ನಗರದ ಕೊಟ್ಟಾರ ಮಾಲೆಮಾರ್‍ನಲ್ಲಿ ರಸ್ತೆ ದಾಟಲು ಕಾಯುತ್ತಿದ್ದ ಶ್ವಾನವನ್ನು ಬಾಲಕನೊಬ್ಬ ರಸ್ತೆ ದಾಟಿಸಿ, ಶ್ವಾನ ಪ್ರೀತಿಯನ್ನು ವ್ಯಕ್ತಪಡಿಸಿದ ಘಟನೆ ನಡೆದಿದೆ. ದೃಶ್ಯವನ್ನು ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ಛಾಯಾಗ್ರಾಹಕ ಅಪುಲ್ ಆಳ್ವ ಸೆರೆ ಹಿಡಿದಿದ್ದು. ಸದ್ಯ ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗ್ತಿದೆ. ಕೊಟ್ಟಾರ-ಮಾಲೆಮಾರ್ ರಸ್ತೆಯಲ್ಲಿ
ಪೆರ್ಮುದೆ ಗ್ರಾಮ ಪಂಚಾಯತ್ ಯ ವ್ಯಾಪ್ತಿಯ ಕುತ್ತೆತ್ತೂರು ಗ್ರಾಮದ ಪಡುಪದವು ಮಾಧವ ಭಟ್ ರವರ ಮನೆ ಬಳಿ ಕೃಷಿ ಮೀನು ಗಾರ ದಿನಾಚರಣೆ ಮತ್ತು ಮಾಹಿತಿ ಕಾರ್ಯಗಾರವನ್ನು ಮುಲ್ಕಿ ಮೂಡಬಿದ್ರಿ ಶಾಸಕರಾದ ಉಮನಾಥ್ ಕೋಟ್ಯಾನ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಧಾನ ಮಂತ್ರಿ ಯಾದ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯ ಕ್ರಮದಲ್ಲಿ ಜಲಸಂರಕ್ಷಣೆಗಾಗಿ ಜನರಿಗೆ ನೀಡಲಾದ ಮನವಿಗೆ ಪೇರಿತರಾಗಿ ಸುಮಾರು ೫೦ಲಕ್ಷಕ್ಕೂ ಮೇಲ್ಪಟ್ಟು ಖರ್ಚಮಾಡಿ
ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆಗಳು ವಿಪರೀತವಾಗಿ ಹೆಚ್ಚಿದ್ದು,ಅದರ ಜೊತೆಗೆ ವಿದ್ಯುತ್ ದರವನ್ನು ಕೂಡ ಹೆಚ್ಚಿಸಿ ಜನಸಾಮಾನ್ಯರ ಬದುಕಿಗೆ ಕೊಡಲಿ ಪೆಟ್ಟನ್ನು ನೀಡಿದ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳನ್ನು ಧಿಕ್ಕರಿಸಿ CPIM ನೇತ್ರತ್ವದಲ್ಲಿ ಮಂಗಳೂರು ನಗರದಾದ್ಯಂತ ನಡೆಯುತ್ತಿರುವ ವಾರಾಚರಣೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು,ಇಂದು ಕುಲಶೇಖರ ಹಾಗೂ ಜಪ್ಪಿನಮೊಗರುನಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರು: ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ವಿಚಾರಕ್ಕೆ ಸಂಬಂಧಿಸಿ ಮಂಗಳೂರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಯವಾಗಿ ಮಾತನಾಡಲ್ಲ, ಆದ್ರೆ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ. ಕಾರ್ಯಕರ್ತರು ನಾಯಕರ ಬಳಿ ಅಪೇಕ್ಷೆ ಮತ್ತು ಬೇಡಿಕೆಯಿಟ್ಟು ಬರುತ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು
ಮಂಗಳೂರು-ಯಶವಂತಪುರ ನಡುವೆ ಹಗಲು ಸಂಚರಿಸುವ ಆಕರ್ಷಕ ರೈಲು ’ವಿಸ್ಟಾಡೋಮ್’ ಗೆ ಇಂದು ಮಂಗಳೂರು ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ರೈಲ್ವೆ ಇಲಾಖೆಯು ಹೆಚ್ಚು ಮುತುವರ್ಜಿ ವಹಿಸಿ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಪ್ರಯತ್ನ ಮಾಡಿದೆ. ಸಾರ್ವಜನಿಕರು ಅನೇಕ ಬೇಡಿಕೆಗಳನ್ಬು ಮುಂದಿಟ್ಟಿದ್ದು, ಒಂದೊಂದೇ ಬೇಡಿಕೆಗಳನ್ನು ಈಡೇರಿಸುತ್ತಾ ಬಂದಿದೆ. 2014ರವರೆಗೆ
ಕರ್ನಾಟಕ ಸರಕಾರದ ವಿಶೇಷ ಅನುದಾನದ ಮೂಲಕ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕೃಷ್ಣಾಪುರ 4 ನೇ ಬ್ಲಾಕಿನ ಕೈಕಂಬವನ್ನು ಸಂಪರ್ಕಿಸುವ ರಸ್ತೆಯನ್ನು 20 ಲಕ್ಷ ರೂಪಾಯಿ ಅನುದಾನದಲ್ಲಿ ಕಾಂಕ್ರೀಟಿಕರಣ ಮಾಡುವ ಯೋಜನೆಗೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಶನಿವಾರ ಗುದ್ದಲಿಪೂಜೆ ನೆರವೇರಿಸಿದರು. ಈ ಭಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ ಸ್ಥಳೀಯರು ಶಾಸಕರಿಗೆ ಮನವಿ ಅರ್ಪಿಸಿದರು.ಕಾರ್ಯಕ್ರಮದಲ್ಲಿ ಭಾಜಪಾ ಉತ್ತರ ಮಂಡಲ ಅಧ್ಯಕ್ಷರಾದ
ಮಂಗಳೂರು : ಲಯನ್ಸ್ ಕ್ಲಬ್ ಮಂಗಳೂರು ಕೊಡಿಯಾಲಬೈಲ್ ಇದರ 2021-2022 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಲ. ಮೋಹನ್ ಕೊಪ್ಪಲ ಕದ್ರಿ ಆಯ್ಕೆಯಾಗಿರುತ್ತಾರೆ.ಕಾರ್ಯದರ್ಶಿಯಾಗಿ ಲ. ವಿನೂತನ್ ಕಲಿವೀರ್, ಕೋಶಾಧಿಕಾರಿಯಾಗಿ ಲ. ಕಿಶೋರ್ ಡಿ ಶೆಟ್ಟಿ ಆಯ್ಕೆಯಾಗಿರುತ್ತಾರೆ. ನಿಕಟಪೂರ್ವ ಅಧ್ಯಕ್ಷರು ಲ. ಗೋಕುಲ್ ಕದ್ರಿ, ಉಪಾಧ್ಯಕ್ಷರಾಗಿ ಲ.ಮೋಹನ್ ಬರ್ಕೆ, ಪದಾಧಿಕಾರಿಗಳಾಗಿ ಲ. ದೇವಾನಂದ್ – ಟೇಮರ್ ಆಗಿ, ಲ.ಪ್ರದೀಪ್ ಆಳ್ವ — ಟೈಲ್ ಟ್ವಿಸ್ಟರ್ ಆಗಿ, ಲ.
ಮಂಗಳೂರು: ವಿಶ್ವಹಿಂದು ಪರಿಷತ್ತು ಬಜರಂಗದಳ ಸುರತ್ಕಲ್ ಪ್ರಖಂಡ ಇದರ ಆಶ್ರಯದಲ್ಲಿ ಕೋವಿಡ್ ಕಾಲದಲ್ಲಿ ವಾರಿಯರ್ಸ್‌ಗಳಾಗಿ ಶ್ರಮವಹಿಸಿದ ವೈದ್ಯರುಗಳಿಗೆ, ಆರೋಗ್ಯ ಸಿಬ್ಬಂದಿಗಳಿಗೆ ಅಭಿನಂದನಾ ಕಾರ್ಯಕ್ರಮವು ಮುಕ್ಕ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಜರುಗಿತು.ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತು ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ಮಾತನಾಡಿ ವಿಶ್ವವು ಕೋವಿಡ್ ಮಹಾಮಾರಿಯಿಂದ ಸಾಕಷ್ಟು ಸಾವು ನೋವನ್ನು ಅನುಭವಿಸಿದ್ದೇವೆ. ಇಂತಹ ಸಂದರ್ಭಗಳಲ್ಲಿ ಒಂದನೇ,
ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ
ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರು ತಡೆಯೊಡ್ಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಸಂಜೆ ಜಮಾಯಿಸಿದ್ದರು. ಈ ವೇಳೆ ಪ್ರತಿಭಟನೆಗೆ ಮುಂದಾಗಿದ್ದ