Home ಕರಾವಳಿ Archive by category ಮಂಗಳೂರು (Page 324)

ಲಸಿಕೆ ನೀಡಲು ಸರ್ಕಾರ ಮೀನಾಮೇಷ: ಐವನ್ ಡಿಸೋಜಾ

ಕೊರೊನಾ ಕಡಿಮೆಯಾಗುತ್ತಿದೆ ಎಂದು ಹೇಳುತ್ತಿರುವ ಸರ್ಕಾರ ಯಾಕೆ ಉಚಿತವಾಗಿ ಲಸಿಕೆ ನೀಡಲು ಮೀನಾಮೇಷ ಎಣಿಸುತ್ತಿದೆ. ಲಸಿಕೆ ಪಡೆದವರು ಯಾರೂ ಸತ್ತಿಲ್ಲ. ಲಸಿಕೆ ಸಿಗದೇ ಆದಂತಹಾ ಸಾವು ನೋವಿಗೆ ಬಿಜೆಪಿ ಸರ್ಕಾರ ನೇರ ಹೊಣೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಆರೋಪಿಸಿದ್ದಾರೆ.  ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ

ಹಿಂದುಳಿದ ವರ್ಗಕ್ಕೆ ಪ್ಯಾಕೇಜ್ ಇಲ್ಲ: ಕಾಂಗ್ರೆಸ್ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್

ಕೊರೊನಾದಿಂದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಮಧ್ಯಮ ವರ್ಗ, ಹಿಂದುಳಿದ ವರ್ಗದವರು ಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಘೋಷಿಸಿರುವ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಕನಿಷ್ಠ ಹತ್ತು ಸಾವಿರ ಆದರೂ ಅನುದಾನವನ್ನು ಕಾರ್ಮಿಕರಿಗೆ, ಬಡವರಿಗೆ ನೀಡಬೇಕು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ದಾಸ್ ಹೇಳಿದರು. ಅವರು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಮಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

ಮಂಗಳೂರು:  ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಇಂದು ಮಂಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ , ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಗಿಡ ನೇಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಗಾಂಧೀಜಿಯವರು ನುಡಿದಂತೆ, ಹಿಂದಿನವರು ನಮಗೆ ಬಿಟ್ಟುಕೊಟ್ಟು ಹೋದ

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಪರಿಹಾರ ಧನ : ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೊರೋನಾ ಕರ್ಫ್ಯೂ ವಿಧಿಸಿದ್ದು ಇದರಿಂದ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ ತೊಂದರೆಯಾದ ಹಿನ್ನಲೆ ರಾಜ್ಯ ಸರಕಾರ ಕಾರ್ಮಿಕರಿಗೆ ರೂ. 2,೦೦೦ ಪರಿಹಾರಧನವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ತಿಳಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ

ಶ್ರೀನಿವಾಸ ಆಸ್ಪತ್ರೆಗೆ ಆಮ್ಲಜನಕ ಉತ್ಪಾದನಾ ಘಟಕ: ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಕೊಡುಗೆ

ಉಡುಪಿಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ಸುಗುಣೇಂದ್ರ ತೀರ್ಥ ಶ್ರೀಪಾದರು ಸುರತ್ಕಲ್ ನ ಶ್ರೀನಿವಾಸ್ ಆಸ್ಪತ್ರೆಗೆ ಕೊರೋನ ಸಂಕಷ್ಟ ಸಂದರ್ಭದಲ್ಲಿ ಕೊರೋನ ರೋಗಿಗಳ ಆರೈಕೆಗೆ ಆಮ್ಲಜನಕ ಉತ್ಪಾದನಾ ಘಟಕವನ್ನು ದಾನಮಾಡಿದ್ದಾರೆ.ಶ್ರೀನಿವಾಸ ಆಸ್ಪತ್ರೆಯ ಪರವಾಗಿ ಶ್ರೀನಿವಾಸ ವಿಶ್ವವಿದ್ಯಾಲಯದ ಗಣಕ ಯಂತ್ರ ವಿಭಾಗದ ಪ್ರೊ. ಪಿ. ಶ್ರೀಧರ ಆಚಾರ್ಯ ಇವರು ಇದನ್ನು ಕೃತಜ್ಞತಾ ಪೂರ್ವಕವಾಗಿ ಸ್ವೀಕರಿಸಿದ್ದಾರೆ.  

ಪ್ರತಿದಿನ 1 ಕೋಟಿ ಮಂದಿಗೆ ಲಸಿಕೆ : ಸರಕಾರಕ್ಕೆ ನಿರ್ದೇಶನ ನೀಡಲು ರಾಷ್ಟ್ರಪತಿಗೆ ಕಾಂಗ್ರೆಸ್ ಮನವಿ

ದೇಶದಲ್ಲಿ ಪ್ರತಿ ದಿನ ಒಂದು ಕೋಟಿ ಜನತೆಗೆ ಕೋವಿಡ್ ನಿಯಂತ್ರಕ ಲಸಿಕೆ ಸಂಪೂರ್ಣ ಉಚಿತವಾಗಿ ನೀಡಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರ ನಿರ್ದೇಶನ ನೀಡುವಂತೆ ಒತ್ತಾಯಿಸಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮನವಿ ಮಾಡಿದೆ. ದೇಶದಲ್ಲಿ ಸದ್ಯ ಕೇವಲ 16 ಲಕ್ಷ ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಈ ವೇಗದಲ್ಲಿ ಲಸಿಕೆ ನೀಡುತ್ತಾ ಹೋದರೆ ಎಲ್ಲರಿಗೂ ಲಸಿಕೆ ದೊರೆಯುವುದು ತುಂಬಾ ವಿಳಂಬ ಆಗಲಿರುವುದುರಿಂದ ಕೇಂದ್ರ ಸರಕಾರ

ಉಚಿತವಾಗಿ ಲಸಿಕೆ ನೀಡುವ ಯೋಜನೆ ರೂಪಿಸುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ

ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ

ಕರಾವಳಿಗೂ ಬಾಲಿವುಡ್ ನಟ ಸೋನು ಸೂದ್ ಸಹಾಯ ಹಸ್ತ: ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ಕ್ಷಿಪ್ರ ಆಮ್ಲಜನಕ ಕೇಂದ್ರ

ಮಂಗಳೂರು:ಕೋವಿಡ್ ಕ್ಲಿಷ್ಟಕರ ಸಂದರ್ಭದಲ್ಲಿ ಅತೀ ಅಗತ್ಯವಾದ ಆಕ್ಸಿಜನ್ ಹಾಗೂ ಅಗತ್ಯ ವೈದ್ಯಕೀಯ ನೆರವಿನ ಏರ್‌ಲಿಫ್ಟ್ ಮೂಲಕ ದೇಶದಲ್ಲಿ ಗಮನ ಸೆಳೆದಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದ.ಕ. ಜಿಲ್ಲೆಯನ್ನೊಳಗೊಂಡು ಕರಾವಳಿಗೂ ಸಹಾಯದ ಹಸ್ತ ಚಾಚಿದ್ದಾರೆ. ಸೋನು ಸೂದ್ ಚಾರಿಟೆಬಲ್ ಫೌಂಡೇಶನ್ ವತಿಯಿಂದ ಕರ್ನಾಟಕದ 4ನೇ ಕ್ಷಿಪ್ರ ಆಮ್ಲಜನಕ ಕೇಂದ್ರ ಕ್ಕೆ ನಗರದ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಇಂದು ಚಾಲನೆ ನೀಡಲಾಯಿತು.ದ.ಕ. ಜಿಲ್ಲೆ ಮಾತ್ರವಲ್ಲದೆ, ಉಡುಪಿ ಹಾಗೂ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ