ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ
ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,
ಮಂಗಳೂರು: ನಗರದ ನೀರುಮಾರ್ಗದ ಜಂಕ್ಷನ್ ಸಮೀಪದಲ್ಲಿರುವ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರಕ್ಕೆ ನುಗ್ಗಿದ ಇಬ್ಬರು ಕಳ್ಳರು ಕಾಣಿಕೆ ಡಬ್ಬಿ ಕಳವುಗೈದಿರುವ ಘಟನೆ ಬುಧವಾರ ನಸುಕಿನ ವೇಳೆ ನಡೆದಿದೆ. ಇದರ ಸಂಪೂರ್ಣ ದೃಶ್ಯ ಭಜನಾ ಮಂದಿರದ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಭಜನಾ ಮಂದಿರದ ಮುಂಭಾಗಕ್ಕೆ ನಸುಕಿನ ವೇಳೆ 1.45ರ ಸುಮಾರಿಗೆ ಆಗಮಿಸಿರುವ ಕಳ್ಳರು ಮುಂಬಾಗಿಲಿನ ಬೀಗ ಮುರಿದು ಒಳಪ್ರವೇಶಿಸಿದ್ದಾರೆ. ಬಳಿಕ ಉತ್ತರದ ಬಾಗಿಲು ತೆರೆದು ಪ್ರಧಾನ ಗುಡಿಯ
ಗಾಂಧಿ ಪಥ ಗ್ರಾಮ ಪಥ (ನಮ್ಮ ಗ್ರಾಮ ನಮ್ಮ ರಸ್ತೆ) ಯೋಜನೆಯಡಿಯಲ್ಲಿ ಕಾಪು ತಾಲೂಕಿನ ಪಲಿಮಾರು ಅವರಾಲು ಮಟ್ಟುವಿನಿಂದ ಮುಲ್ಕಿಗೆ ಸಂಪರ್ಕ ಹೊಂದಿರುವ ಸೇತುವೆಯಲ್ಲಿ ಉದ್ಘಾಟನೆಗೆ ಮುನ್ನವೇ ಬಿರುಕು ಕಾಣಿಸಿದ್ದು, ಬಾಲಗ್ರಹ ಪೀಡೆಗೆ ಒಳಗಾಗಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಸ್ಥಳೀಯ ಪಲಿಮಾರು ಗ್ರಾ.ಪಂ. ಸದಸ್ಯ ಶಿವರಾಮ್ ಎಂಬವರು, ಜನರ ಬಲು ಬೇಡಿಕೆಯ ಸೇತುವೆ ಇದಾಗಿದ್ದು, ಇದರ ಉಸ್ತುವಾರಿಯನ್ನು ಪಂಚಾಯತ್ ರಾಜ್ಯ ಇಂಜಿನಿಯರ್ ಇಲಾಖೆ, ಉಡುಪಿ.
ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ
ಕೊಂಚಾಡಿಯ ಕೆನರಾ ಅಪಾರ್ಟ್ಮೆಂಟ್ ನವರು ಸಾರ್ವಜನಿಕ ರಸ್ತೆಗೆ ಮಲ ಮಿಶ್ರಿತ ಗಲೀಜು ನೀರನ್ನು ಬಿಡುತ್ತಿರುವ ಬಗ್ಗೆ ಹಲವಾರು ಬಾರಿ ದೂರು, ಮನವಿಗಳನ್ನು ನೀಡಿದರು, ಕ್ರಮ ಕೈಗೊಳ್ಳದ ನಗರ ಪಾಲಿಕೆಯ ವಿರುದ್ಧ ಪ್ರತಿಭಟನಾ ಕಾರ್ಯಕ್ರಮ ನಡೆಸಿದ ನಂತರವೂ ಮತ್ತದೇ ರೀತಿಯಲ್ಲಿ ಗಲೀಜು ನೀರು ಸಾರ್ವಜನಿಕ ರಸ್ತೆಗೆ ಬಿಡುತ್ತಿರುವ ವಿರುದ್ಧ ಇಲ್ಲಿನ ಜನಪರ ಸಂಘಟನೆಗಳು ನಗರ ಪಾಲಿಕೆಯವರೇ ಗಲೀಜು ನೀರನ್ನು ಸಾರ್ವಜನಿಕ ರಸ್ತೆಗೆ ಬಿಡಲು ಸಹಕರಿಸುತ್ತಿದ್ದಾರೆಂದು ಆರೋಪಿಸಿ
ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ, ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು ಹಾಕಿದ್ದಾರೆ. ಅಸ್ಕರ್ ಫೆರ್ನಾಂಡಿಸ್ ಅವರು ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇಂದು ಕಾಂಗ್ರೆಸ್‌ನ ಹಲವು ಮುಖಂಡರು ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಜನಾರ್ದನ ಪೂಜಾರಿ ಕೂಡ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ
ಸುರತ್ಕಲ್‍ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ ನಡೆದಿದೆ. ಕೃತ್ಯ ಎಸಗಿ ಕಳ್ಳ ಓಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕುಳಾಯಿ ನಿವಾಸಿ ಬಾಲಕೃಷ್ಣ ಪುರೋಹಿತ್ ಅವರ ಮನೆಗೆ ಕಳ್ಳನೋರ್ವ ನುಗ್ಗಿ ಅವರ ಪತ್ನಿ ಸುಮತಿ ಬಾಲಕೃಷ್ಣ ಆಚಾರ್ಯ ಅವರ ಕುತ್ತಿಗೆಯಿಂದ ನಾಲ್ಕು ಪವನ್ ಚಿನ್ನದ ಕರಿಮಣಿಯನ್ನು ಸೆಳೆದು ಪರಾರಿಯಾದ ಘಟನೆ ನಡೆದಿದೆ.ಇಬ್ಬರು ಯುವಕರು ಮಧ್ಯಾಹ್ನ ಮನೆಗೆ ಆಗಮಿಸಿ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಮಯದಲ್ಲಿ ಅರ್ಕುಳಬೈಲ್‌ನಿಂದ ಹರಿದು ಹೋಗುವ ನೀರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗುವುದನ್ನ ಮನಗಂಡ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ನೀರು ಹರಿದು ಹೋಗುವ ಮೋರಿಗಳು ಮಣ್ಣಿನಿಂದ ತುಂಬಿದ ಕಾರಣ ಕೃಷಿ ಭೂಮಿಯಲ್ಲಿ ನೀರು ತುಂಬಿ ಕೃಷಿಗೆ ತೊಂದರೆ ಆಗಿರುವುದರಿಂದ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟರು. ಇನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ
ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.