್ಸನ್ನು ಕಂಡಿದ್ದೇವೆ ಎಂದು ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೇಶನ್ ಸೈನ್ಸ್ ತರಬೇತಿ ಹಾಗೂ ಪ್ಲೇಸ್ಮೆಂಟ್ ಅಧಿಕಾರಿ, ಪ್ರೊ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವಾರವೂ ವೀಕೆಂಡ್ ಕರ್ಫ್ಯೂ

ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಕರಾವಳಿಯಲ್ಲಿ ಸರಳ ನಾಗರ ಪಂಚಮಿ ಆಚರಣೆ : ದೇವಸ್ಥಾನದಲ್ಲಿ ಬೆರಳಣಿಕೆಯ ಭಕ್ತಾಧಿಗಳು

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು, ವಿಶೇಷ ಪೂಜೆಯೊಂದಿಗೆ ನಾಗಾರಾಧನೆ ನಡೆಯುತ್ತಿದೆ. ವಿಶೇಷ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು, ಭಕ್ತರು ತಮ್ಮ ಕುಟುಂಬದ ನಾಗಬನಗಳಲ್ಲಿ ಸೀಯಾಳಾಭಿಷೇಕ, ಹಾಲೆರೆಯುವ ಮೂಲಕ ಪೂಜೆ

ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭ ವಿಚಾರ : ಸಿಎಂ ಬಸವರಾಜ್ ಬೊಮ್ಮಾಯಿ

ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್‍ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್‍ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್‍ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್‍ಐಎ ಕುರಿತಂತೆ ಅವರು