ಬೆಂಗಳೂರಿನಿಂದ ನಿಷೇಧಿತ ಮಾದಕ ‘ಎಂಡಿಎಂಎ’ ವಸ್ತುವನ್ನು ಖರೀದಿಸಿ ಕೇರಳದ ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಕೊಣಾಜೆ ಪೊಲೀಸರು ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದಲ್ಲಿ ಪತ್ತೆ ಹಚ್ಚಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕಾಸರಗೋಡಿನ ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕಮ್ಮನಹಳ್ಳಿ ಎಂಬಲ್ಲಿಂದ 65 ಗ್ರಾಂ
ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ
ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ
ದೇಶದಲ್ಲಿ ವ್ಯಾಪಕವಾಗಿ 100ರ ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ ಶನಿವಾರ ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ
ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಮತ್ತು ಖಾಸಗಿ ದೂರವಾಣಿ
ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರ ಯಾವುದು ಇಲ್ಲ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ದ.ಕ ಸೇರಿ NRI ಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ಹಮ್ಮಿಕೊಂಡಿದ್ದು ಕೆನರಾ ಹೈಸ್ಕೂಲಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿ ಈ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದೇಶದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಾಗ ಅವರಿಗೆ ಲಸಿಕೆ ಪಡೆದುಕೊಳ್ಳುವುದು
ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಇವರು ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮಂಗಳೂರಿಗೆ ಬಂದು ಎರಡು ಲಾಡ್ಜ್ ಮತ್ತು ಎರಡು
ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ಎಸ್‌ಡಿ ಡ್ರಗ್ ಸ್ಟ್ರಿಪ್ಸ್‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯ 840 ಎಲ್‌ಎಸ್ ಡಿ ಸ್ಟ್ರಿಪ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ಆರೋಪಿಯನ್ನು ಕೇರಳ ಕ್ಯಾಲಿಕಟ್ ನ ಮೊಹಮ್ಮದ್ ಅಜಿನಾಸ್


















