Home ಕರಾವಳಿ Archive by category ಮಂಗಳೂರು (Page 289)

ಮಂಗಳೂರಿನ ಖಾಸಗಿ ಕಟ್ಟಡದ ನೆಲಮಹಡಿಯಲ್ಲಿ ವ್ಯಕ್ತಿಯ ಶವ ಪತ್ತೆ

ಮಂಗಳೂರಿನ ರಾವ್ ಆಂಡ್ ರಾವ್ ಸರ್ಕಲ್ ಬಳಿಯ ಖಾಸಗಿ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಸುಮಾರು 45ವರ್ಷ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ

ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆಗೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು. ದೆಹಲಿಯಿಂದ ತೊಕ್ಕೊಟ್ಟು ಕೊಲ್ಯ ನಿವಾಸಿ ಪ್ರಸಾದ್ ಆನಂದ್ ಸೋಮವಾರ ಬೆಳಗ್ಗೆ ಮನೆ ಸೇರಿದ್ದರೆ,

ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮ

 ಅಖಿಲ ಭಾರತ ಬಿಲ್ಲವರ ಯೂನಿಯನ್, ಬಿಲ್ಲವ ಮಹಿಳಾ ಸಂಘ ಮತ್ತು ನಾರಾಯಣಗುರು ವಿದ್ಯಾ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ದಿನದ ಕಾರ್ಯಕ್ರಮವನ್ನು ನಗರದ ಕುದ್ರೋಳಿ ನಾರಾಯಣ ಗುರು ಕಾಲೇಜಿನಲ್ಲಿ ಆಚರಿಸಲಾಯ್ತು. ಈ ವೇಳೆ ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷರಾದ ನವೀನ್ ಚಂದ್ರ ಡಿ.ಸುವರ್ಣ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಕುದ್ರೊಳಿ ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ|ವಸಂತ್ ಕುಮಾರ್,

ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ: ಕುದ್ರೋಳಿ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಸಂಸದ ನಳಿನ್

ಸಮಾಜ ಸುಧಾರಕ ಬ್ರಹ್ಮ ಶ್ರೀ ನಾಯಾಯಣ ಗುರುಗಳ ಜಯಂತಿಯ ಪ್ರಯುಕ್ತ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ‌ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ, ಪಾಲಿಕೆ‌ ಸದಸ್ಯರಾದ ಜಯಶ್ರೀ ಕುಡ್ವ, ಸಂಧ್ಯಾ ಮೋಹನ್

ಮಿತ್ರಪಟ್ಟಣ ಮೊಗವೀರ ಸಮಾಜದ ವತಿಯಿಂದ ಸಮುದ್ರ ಪೂಜೆ

ಮಂಗಳೂರು: ಮೀನುಗಾರಿಕಾ ಋತುವಿನ ಆರಂಭದಲ್ಲಿ ಸಮುದ್ರಪೂಜೆಯನ್ನು ಮಾಡುವ ಮೂಲಕ ಮತ್ಥ್ಯ ಸಂಪತ್ತನ್ನು ಕರುಣಿಸಲು ಮತ್ತು ಮೀನುಗಾರ ಬಂಧುಗಳ ಸುರಕ್ಷೆಗಾಗಿ ಪ್ರಾರ್ಥಿಸಿ ಮಿತ್ರಪಟ್ಟಣ ಮೊಗವೀರ ಮಹಾ ಸಮಾಜದ ವತಿಯಿಂದ ಸಮುದ್ರ ಪೂಜಾ ಕಾರ್ಯಕ್ರಮ ನಡೆಯಿತು. ಸಮುದ್ರ ಪೂಜೆಯ ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಭರತ್ ಶೆಟ್ಟಿಯವರು ಸಮುದ್ರಕ್ಕೆ ಹಾಲು ಹಾಕುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.ಈ ಸಂದರ್ಭದಲ್ಲಿ ಮಿತ್ರಪಟ್ಟಣ ಮೊಗವೀರ ಸಮಾಜದ ಅಧ್ಯಕ್ಷರಾದ ರವೀಂದ್ರ

ದ.ಕ., ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಸದ್ಯ ಶಾಲಾರಂಭ ಇಲ್ಲ

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತು ಸೋಂಕುಪೀಡಿತರ ಸಾವು ಏರಿಳಿಕೆಯಾದರೂ ಸತತ ಒಂದು ವಾರದಿಂದ ಪರೀಕ್ಷೆಗಳ ಪಾಸಿಟಿವಿಟಿ ದರ ಶೇ. 1ಕ್ಕಿಂತಲೂ ಕಡಿಮೆ ವರದಿಯಾಗುತ್ತಿದೆ. ಈ ಮೂಲಕ ಮೂರನೇ ಅಲೆ ಆತಂಕ ಸದ್ಯದ ಮಟ್ಟಿಗೆ ದೂರವಾಗಿದೆ. ಇದರ ಮಧ್ಯೆ ಸೋಮವಾರದಿಂದ ರಾಜ್ಯದಲ್ಲಿ ಶಾಲಾರಂಭ ಆಗಲಿದ್ದರೂ ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾತ್ರ ತರಗತಿ ಆರಂಭವಾಗುವುದಿಲ್ಲ ಎಂದು ಸರಕಾರ ಹೇಳಿದೆ. ಈ ಮೊದಲು ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ

ವ್ಯಕ್ತಿಯೋರ್ವನಿಂದ ಮಂಗಳೂರಿನ ಹೊಟೇಲ್ ಗಳಿಗೆ ಪಂಗನಾಮ: ಬಂಧನ

ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ. ಈತ ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು , ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ತೋರಿಸಿದ್ದ.  ನಗರದ ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್