ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ
ನಶಿಸುತ್ತಿರುವ ಭತ್ತದ ಕೃಷಿಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಭತ್ತದ ಕೃಷಿಕರೊಂದಿಗೆ ಪತ್ರಕರ್ತರ ಸಾಮೂಹಿಕ ಭತ್ತದ ನಾಟಿ ಕಾರ್ಯಕ್ರಮ ಮಿತ್ತಳಿಕೆಗುತ್ತು ಕುಟುಂಬಸ್ಥರ ಸಹಕಾರದೊಂದಿಗೆ ಅಳಿಕೆ ಗ್ರಾಮದ ಮಿತ್ತಳಿಕೆಯ ಗದ್ದೆಯಲ್ಲಿ ನಡೆಯಿತು .ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ಜಿಲ್ಲಾ
ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು
ಮಂಗಳೂರಿನ ಪ್ರತಿಷ್ಟಿತ ಬೆಸೆಂಟ್ ಮಹಿಳಾ ಕಾಲೇಜು ವತಿಯಿಂದ ಬೆಸೆಂಟ್ ಕನ್ನಡ ಮಾಧ್ಯಮವಿದ್ಯಾರ್ಥಿಗಳಿಗೆ ಮತ್ತು ಶಾಲಾ ಸಪೋರ್ಟಿಂಗ್ ಸಿಬ್ಬಂದಿಗಳಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ನಡೆಯುತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ ಬೆಸೆಂಟ್ ಕನ್ನಡ ಮಾಧ್ಯಮ ಶಾಲೆಯ ಸಂಚಾಲಕ ಸತೀಶ್ ಭಟ್ ಮಾತನಾಡಿ, ಈ ಕಾರ್ಯಕ್ರವನ್ನು ಪ್ರಚಾರಕ್ಕಾಗಿ ಮಾಡುವುದಲ್ಲಿ ಇನ್ನುಳಿದವರಿಗೆ ಇದು ಪ್ರೇರಣೆಯಾಗಬೇಕು ಎನ್ನುವು ನಿಟ್ಟಿನಲ್ಲಿ ಆಯೋಜಿಸಲಾಗಿದೆ.
ಚಲನಚಿತ್ರದ ಹಾಸ್ಯ ನಟಿ ವಿನ್ನಿ ಫೆರ್ನಾಂಡೀಸ್ ಹೃದಯಘಾತದಿಂದ ನಿಧನ ಹೊಂದಿದ್ದಾರೆ.ಅವರಿಗೆ 63 ವಯಸ್ಸಾಗಿತ್ತು. ಕನ್ನಡ, ತುಳು ಮತ್ತು ಕೊಂಕಣಿ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರು ಕನ್ನಡ ಮತ್ತು ಕೊಂಕಣಿ ಧಾರಾವಾಹಿಗಳಲ್ಲಿಯೂ ಕಾಣಿಸಿಕೊಂಡಿದ್ದರು. ಕೊಂಕಣಿ ನಾಟಕಗಳಲ್ಲಿನ ಪಾತ್ರಗಳೊಂದಿಗೆ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ ಅವರು ನಂತರ ತುಳು ಮತ್ತು ಕನ್ನಡ ನಾಟಕಗಳಲ್ಲಿ ನಟಿಸಿದರು.ಇವರು ರಾಜ್ಯೋತ್ಸವ ಪ್ರಶಸ್ತಿಯನ್ನ ಪಡೆದಿದ್ದಾರೆ. ಪತಿ ವಿನ್ಸೆಂಟ್,
ಮಂಗಳೂರು ಉತ್ತರ ರೋಟರಿ ವತಿಯಿಂದ ಯುವ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಗರದ ಲೇಡಿಹಿಲ್‌ನ ರೋಟರಿ ಬಾಲಭವನದಲ್ಲಿ ನಡೆಯಿತು. ರೋಟರಿ ಮಾಜಿ ಗವರ್ನರ್ ಮೇಜರ್ ಡೊನೊರ್ ರಂಗನಾಥ ಭಟ್ ಅವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಯುವ ಪ್ರತಿಭೆಗಳಿಗೆ ಗೌರವಿಸಿದ್ರು. ವಿಜ್ಞಾನ ಮತ್ತು ತಾಂತ್ರಿಕತೆ ಕ್ಷೇತ್ರದಲ್ಲಿ ಸ್ವಸ್ತಿಕ್ ಪದ್ಮ, ಪವರ್ ಲಿಫ್ಟಿಂಗ್ ನಲ್ಲಿ ವೇನೇಝಿಯಾ ಆನ್ನಿ ಕಾರ್ಲೊ ಹಾಗೂ ಸುರೇಶ್ ಶೇಟ್ ,ನೃತ್ಯ ಮತ್ತು ಸಂಗೀತ ಕ್ಷೇತ್ರದಲ್ಲಿ ಅನುಷಾ ಜೇನ್ ಡಿಸೋಜ,
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು
ಮಂಗಳೂರಿನ ಹೊರವಲಯದ ಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಕಾಮಗಾರಿಯ ಹಿನ್ನಲೆ ಪಕ್ಕದಲ್ಲಿದ್ದ ಮೀನು ಮಾರುಕಟ್ಟೆಯ ಮೆಲ್ಚಾವಣಿಯನ್ನು ತೆಗದು ಮಾರುಕಟ್ಟೆಯನ್ನು ನೆಲಸಮ ಮಾಡಲು ಹೊರಟಿರುವುದು ಮೀನು ಮಾರಾಟ ಮಾಡುವ ಮಹಿಳೆಯರ ಆಕ್ರೋಶಕ್ಕೆ ಕಾರಣವಾಗಿದೆ. ಎಐಸಿಸಿ ಕಾರ್ಯದರ್ಶಿ ಐವನ್ ಡಿ’ಸೊಜಾರವರು 2 ವರ್ಷದ ಹಿಂದೆ ಎಂಎಲ್‌ಸಿಯಾಗಿದ್ದ ಸಂದರ್ಭ ಎನ್‌ಹೆಚ್ 66 ಬೈಕಂಪಾಡಿಯಲ್ಲಿ ಮೀನುಗಾರ ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಅನುದಾನ ನೀಡಿ
ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಕ್ಕಳ ಕಲ್ಯಾಣ ಸಮಿತಿ ಮೂಲಕ ನೀಡಲಾದ ದೂರಿನ ಮೇರೆಗೆ ಮಂಗಳೂರು ನಗರ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ, ನಗರದ ಪೊಲೀಸ್ ಠಾಣೆ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಷಕರ ಜತೆ ದೂರು ನೀಡಲು ಬಂದಿದ್ದ ಬಾಲಕಿಯಿಂದ ಮೊಬೈಲ್ ಸಂಖ್ಯೆಯನ್ನು


















