ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು. ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು
ಮಂಗಳೂರು: ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಮತ್ತು ತುಳು ಧರ್ಮ ಸಂಶೋಧನಾ ಕೇಂದ್ರ ಪೇರೂರು ಇವರ ಸಹಯೋಗದಲ್ಲಿ ಪೇರೂರು ರುಕ್ಕು ಪೂಜಾರ್ದಿ, ಬಾಗಿ ಪೂಜಾರ್ದಿ, ಲೆಚ್ಚು ಪೂಜಾರ್ದಿ ನೆನಪಿನ ಸಾವಿತ್ರಿಬಾಯಿ ಪುಲೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಮೇ 11ರ ಶನಿವಾರ ಮಧ್ಯಾಹ್ನ 3.30ಕ್ಕೆ ನಡೆಯಲಿದೆ.ಮಂಗಳೂರಿನ ಜ್ಯೋತಿ ಸರ್ಕಲ್‌ನ ಮಹಿಳಾ ಸಭಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಬಾರಿ ಮೂಡುಬಿದಿರೆಯ ಅಲ್ ಪುರ್ಕಾನ್ ಇಸ್ಲಾಮಿಕ್ ಇಂಗ್ಲಿಷ್ ಮೀಡಿಯಂ ಶಾಲೆಯ ಪ್ರಾಂಶುಪಾಲೆ
ಬೇಸಿಗೆ ಸಮಯವನ್ನು ಕಳೆಯಲು ಪ್ರವಾಸ ಕೈಗೊಳ್ಳುವವರಿಗೆ ಸಿಹಿಸುದ್ದಿ..ಮಂಗಳೂರಿನ ವಾಮಂಜೂರಿನಲ್ಲಿ ಅತ್ಯಾಧುನಿಕ ಸೌಲಭ್ಯದೊಂದಿಗೆ ಬೇಸಿಗೆ ಸಮಯವನ್ನು ಕಳೆಯಲು ಸುಸಜ್ಜಿತ ರೀತಿಯಲ್ಲಿದ್ದು ವಿವಿಧ ಮನೋರಂಜನಾ ವಾಟರ್ ಗೇಮ್ಸ್ ಸೇರಿದಂತೆ ಕುದುರೆ ಸವಾರಿ, ಜಿಪ್ ಲೈನ್ ಮೂಲಕ ಜನರನ್ನು ತನ್ನತ್ತ ಸೆಳೆಯುತ್ತಿದೆ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್. ಈ ಬಗ್ಗೆ ಒಂದು ಸ್ಪೇಷಲ್ ರಿಪೋರ್ಟ್ ಇಲ್ಲಿದೆ ನೋಡಿ….. ಮಂಗಳೂರಿನ ವಾಮಂಜೂರಿನ ಪಿಲಿಕುಳದ ಬಳಿಯಿರುವ ಮಾನಸ
ಅಶ್ಲೀಲ ವಿಡಿಯೋ ಪ್ರಕರಣ ಆರೋಪದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ವಿದೇಶದಿಂದ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದ್ದು, ಭಾರತಕ್ಕೆ ಬಂದಿಳಿಯುತ್ತಿದ್ದಂತೆ ವಶಕ್ಕೆ ಪಡೆದುಕೊಳ್ಳಲು ಎಸ್‌ಐಟಿ ಸಿದ್ಧತೆ ಮಾಡಿಕೊಂಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಗೋವಾ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಲ್ಲಿ ವಿಶೇಷ ಕಣ್ಣಾವಲಿರಿಸಲಾಗಿದೆ. ಪ್ರಜ್ವಲ್ ಪತ್ತೆಗಾಗಿ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡಾ ಜಾರಿಯಾಗಿರುವುದರಿಂದ ಪ್ರಜ್ವಲ್ ಭಾರತಕ್ಕೆ
ಉಳ್ಳಾಲ : ನಗರದ ಸಿಟಿ ಸೆಂಟರ್ ಮಾಲ್ ಗೆಂದು ತೆರಳಿದ್ದ ಚೆಂಬುಗುಡ್ಡೆ ನಿವಾಸಿ ಇಬ್ಬರು ಮಕ್ಕಳ ತಾಯಿ ನಾಪತ್ತೆಯಾಗಿರುವ ಕುರಿತು ಮಂಗಳೂರು ಉತ್ತರ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ.ಚೆಂಬುಗುಡ್ಡೆ ಕೆರೆಬೈಲ್ ಗುಡ್ಡೆ ನಿವಾಸಿ ಸಫಾನ (27) ನಾಪತ್ತೆ ಯಾದವರು.ಎ.28 ರಂದು ತಾಯಿ ಜೊತೆಗೆ ಸಿಟಿಸೆಂಟರ್ ಗೆಂದು ತೆರಳಿರುವ ಸಫಾನ, ಬಳಿಕ ಮನೆಯತ್ತ ಬಾರದೇ ನಾಪತ್ತೆಯಾಗಿದ್ದಾಳೆ. ವಿವಾಹಿತೆಯಾಗಿರುವ ಸಫಾನ ಇಬ್ಬರು ಮಕ್ಕಳ ತಾಯಿಯಾಗಿದ್ದಾಳೆ. ಈಕೆಯನ್ನು
ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಧಿಕಾರಿ ಹಾಗೂ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ
ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು. ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ. ಕಟೀಲಿನಿಂದ ಶಿಬರೂರಿಗೆ
ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನಿ ಬೃಹತ್ ಮಾರಾಟ ಮೇಳ” ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್ ನಲ್ಲಿ ಶುಭಾರಂಭಗೊಂಡಿತು. ಖ್ಯಾತ ನಟ, ನಿರ್ದೇಶಕ, ನಿರ್ಮಾಪಕ, ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ಅವರು ದೀಪ
ಬೈಕ್ ಢಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದ ಪಾದಚಾರಿಯೊಬ್ಬನ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರ ಹೊರವಲಯದ ಕೂಳೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್( 29 ) ಎಂದು ಗುರುತಿಸಲಾಗಿದೆ. ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕೊಂದು ಢಿಕ್ಕಿಯಾಗಿ ಬಿದ್ದಿದ್ದ ಈತನ ಮೇಲೆ ಅತಿವೇಗದಿಂದ ಬರುತ್ತಿದ್ದ ಟ್ಯಾಂಕರ್ ಹರಿದಿದೆ ಎನ್ನಲಾಗಿದೆ.
ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು. ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಇದೇ ವೇಳೆ ಫಾದರ್ ಮುಲ್ಲರ್




























