Home ಕರಾವಳಿ Archive by category ಮಂಗಳೂರು (Page 293)

ಮಂಗಳೂರಿನ ಎಸ್‌ ಸಿಡಿಸಿಸಿ ಬ್ಯಾಂಕ್‌ ನಿಂದ ರೈತಸ್ಪಂದನ ಕಾರ್ಯಕ್ರಮ:ವಿವಿಧ ಕೃಷಿ ಸಾಲ ವಿತರಣೆ

ಮಂಗಳೂರು: ರಾಜ್ಯದ ಕೋವಿಡ್ ಸಂತ್ರಸ್ತರ ಕುಟುಂಬದ 81ಕೋಟಿ ರೂ. ರೈತರ ಸಾಲಮನ್ನಾ ಮಾಡುವ ಗುರಿಯನ್ನು ಸರಕಾರ ಹೊಂದಿದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.  ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡ ’ರೈತ ಸ್ಪಂದನ’ ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ

ಭತ್ತ ಕೃಷಿಯಲ್ಲಿ ತೊಡಗಿಸಿಕೊಂಡ ನಿಟ್ಟೆ ಪಿಯು ಕಾಲೇಜಿನ ವಿದ್ಯಾರ್ಥಿಗಳು

ಉಳ್ಳಾಲ: ಮಂಗಳೂರಿನ ನಿಟ್ಟೆ ಶಂಕರ್ ಅಡ್ಯಂತಾಯ ಸ್ಮಾರಕ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಪಿಲಾರು ಇರ್ನೂರು ಗುತ್ತು ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು. ಕಾಲೇಜಿನ ಎನ್‍ಸಿಸಿ ವಿಭಾಗದ ಹಲವು ವಿದ್ಯಾರ್ಥಿಗಳು ಭತ್ತದ ನಾಟಿಯಲ್ಲಿ ತಮ್ಮನ್ನು ತೊಡಗಿಸಿದ್ದು, ಕೃಷಿ ಚಟುವಟಿಕೆಗಳನ್ನು ಮತ್ತೆ ನೆನಪಿಸಿಕೊಂಡರು.    ಮಾಜಿ ಶಾಸಕ ಜಯರಾಮ ಶೆಟ್ಟಿ ಕೆ. ಭಾಗವಹಿಸಿ ಮಾತನಾಡಿ ಕೃಷಿ ಕ್ಷೇತ್ರ ಆಧುನೀಕರಣಗೊಳ್ಳಬೇಕು, ಬದಲಾವಣೆಗಳಾಗಬೇಕು ಅನ್ನುವ

ಬೈಕಂಪಾಡಿಯಲ್ಲಿ ನೂತನ ಮಾರುಕಟ್ಟೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಸ್.ಟಿ. ಸೋಮಶೇಖರ್ ಅವರಿಂದ ಶಿಲಾನ್ಯಾಸ

ಮಂಗಳೂರು: ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬೈಕಂಪಾಡಿಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಮಾರಾಟಕ್ಕೆ ಆಧುನಿಕ ಮಾರುಕಟ್ಟೆ ನಿರ್ಮಾಣಕ್ಕೆ ಬುಧವಾರ ಶಿಲಾನ್ಯಾಸ ನೆರವೇರಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿ

ಕೇಂದ್ರದಲ್ಲಿರುವುದು ಹೃದಯಹೀನ ಸಂವೇದನಾ ರಹಿತ ಸರಕಾರ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,

ನಮ್ಮಲ್ಲಿ ಯಾವುದೇ ಬಣವಿಲ್ಲ, ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯ:ಮಂಗಳೂರಲ್ಲಿ ರಕ್ಷಾ ರಾಮಯ್ಯ

ನಮ್ಮಲ್ಲಿ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ತಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿದ್ದೆ. ಇದೀಗ ಹೈಕಮಾಂಡ್ ಅಧ್ಯಕ್ಷ ಸ್ಥಾನವನ್ನು ಮುಹಮ್ಮದ್ ನಲಪಾಡ್‌ಗೆ ಹಸ್ತಾಂತರಿಸುವಂತೆ ಸೂಚಿಸಿದೆ. ಅದರಂತೆ ಅಧಿಕಾರ ಹಸ್ತಾಂತರ ಮಾಡುವುದಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್

ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳಲ್ಲಿ ಉತ್ತಮ ಸೇವೆಯನ್ನು ಗುರುತಿಸಿ ಚಂದ್ರಹಾಸ್ ಆರ್ ಸಾಲ್ಯಾನ್ ಬೈಕಂಪಾಡಿ ಹಾಗೂ ನಿವೃತ್ತರಾದ ನೂತನ್ ಕುಮಾರ್ ಸಸಿಹಿತ್ಲು ಅವರು 2019ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.   ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪದಕ ಪ್ರದಾನ ಮಾಡಿದರು. ಚಂದ್ರಹಾಸ್

ಮಾಗ್ನ ಆಕ್ರಮಣ್ 2021ರಾಷ್ಟ್ರೀಯ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆಸ್ಟ್

ಪಾಂಡೇಶ್ವರದ ಶ್ರೀನಿವಾಸ್ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ ನ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ ನ ಎಂಬಿಎ ಹಾಗೂ ಎಂಕಾಂ ವಿಭಾಗದ ವತಿಯಿಂದ ಮಾಗ್ನ ಆಕ್ರಮಣ್ 2021ರಾಷ್ಟ್ರೀಯ ಮಟ್ಟದ ಪದವಿ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆsಸ್ಟ್ ಜುಲೈ 15ರ ಗುರುವಾರದಂದು ವರ್ಚುವಲ್ ವೇದಿಕೆಯ ಮೂಲಕ ಆಯೋಜಿಸಲಾಗುತ್ತಿದೆ. ಫೆಸ್ಟನಲ್ಲಿ ಕಿಲಾಡಿ – ಬೆಸ್ಟ್ ಮ್ಯಾನೇಜರ್, ತಾಕ್ಷಕ್ – ಮಾರ್ಕೆಟಿಂಗ್, ದಲಾಸ್ – ಫೈನಾನ್ಸ್, ವಿಕ್ರಂತ್ –

Srinivas University – Magma – AAKRAMAN 2021

Srinivas University, College of Management and Commerce, City Campus, Pandeshwara, Mangaluru Department of MBA & MCom are organizing Magma – AAKRAMAN 2021 a National Level Virtual Fest for Degree Students on Thursday 15th July 2021. In the Management fest events such as Kiladi – Best Manager, Takshak – Marketing, Dalaals – Finance, Vikrintah

ಸರೋಜಿನಿ ಮಹಿಷಿ ವರದಿ ಜಾರಿಗೆ ತರುವಂತೆ ಇಂಟಕ್ ಆಗ್ರಹ

ಕರಾವಳಿಯಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು ಮತ್ತು ಸರೋಜಿನಿ ಮಹಿಷಿ ವರದಿ ಜಾರಿಗೆ ತನ್ನಿ ಎಂದು ಇಂಟಕ್  ನ ರಾಜ್ಯ ಕಾರ್ಯಾಧ್ಯಕ್ಷರಾದ ರಾಕೇಶ್ ಮಲ್ಲಿ ಆಗ್ರಹಿಸಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕರಾವಳಿಯಲ್ಲಿ ಕೈಗಾರಿಕಾ ಪ್ರಾಂಗಣ ನಿರ್ಮಿಸಲು ಭೂಸ್ವಾಧೀನ, ಕೈಗಾರಿಕೆ ನಿರ್ಮಾಣದ ಬಗ್ಗೆ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಇದುವರೆಗೆ  ಎಚ್‌ಪಿಸಿಎಲ್,

ಜುಲೈ 14ರಂದು ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಸಾಗರದ ಇದಿನಬ್ಬ ಫೌಂಡೇಶನ್’ನ ಸಹಯೋಗದೊಂದಿಗೆ ಹಮ್ಮಿಕೊಂಡಿರುವ ‘ಕರ್ನಾಟಕ ಕರಿಯರ್ ಯಾತ್ರಾ’ದ ಅಂಗವಾಗಿ ದ.ಕ. ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಪಿಯುಸಿ ನಂತರ ಮುಂದೇನು’ ಕರಿಯರ್ ಮಾರ್ಗದರ್ಶನ ಶಿಬಿರವನ್ನು ಮಂಗಳೂರಿನ ಟೀಂ ಬಿ-ಹ್ಯೂಮನ್ ಸಂಸ್ಥೆ ಆಯೋಜಿಸಿದೆ. ಜುಲೈ 14ರಂದು ಬೆಳಿಗ್ಗೆ 10.00ಕ್ಕೆ ಝೂಮ್ (ಮೀಟಿಂಗ್ ಐಡಿ: 85029107730 ಪಾಸ್ಕೋಡ್: 687283) ಮೂಲಕ