ಉಳ್ಳಾಲ: ಖಾಲಿಯಿರುವ ಗುಡ್ಡಪ್ರದೇಶಗಳನ್ನು ಉಪಯೋಗಿಸಿ ಗೇರು ಬೆಳೆ ಬೆಳೆಸುವ ಕಾರ್ಯಕ್ಕೆ ಮುಂದಾಗಿರಿ. ಕ್ಯಾಷ್ಯೂ ಕಾರ್ಖಾನೆಗಳು ಅನೇಕ ಇದ್ದರೂ ದೇಶಕ್ಕೆ ವಿದೇಶಗಳಿಂದ ಗೋಡಂಬಿ ಆಮದು ಮಾಡಲಾಗುತ್ತಿದೆ. ಶೀಘ್ರವೇ ಮನೆಗೊಂದು ಗೇರುಗಿಡ ಯೋಜನೆಯನ್ನು ನಿಗಮದಿಂದ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್ ಗಟ್ಟಿ ಹೇಳಿದರು.
ಎರಡನೆಯ ಅತ್ಯಾಚಾರ ಪ್ರಕರಣದಲ್ಲಿ ಮಾಜೀ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿತು. ಪ್ರಜ್ವಲ್ ರೇವಣ್ಣ ಮೇಲೆ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈಗಾಗಲೇ ಮೊದಲ ಅತ್ಯಾಚಾರ ಪ್ರಕರಣ ಮತ್ತು ಒಟ್ಟು ಅಸಹ್ಯ ವೀಡಿಯೋಗಳಿಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿ ಇದ್ದಾರೆ. ಎರಡನೆಯ ಪ್ರಕರಣ ಸಂಬಂಧ ವಿಚಾರಣೆಗೆ ಕರೆತರಲಾಗಿತ್ತು.
ವಕೀಲರು ತನ್ನ ಕಕ್ಷಿದಾರನನ್ನು ಕೋರ್ಟಿನಲ್ಲಿ ಸಮರ್ಥಿಸಿಕೊಳ್ಳಬೇಕು, ಬೀದಿಯಲ್ಲಿ ಅಲ್ಲ, ಆತ ವಕೀಲ ಆಗಿರಲು ಅನ್‌ಫಿಟ್ ಎಂದು ಮೇಲ್ಮನೆ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ದರ್ಶನ್ ವಕೀಲನ ಬಗೆಗೆ ಹೇಳಿದರು. ಚಿಕ್ಕಮಗಳೂರಿನಲ್ಲಿ ಅವರು ಪತ್ರಿಕಾಗೊಟ್ಟಿ ನಡೆಸಿ ಮಾತನಾಡಿದರು. ವಿಧಾನ ಪರಿಷತ್ ಸದಸ್ಯರಾಗಿ ಎರಡನೆಯ ಬಾರಿ ಆಯ್ಕೆಯಾಗಿರುವ ಭೋಜೇಗೌಡರು ಬಾರ್ ಕೌನ್ಸಿಲ್‌ನ ಮಾಜೀ ಉಪಾಧ್ಯಕ್ಷರೂ ಆಗಿದ್ದವರು. ಗಾಂಧೀಜಿಯವರನ್ನು ಕೊಂದ ಗೋಡ್ಸೆ, ಇಂದಿರಾ ಗಾಂಧಿ ಹಂತಕರಿಗೂ
ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಮಂಗಳೂರಿನ ಲಾಲ್‌ಭಾಗ್‌ನ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಕೊಂಕಣಿ ಸಾಹಿತ್ಯ ಅಕಾಡೆಮಿಯ ಕಚೇರಿ ಆವರಣದಲ್ಲಿ ನಡೆಯಿತು. ಕರ್ನಾಟಕ ಕೊಂಕಣಿ ಅಕಾಡೆಮಿಯ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮತ್ತು ಸದಸ್ಯರ ಅಧಿಕಾರ ಸ್ವೀಕಾರ ಸಮಾರಂಭ ಜರುಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು, ಅಕಾಡೆಮಿಗಳು ರಾಜಕೀಯ
ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ
ಮಂಗಳೂರಿನ ಪತ್ರಿಕಾಭವನದಲ್ಲಿ ಉದ್ಯಮಿ ಡಾ. ರೊನಾಲ್ಡ್ ಕೊಲಾಸೊ ಅವರಿಗೆ ಅವರು ಪ್ರೆಸ್ ಕ್ಲಬ್ ಗೌರವ ಅತಿಥಿ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮ ವನ್ನು ಉದ್ಘಾಟಿಸಿದ ಮಹಾರಾಷ್ಟ್ರ ಕನ್ನಡಿಗ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ ಉದ್ಘಾಟಿಸಿದರು. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಶಾಸಕ ಐವನ್ ಡಿ ಸೋಜ, ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನ್ಲಿ
ಮಂಗಳೂರಿನ ವಾಮಂಜೂರಿನಲ್ಲಿರುವ ಮಾನಸ ವಾಟರ್ ಪಾರ್ಕ್‌ನಲ್ಲಿ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್ ಸದಸ್ಯತ್ವ ಆರಂಭಗೊಂಡಿದ್ದು, ಆ ಮೂಲಕ ವಿಶೇಷ ಸೌಲಭ್ಯಗಳನ್ನು ಪಡೆದುಕೊಳ್ಳಬಹದು. ಮನೋರಂಜನೆಯ ವಾಟರ್ ಪಾರ್ಕ್ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್, ಹಚ್ಚ ಹಸಿರಿನ ಪರಿಸರದಲ್ಲಿ ಪ್ರವಾಸಿಗರಿಗೆ ಮನೋರಂಜನೆ ನೀಡುವ ಪಾರ್ಕ್ ಆಗಿದ್ದು, ಅನೇಕ ಸೌಲಭ್ಯಗಳನ್ನು ಜನತೆಗಾಗಿ ಕಲ್ಪಿಸಿಕೊಟ್ಟಿದ್ದಾರೆ. ಇದೀಗ ಮಾನಸ ಮ್ಯಾಕ್ಸ್ ರಾಯಲ್ ಪ್ರೀಮಿಯಂ ಕ್ಲಬ್
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು
ಬ್ಯಾಂಕಿನ 2023-24ನೇ ವರ್ಷದ ಸಿಬ್ಬಂದಿ ಕಾರ್ಯಕ್ಷಮತೆ ವಿಶ್ಲೇಷಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ಆಡಳಿತ ಕಚೇರಿಯ ಪಿ.ಎಫ್.ಎಕ್ಸ್ ಸಲ್ಡಾನಾ ಸ್ಮಾರಕ ಸಭಾಂಗಣದಲ್ಲಿ ನಡೆಯಿತು. ಸಮೀಕ್ಷೆಯು ಆಲ್ಡ್ರಿನ್ ಡಿಸೋಜ ಮತ್ತು ತಂಡದ ನೇತೃತ್ವದಲ್ಲಿ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಮಂಗಳೂರು ಧರ್ಮಪ್ರಾಂತ್ಯದ ಮಾಜಿ ಪ್ರೊಕ್ಯುರೇಟರ್ ರೆ| ಫಾ| ಜಾನ್ ವಾಸ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಫಾ| ಜಾನ್
ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಪೇಮಾ ಖಂಡು ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಪೇಮಾ ಖಂಡು ಅವರು ಅರುಣಾಚಲಕ್ಕೆ ಮೂರನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದರು.ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್ ಕೆ.ಟಿ.ಪರ್ನಾಯಕ್ ಅವರು ಪ್ರಮಾಣವಚನ ಬೋದಿಸಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಬಿಜೆಪಿ ಸತತ ಮೂರನೇ ಬಾರಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, 60 ಸ್ಥಾನಗಳ ಪೈಕಿ 46 ಸ್ಥಾನಗಳನ್ನು ಗೆದ್ದಿದೆ.




























