Home ಕರಾವಳಿ Archive by category ಮಂಗಳೂರು (Page 50)

ಆ.31: ಅಲೋಶಿಯನ್ ಫೆಸ್ಟ್ 2024 : ಪಿಯು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮಟ್ಟದ ಉತ್ಸವ ಆಯೋಜನೆ

ಮಂಗಳೂರು: “ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದಲ್ಲಿ, ಪದವಿಪೂರ್ವ ವಿದ್ಯಾರ್ಥಿಗಳಿಗೆ ಒಂದು ದಿನದ ರಾಷ್ಟ್ರೀಯ ಮಟ್ಟದ ಪ್ರತಿಭಾ ಉತ್ಸವ ಅಲೋಶಿಯಸ್ ಫೆಸ್ಟ್ 2024 ಇದರ ಉದ್ಘಾಟನಾ ಸಮಾರಂಭವನ್ನು ಎಲ್.ಸಿ.ಆರ್.ಐ. ಸಭಾಂಗಣದಲ್ಲಿಶನಿವಾರ, ಆಗಸ್ಟ್ 31 ರಂದು ಬೆಳಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ“ ಎಂದು ಕುಲಪತಿ ವಂ.ಡಾ.ಪ್ರವೀಣ್ ಮಾರ್ಟಿಸ್ ಎಸ್.ಜೆ.

ಮಂಗಳೂರು: ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. “ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು ಮತ್ತಿತರರು ತಾರಾಗಣದಲ್ಲಿದ್ದಾರೆ. ಚಿತ್ರದಲ್ಲಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ: 2022-23ನೇ ಸಾಲಿನ ಗೌರವ ಪ್ರಶಸ್ತಿ ಘೋಷಣೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್‌ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಈಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನಲ್ಲಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ

ಆ.31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ ‘ನವ್ ರಂಗ್’ ಶನಿವಾರ, ಆಗೋಸ್ತ್ 31 ರಂದು ಇಳಿಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್ ಡಿ ಸೊಜಾ ಟ್ರಸ್ಟ್ ಇದರ ಸಲಹೆದಾರ ಸ್ಟೀಫನ್ ಪಿಂಟೊ, ಕಿಟಾಳ್ ಅಂತರ್ಜಾಲ ಪತ್ರಿಕೆಯ ಸಂಪಾದಕ ಎಚ್. ಎಮ್. ಪೆರ್ನಾಲ್

ಮಂಗಳೂರು : ಹೆಸರಾಂತ ಗಣಪತಿ ವಿಗ್ರಹಗಳ ತಯಾರಕ ಹಾಲಾಡಿ ದಾಮೋದರ ಶೆಣೈ ನಿಧನ

ಮಂಗಳೂರು :- ಆವೇ ಮಣ್ಣಿನ ಹೆಸರಾಂತ ಗಣಪತಿ ವಿಗ್ರಹಗಳ ತಯಾರಕರಾದ ಹಾಲಾಡಿ ದಾಮೋದರ ಶೆಣೈ (ಗಣಪತಿ ಮಾಮು) ಇವರು ಇಂದು ಬೆಳಿಗ್ಗೆ ಗುಂಡು ರಾವ್ ಲೇನಿನ ಸ್ವಗ್ರಹದಲ್ಲಿ ನಿಧನರಾದರು ಇವರಿಗೆ 85ವರ್ಷ ಇವರು ಕಳೆದ 70ವರ್ಷಗಳಿಂದ ಆವೇ ಮಣ್ಣಿನಿಂದ ಗಣಪತಿ ವಿಗ್ರಹಗಳನ್ನು ತಯಾರಿಸಿ ಡಾಕ್ಟರ್ ರಾಜ್ ಕುಮಾರ್ ಪ್ರಶಸ್ತಿ, ವೀರೇಂದ್ರ ಹೆಗ್ಡೆ ಅವರಿಂದ ಪ್ರಶಸ್ತಿ, ಪೇಜಾವರ ಸ್ವಾಮೀಜಿ ಇವರಿಂದ ಪ್ರಶಸ್ತಿ ಹಾಗೂ ಸನ್ಮಾನಗಳಿಸಿರುವರು. ಉತ್ತಮ ಕಲಾವಿದರಾದ ಇವರು ಸುಮಾರು 70

ಪೊಳಲಿ, ಉಳಾಯಿಬೆಟ್ಟು ಸೇತುವೆ ಘನ ವಾಹನ ಸಂಚಾರ ನಿಷೇಧ – ತುರ್ತು ಓಡಾಟ ಅನುಮತಿಗೆ ಶಾಸಕರು ,ಸಂಸದರ ಸಲಹೆ

ಗುರುಪುರ : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರೊಂದಿಗೆ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ, ರಾಜೇಶ್ ನಾಯ್ಕ್ ಅವರು ಡೀಸಿ ಕಚೇರಿಯಲ್ಲಿ ತುರ್ತು ಸಭೆ ನಡೆಸಿ, ಪರ್ಯಾಯ

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ – ಕಾಂತಾರದ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

ರಾಹುಲ್ ರಾವೆಲ್ ಅಧ್ಯಕ್ಷತೆಯ ತೀರ್ಪುಗಾರರ ಸಮಿತಿಯು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು ರಿಷಬ್ ಶೆಟ್ಟಿ ಶ್ರೇಷ್ಠ ನಟ ಮತ್ತು ನಿತ್ಯಾ ಮೆನನ್, ಮಾನಸಿ ಪಾರೇಕ್ ಜಂಟಿಯಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. ಮಲಯಾಳಿ ಚಿತ್ರ ಆಟ್ಟಂ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆಯಿತು. ಕಾಂತಾರ ಚಿತ್ರವು ಉತ್ತಮ ಮನೋರಂಜನಾ ಚಿತ್ರ ಎನಿಸಿತು. ಬ್ರಹ್ಮಾಸ್ತ್ರವು ಉತ್ತಮ ವಿಎಫ್‌ಎಕ್ಸ್ ಚಲನಚಿತ್ರ ಪ್ರಶಸ್ತಿಗೆ ಬಾಜನವಾಯಿತು.ಪ್ರಶಸ್ತಿ

ಪಡುಪಣಂಬೂರು : ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ ವತಿಯಿಂದ ಸ್ವಾತಂತ್ರೋತ್ಸವ

ಭಾರತ ಸರಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ಗ್ರಾಮ ಪಂಚಾಯತ್ ಪಡುಪಣಂಬೂರು, ರೋಟರಿ ಕ್ಲಬ್ ಬೈಕಂಪಾಡಿ ಇವರ ಜಂಟಿ ಆಶ್ರಯದಲ್ಲಿ ಫೇಮಸ್ ಯೂತ್ ಕ್ಲಬ್ (ರಿ) ಮತ್ತು ಮಹಿಳಾ ಮಂಡಲ ಪ್ರಾಯೋಜಕತ್ವದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಫೇಮಸ್ ಯೂತ್ ಕ್ಲಬ್ಬಿನ ಕಾರ್ಯಾಲಯದಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಫೇಮಸ್ ಯೂತ್ ಕ್ಲಬ್ಬಿನ  ಗೌರವಾಧ್ಯಕ್ಷರಾದ

ಮಂಗಳೂರು : ಡಾ. ಮುರಲೀಮೋಹನ್ ಚೂಂತಾರುರವರಿಗೆ ರಾಷ್ಟ್ರಪತಿ ಪದಕ

ಕಳೆದ ಒಂಬತ್ತೂವರೆ ವರುಷಗಳಿಂದ ದ.ಕ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟನಾಗಿ ಸೇವೆ ಸಲ್ಲಿಸುತ್ತಿರುವ ಬಾಯಿ ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಡಾ. ಮುರಲೀಮೋಹನ್ ಚೂಂತಾರುರವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.ಇವರು ಸಲ್ಲಿಸಿದ ಪ್ರಾಮಾಣಿಕ, ಪಾರದರ್ಶಕ, ನಿಷ್ಪಕ್ಷಪಾತ ಮತ್ತು ನಿಷ್ಕಾಮ ಸೇವೆಯನ್ನು ಪರಿಗಣಿಸಿ ಭಾರತ ಸರ್ಕಾರ ಗೃಹ ಮಂತ್ರಾಲಯದ ಶಿಫಾರಸಿನಂತೆ ಪ್ರತಿಷ್ಟಿತ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕಕ್ಕೆ ಆಯ್ಕೆಯಾಗಿದ್ದಾರೆ. ಇವರ ತಾಯಿ ಸರೋಜಿನಿ

ಕ್ರೀಡೆಯಿಂದ ಮಕ್ಕಳ ಮಾನಸಿಕ,ಶೈಕ್ಷಣಿಕ ಮತ್ತು ದೈಹಿಕ ಸಮತೋಲನ ಸಾಧ್ಯ – ನವೀನ್ ಹರಿಪಾದೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ, ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಆಶ್ರಯದಲ್ಲಿ ಕ್ರೀಡಾಕೂಟವನ್ನು ದಿನಾಂಕ 11.08.2024 ರಂದು ಭಾರತ್ ಮಾತಾ ಪ್ರಾಥಮಿಕ ಶಾಲೆ, ಪುನರೂರು ಇಲ್ಲಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಕೋಟ್ಯಾನ್ ಹರಿಪಾದೆಯವರು ವಹಿಸಿ ಕ್ರೀಡೆಯಿಂದ ಮಕ್ಕಳ ಮಾನಸಿಕ,ಶೈಕ್ಷಣಿಕ ಮತ್ತು ದೈಹಿಕ ಸಮತೋಲನ ಸಾಧ್ಯ