Home ಕರಾವಳಿ Archive by category ಮಂಗಳೂರು (Page 328)

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು

ತಸ್ತೀಕ್ ವಿಚಾರದಲ್ಲಿ ರಾಜಕೀಯ ಬೇಡ : ಹರೀಶ್ ಕುಮಾರ್

ತಸ್ತೀಕ್ ಹಣದ ವಿಚಾರದಲ್ಲಿ ರಾಜಕೀಯ ಪ್ರೇರಿತ ಹೇಳಿಕೆ ನೀಡುವ ಮೂಲಕ ಜನರ ಭಾವನಯೊಂದಿಗೆ ಆಟವಾಡುವುದು ಬೇಡ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ವಿಧಾನಪರಿಷತ್ ಸದಸ್ಯರು ಆದ ಕೆ.ಹರೀಶ್ ಕುಮಾರ್ ಹೇಳಿದ್ದಾರೆ. ಅವರು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಸ್ತೀಕ್ ಹಣ ನೀಡುವ ವಿಚಾರದಲ್ಲಿ ಸಾರ್ವಜನಿಕವಾಗಿ ಚರ್ಚೆಯಾಗುವ ವಿಚಾರ ಯಾವುದು ಇಲ್ಲ. ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ತಸ್ತೀಕ್ ಹಣವನ್ನು

NRIಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಶ್ಲಾಘನೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಭಾರತೀಯ ರೆಡ್ ಕ್ರಾಸ್ ಸೊಸೈಟಿ, ದ.ಕ ಸೇರಿ NRI ಗಳಿಗೆ ವ್ಯಾಕ್ಸಿನ್ ನೀಡುವ ಅಭಿಯಾನ ಹಮ್ಮಿಕೊಂಡಿದ್ದು ಕೆನರಾ ಹೈಸ್ಕೂಲಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಭಾಗವಹಿಸಿ ಈ ಮಾದರಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿದೇಶದಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯರು ಮತ್ತೆ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳುವಾಗ ಅವರಿಗೆ ಲಸಿಕೆ ಪಡೆದುಕೊಳ್ಳುವುದು

ಅಡ್ಯಾರ್: ನೆನೆಗುದಿಗೆ ಬಿದ್ದಿದ್ದ ಸಮಸ್ಯೆಗೆ ಪರಿಹಾರ ಒದಗಿಸಿದ ಶಾಸಕ ಡಾ.ಭರತ್ ಶೆಟ್ಟಿ

ಅಡ್ಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯಾರ್ ದೋಟ ಎಂಬಲ್ಲಿ ಹಲವಾರು ವರ್ಷಗಳಿಂದ ಮಳೆ ನೀರು ಹಲವಾರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಯಾಗುತ್ತಿತ್ತು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಲವಾರು ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿರುವುದನ್ನು ಮನಗಂಡು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಮತ್ತು

ಮಂಗಳೂರಲ್ಲಿ ಅಕ್ರಮವಾಗಿ ನುಸುಳಿದ್ದ ಶ್ರೀಲಂಕಾ ಪ್ರಜೆಗಳ ಬಂಧನ

ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ 38 ತಮಿಳುನಾಡಿಗೆ ಬಂದಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಶ್ರೀಲಂಕಾದ ಉತ್ತರ ಭಾಗದವರು. ಶ್ರೀಲಂಕಾದಿಂದ ತಮಿಳುನಾಡಿನ ತೂತುಕುಡಿಗೆ ಬಂದು ಅಲ್ಲಿಂದ ಕೆನಡಾಗೆ ಹೋಗುವವರಿದ್ದರು. ಆದರೆ ತಮಿಳುನಾಡು ಚುನಾವಣೆ ಹಿನ್ನೆಲೆ ಅವರನ್ನ ಮಂಗಳೂರಿಗೆ ತಂದು ಬಿಡಲಾಗಿತ್ತು. ಅಲ್ಲಿ ಚುನಾವಣೆ ಹಿನ್ನೆಲೆ ತಪಾಸಣೆ ಕಾರ್ಯ ಚುರುಕಾಗಿದ್ದ ಹಿನ್ನೆಲೆ ಇವರು ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನು ಮಂಗಳೂರಿಗೆ ಬಂದು ಎರಡು ಲಾಡ್ಜ್ ಮತ್ತು ಎರಡು

ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ ಎಸ್‌ ಡಿ ಪೂರೈಸುತ್ತಿದ್ದ ಆರೋಪಿಯ ಬಂಧನ

ಪಾರ್ಟಿಗಳಿಗೆ ಮಾದಕ ವಸ್ತು ಎಲ್‌ಎಸ್‌ಡಿ ಡ್ರಗ್ ಸ್ಟ್ರಿಪ್ಸ್‌ಗಳನ್ನು ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ 16 ಲಕ್ಷ ಮೌಲ್ಯ 840 ಎಲ್‌ಎಸ್ ಡಿ ಸ್ಟ್ರಿಪ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಕುರಿತು ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತ ಆರೋಪಿಯನ್ನು ಕೇರಳ ಕ್ಯಾಲಿಕಟ್ ನ ಮೊಹಮ್ಮದ್ ಅಜಿನಾಸ್

ದ.ಕ ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ NRI ಗಳಿಗೆ ಲಸಿಕೆ ನೀಡಲು ಡಿ.ಸಿ ಆದೇಶ: ಅನಿವಾಸಿ ಕನ್ನಡಿಗರಿಂದ ಸ್ವಾಗತ

ಮೇ 30ರಂದು ದ.ಕ ಜಿಲ್ಲಾ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಅನಿವಾಸಿ ಕನ್ನಡಿಗರ ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ವಿಶ್ವದಾದ್ಯಂತ ಹಲವು ಅನಿವಾಸಿ ಕನ್ನಡಿಗರು, ಸಂಘಟನೆಗಳು ಪಾಲ್ಗೊಂಡು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರರವರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಕ್ತ ಸ್ಥಿತಿಗತಿ ಹಾಗೂ ಅನಿವಾಸಿಗಳ ಸಮಸ್ಯೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ್ದವು. ವೀಡಿಯೊ ಸಂವಾದದಲ್ಲಿ ಬಹುಮುಖ್ಯವಾಗಿ ಚರ್ಚೆಯಾದ

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ

ಪುಟ್ಟ ಮಗುವಿನೊಂದಿಗೆ ಬೀದಿ ಪಾಲಾಗಿದ್ದ ಸಂಸಾರಕ್ಕೆ ನೆರವಾದ ಟೀಂ- ಬಿ ಹ್ಯೂಮನ್ ಮತ್ತು ಟೀಂ ಐ.ವೈ.ಸಿ

ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆ ತರುತ್ತಾರೆ. ಪತ್ನಿಯ ಆರೋಗ್ಯಕರವಾಗಿ ಹೆರಿಗೆ ಆಗುತ್ತದೆ. ಹೆರಿಗೆ