Home ಕರಾವಳಿ Archive by category ಮಂಗಳೂರು (Page 53)

ಅಂಚೆ ಇಲಾಖೆ ವತಿಯಿಂದ  ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಅಂಚೆ ಇಲಾಖಾ ನೌಕರರ ಆಕಾಂಕ್ಷಿಗಳ ತಂಡ ಮಂಗಳೂರು ಇವರ ವತಿಯಿಂದ ನಡೆದ ಎರಡು ದಿನಗಳ ಉಚಿತ ತರಬೇತಿ ಶಿಬಿರದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭ ನಡೆಯಿತು. ಕಟೀಲು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅರ್ಚಕರಾದ ಶ್ರೀ ಕಮಲಾದೇವಿ ಪ್ರಸಾದ ಆಸ್ರಣ್ಣ ಹಾಗೂ ಶ್ರೀಹರಿನಾರಾಯಣದಾಸ ಆಸ್ರಣ್ಣರು ಮಂಗಳೂರು ಆಕಾಂಕ್ಷಿ ತಂಡದ ಕಾರ್ಯಗಳನ್ನು ಶ್ಲಾಘಿಸಿದರು. ಇದೇ

ಕಾರ್ಕಳದ ಕ್ರೈಸ್ಟ್‌ಕಿಂಗ್ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ-v4 ನ್ಯೂಸ್ ವಾಹಿನಿಯ ಪತ್ರಕರ್ತ ಖಲೀಲ್ ಅವರಿಗೆ ಸನ್ಮಾನ

ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದು, ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು “ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ

ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ಜಿಲ್ಲೆಗೆ ಯಾವುದೇ ಕೆಡುಕಾಗಿಲ್ಲ: ಮಾಜಿ ಸಚಿವ ಬಿ. ರಮಾನಾಥ ರೈ

ಮಂಗಳೂರು: ಇಂದಿರಾ ಗಾಂಧಿ ಸರಕಾರ ಹೇರಿದ್ದ ತುರ್ತು ಪರಿಸ್ಥಿತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಯಾವುದೇ ರೀತಿಯ ಕೆಡುಕಾಗಿಲ್ಲ, ಬದಲಾಗಿ ಆ ಕಾಲದಲ್ಲಿ ಹಲವಾರು ಪ್ರಗತಿಪರ ಯೋಜನೆ ಜಾರಿಗೆ ಬಂದವು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಕಾಲದಲ್ಲಿ ಭೂ ಮಸೂಧೆ ಕಾಯ್ದೆ, ಬ್ಯಾಂಕ್ ರಾಷ್ಟ್ರೀಕರಣ, ಖುಣ ಪರಿಹಾರ ಕಾಯ್ದೆ, ಬಸ್ ರಾಷ್ಟ್ರೀಕರಣ ಸಹಿತ

ಸುರತ್ಕಲ್: ಜುಲೈ 19ರಂದು ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗ್ರ್ಯಾಂಡ್ ಸಿಟಿ ಬ್ರೋಚರ್ ಬಿಡುಗಡೆ

ಮಂಗಳೂರಿನ ಬಿಎಂಆರ್ ಗ್ರೂಪ್ ವತಿಯಿಂದ ಬಿಎಂಆರ್ ಗ್ರ್ಯಾಂಡ್ ಸಿಟಿ ಇದರ ಬ್ರೋಚರ್ ಬಿಡುಗಡೆ ಸಮಾರಂಭವು ಸುರತ್ಕಲ್‌ನ ಕೃಷ್ಣಾಪುರದಲ್ಲಿ ನಾಳೆ ನಡೆಯಲಿದೆ. ಜುಲೈ 19ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಬ್ರೋಚರ್ ಬಿಡುಗಡೆ ಸಮಾರಂಭ ನಡೆಯಲಿದ್ದು, ಬಿಎಂಆರ್ ಗ್ರೂಪ್‌ನ ಚೇರ್‌ಮೆನ್ ಹಾಜಿ ಕೆ. ಇಬ್ರಾಹಿಂ, ಖತೀಬ್ ಮುಸ್ತಫಾ ಸಅದಿ, ಮಾಜಿ ಶಾಸಕ ಮೊಯ್ದಿನ್ ಬಾವಾ, ಸುರತ್ಕಲ್ ಸರ್ಕಲ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್, ಮಂಗಳೂರು ಅರ್ಬನ್ ಡೆವಲಪ್‌ಮೆಂಟ್ ಅಥೋರಿಟಿಯ ಸದಸ್ಯ

ಮಂಗಳೂರು : ಡೆಂಗ್ಯೂ ಬಾದಿಸದಂತೆ ಎಚ್ಚರ ವಹಿಸಿ- ಡೆಂಗ್ಯೂ ನಿರ್ಮೂಲನೆ ಸಮಿತಿಯ ಸಭೆಯಲ್ಲಿ ಅಧಿಕಾರಿಗಳಿಗೆ ಮೇಯರ್ ಸೂಚನೆ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಡೆಂಗ್ಯೂ ಬಾದಿಸದಂತೆ ಎಚ್ಚರಿಕೆ ವಹಿಸಬೇಕಾಗಿರುವುದನ್ನು ಗಮನಿಸಿ ಮೇಯರ್ ಸುಧೀರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಮಿತಿ ಸಭಾಂಗಣದಲ್ಲಿ ಡೆಂಗ್ಯೂ ನಿಮೂ೯ಲನೆ ಸಮಿತಿಯ ಸಭೆ ಜರಗಿತು. ಸಭೆಯಲ್ಲಿ ಮಾತನಾಡಿದ ಮೇಯರ್ ರವರು ಡೆಂಗ್ಯೂಯನ್ನು ತಡೆಗಟ್ಟಲು ಮೊತ್ತ ಮೊದಲನೇಯದಾಗಿ ಸೊಳ್ಳೆ ಉತ್ಪತ್ತಿಯಾಗುವುದನ್ನು ತಡೆಯಬೇಕು. ಪಾಲಿಕೆಯ ಎಂ.ಪಿ.ಡಬ್ಲ್ಯೂ ಕಾಯ೯ಕತ೯ರು ಮನೆ ಮನೆ ಭೇಟಿ ನೀಡಿ ಮನೆಯ ಸುತ್ತ ಮುತ್ತಲುನಲ್ಲಿರುವ

ರಾಷ್ಟ್ರಪ್ರಶಸ್ತಿ ವಿಜೇತ ರಂಗಕರ್ಮಿ ಸದಾನಂದ ಸುವರ್ಣ ನಿಧನ

ರಂಗ ಕರ್ಮಿ, ನಾಟಕಕಾರ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ತಯಾರಕ, ನಿರ್ದೇಶಕ ಸದಾನಂದ ಸುವರ್ಣ ಅವರು ಮಂಗಳೂರಿನ ಕಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.ಅವರಿಗೆ 93 ವರುಷ ವಯಸ್ಸಾಗಿತ್ತು. ಮುಂಬಯಿಯಲ್ಲಿ ತುಳು ಕನ್ನಡ ನಾಟಕಕಾರ ನಟರಾಗಿ ಖ್ಯಾತಿ ಗಳಿಸಿದ್ದ ಸದಾನಂದ ಸುವರ್ಣ ಅವರು ಕಳೆದ ಕಾಲು ಶತಮಾನದಿಂದ ಮಂಗಳೂರು ನಿವಾಸಿಯಾಗಿದ್ದರು. ಕುಬಿ ಮತ್ತು ಇಯಾಲ, ಘಟಶ್ರಾದ್ಧ ಮಾದರಿಯ ಸದಭಿರುಚಿಯ ಚಿತ್ರ ನಿರ್ಮಿಸಿದ್ದರು. ಅವರ ಗುಡ್ಡೆದ ಭೂತ ಟೀವಿ

MRPL 4 ನೇ ಹಂತದ ನಿರ್ವಸಿತರ ಉದ್ಯೋಗ ಹಾಗೂ ಪುನರ್ವಸತಿ ಬೇಡಿಕೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ, ಅಧಿಕಾರಿಗಳ ಸ್ಪಂದನೆ

ಸುರತ್ಕಲ್ : MRPL 4ನೇ ಹಂತದ ಭೂ ನಿರ್ವಸಿತರಾಗುವ ಕುತ್ತೆತೂರು ಪೆರ್ಮುದೆ ಎಕ್ತಾರು ಗ್ರಾಮದ ನಿವಾಸಿಗಳಿಗೆ ಸಿಗಬೇಕಾದ ಪುನರ್ವಸತಿ ಹಾಗೂ ಉದ್ಯೋಗ ಮತ್ತಿತ್ತರ ಬೇಡಿಕೆಗಳ ಈಡೇರಿಸುವ ಕುರಿತಂತೆ ದ.ಕ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜು.12ರಂದು ಮಹತ್ವದ ಸಭೆ ನಡೆಯಿತು. ಸ್ಥಳೀಯ ಶಾಸಕರು ಮತ್ತು ದ.ಕ ಜಿಲ್ಲಾ ಸಂಸದರು ಮಾತಾನಾಡಿ MRPL ನ ವಿಸ್ತರಣೆಗಾಗಿ ಸ್ಥಳಿಯರು ಭೂಮಿಯನ್ನು ತ್ಯಾಗ ಮಾಡುತ್ತಿದ್ದು ಅವರಿಗೆ

ಪಡೀಲ್ ಪಂಪ್ವೆಲ್ ರಸ್ತೆ ಅವ್ಯವಸ್ಥೆ:  ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಐಎಂ ನಿಂದ ಪ್ರತಿಭಟನೆ

ಪಡೀಲ್ ಪಂಪ್ವೇಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ವಾರ್ಟ್‌ಸಿಟಿ ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದೆ. ಕಳೆದ ಎರಡು ವರ್ಷಗಳಧಿಕ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ ಜನ ಪರಿತಪಿಸುವಂತಾಗಿದೆ. ನಗರದಾದ್ಯಂತ ಅಭಿವೃದ್ಧಿ ಕಾಮಗಾರಿಗಳ ಅವ್ಯವಸ್ಥೆ ನೋಡಿದರೆ ಇದೆಲ್ಲಾ ಶಾಸಕ ವೇದವ್ಯಾಸರ ಮುಖಕ್ಕೆ ಹಿಡಿದ ಕೈಗನ್ನಡಿ. ರಸ್ತೆ ನಿರ್ಮಾಣ ತ್ವರಿತಗತಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಮೇಯರ್ ಕಚೇರಿಗೆ

ಸುರತ್ಕಲ್:  ಡಾ ಜಿ ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ನಿಧನ

ಸುರತ್ಕಲ್:  ಇಡ್ಯಾ ಗೋವಿಂದ ದಾಸ್  ಕಾಲೇಜ್ ಬಳಿಯ ಕೇಶವ ಚೌಟ ಕಂಪೌಂಡ್ ನಿವಾಸಿ ಡಾ ಜಿ ಮಂಜಯ್ಯ ಶೆಟ್ಟಿ (76) ಅವರು ಜುಲೈ 11 ರಂದು ಬೆಳಿಗ್ಗೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ‌. ಮೃತರು ಕೃಷಿಕರಾಗಿದ್ದು, ವೈದ್ಯಕೀಯ ಸೇವೆ, ರಾಜಕೀಯ ಸೇವೆ ಮತ್ತು ಇನ್ನಿತರ ಸೇವಾ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಸುರತ್ಕಲ್ ಕರ್ನಾಟಕ ಸೇವಾ ವೃಂದದಲ್ಲಿ ಉಪಾಧ್ಯಕ್ಷರಾಗಿ, ಸುರತ್ಕಲ್ ಬಂಟರ ಸಂಘದ

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಂದು ದರೋಡೆ ಪ್ರಕರಣ

ಮಂಗಳೂರಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆ ಕಣಿಯ ಮನೆಯೊಂದರಲ್ಲಿ ಸೋಮವಾರ ರಾತ್ರಿ ಕಳವು ನಡೆದಿದೆ. ಮನೆಮಂದಿ ಮಲಗಿದ್ದಾಗ ಕಿಟಕಿ ಮುರಿದು ಚಿನ್ನಾಭರಣ ಕಳವು ಮಾಡಲಾಗಿದೆ. ಅಲ್ಲದೆ ಕಳ್ಳರು ಕಾರನ್ನು ಕೂಡ ಕಳವು ಮಾಡಿದ್ದಾರೆಂದು ತಿಳಿದುಬಂದಿದೆ. ಕಳೆದ ಶನಿವಾರ ನಗರದ ಕೋಡಿಕಲ್ ಬಳಿ ಕಳ್ಳತನ ನಡೆದಿತ್ತು. ಚಡ್ಡಿಗ್ಯಾಂಗ್ ಆ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು. ಅದೇ ತಂಡ ಕೋಟೆಕಣಿಯಲ್ಲಿಯೂ ಕೃತ್ಯ ಎಸಗಿದೆ ಎಂದು ಅಂದಾಜಿಸಲಾಗಿದೆ.