ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ,
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ
ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ
ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ
ನವಮಂಗಳೂರು ಬಂದರು ಪ್ರಾಧಿಕಾರವು ಈ ಸಾಲಿನ 6ನೇ ಹಾಗೂ 2023-24ನೇ ಆರ್ಥಿಕ ವರ್ಷದ ಕೊನೆಯ ಕ್ರೂಝ್ ‘ಸೆವೆನ್ ಸೀಸ್ ಮರೈನರ್’ನ್ನು ಬರಮಾಡಿಕೊಂಡಿತು. ಸೆವೆನ್ ಸೀಸ್ ಮರೈನರ್ 610 ಪ್ರಯಾಣಿಕರು ಮತ್ತು 440 ಸಿಬ್ಬಂದಿಯನ್ನು ಹೊತ್ತು ಮಂಗಳೂರಿಗೆ ಆಗಮಿಸಿದ್ದು, ಪ್ರವಾಸಿಗರಿಗೆ ನವ ಮಂಗಳೂರು ಬಂದರಿನ ಹಡಗು ತಂಗುದಾಣದಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಪ್ರವಾಸಿಗರು ಕರಾವಳಿಯ ಪ್ರಸಿದ್ಧ ಪ್ರವಾಸಿ ತಾಣಗಳು, ದೇವಾಲಯ, ಮಾರುಕಟ್ಟೆ ಮತ್ತು ಅಂಗಡಿಗಳಿಗೆ ತೆರಳಲು
ಮಂಗಳೂರಿನ ನವಭಾರತ್ ಸರ್ಕಲ್‌ನ ಗುಲಾಬಿ ಶ್ರೀಪಾದ್ ಎನ್‌ಕ್ಲೇವ್‌ನಲ್ಲಿ ಸುಸಜ್ಜಿತವಾದ ಗ್ಯಾಲಕ್ಸಿ ಯುನಿಸೆಕ್ಸ್ ಸಲೂನ್ ಶುಭಾರಂಭಗೊಂಡಿತು.ನೂತನ ಸಲೂನನ್ನು ಗಣ್ಯರು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮುಡಿಪುವಿನ ಸೂರಜ್ ಪಿಯು ಕಾಲೇಜಿನ ಚೇರ್‌ಮ್ಯಾನ್ ಡಾ. ಮಂಜುನಾಥ್ ರೇವಣ್ಕರ್ ಅವರು ಮಾತನಾಡಿ, ಮಂಗಳೂರು ನಗರದಲ್ಲಿ ಸುಸಜ್ಜಿತ ಮಾದರಿಯಲ್ಲಿ ಗ್ಯಾಲಕ್ಸಿ ಸಲೋನ್ ಕಾರ್ಯಾರಂಭಗೊಂಡಿರುವುದು ಸಂತಸದ ವಿಚಾರ ಎಂದರು.
ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಹಳಷ್ಟು ಜನ ಪರ ಯೋಜನೆಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿದೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದೆ ಅಭಿವೃದ್ಧಿ, ಬಡತನ ನಿರ್ಮೂಲನೆಗೆ ಪ್ರಾಶಸ್ತ್ಯವಿತ್ತು. ಆದ್ದರಿಂದಲೇ ಬಿಜೆಪಿ ಕಾಲಘಟ್ಟದಲ್ಲಿ ಯಾವ ಯೋಜನೆಗಳೂ ಬಾರದಿದ್ದರೂ, ಭಾವನಾತ್ಮಕವಾಗಿ ಅವರು ಜನರನ್ನು ಕೆರಳಿಸಿ ಚುನಾವಣೆಯಲ್ಲಿ ಗೆಲ್ಲುತ್ತಿದ್ದಾರೆ. ಆದ್ದರಿಂದ ಈ ಬಾರಿ ಹುರುಪಿನಿಂದ
ಮುಕುಂದ್‌ಎಂಜಿಎಂರಿಯಾಲ್ಟಿಯವರಿಂದ ಮಂಗಳೂರಿನ ವಿಮಾನ ನಿಲ್ದಾಣ ರಸ್ತೆಯ ದೇರೇಬೈಲ್‌ನಲ್ಲಿ ನಿಮಾರ್ಣಗೊಳ್ಳುತ್ತಿರುವ ‘ಕೇದಾರ್-ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ವಸತಿ ಸಮುಚ್ಚಯದಲ್ಲಿ ಗ್ರಾಹಕರ ವೀಕ್ಷಣೆಗೆ ಮಾದರಿ ಫ್ಲ್ಯಾಟ್ ಸಿದ್ಧವಾಗಿದ್ದು ಇಲ್ಲಿ ಹೈ ಲಿವಿಂಗ್ ಲಕ್ಷುರಿ ವೈಶಿಷ್ಟ್ಯಗಳಾದ ಇನ್ಫಿನಿಟಿ ಸ್ವಿಮ್ಮಿಂಗ್ ಪೂಲ್‌ಆನ್‌ರೂಫ್‌ಟಾಪ್, ಬ್ಯಾಡ್ಮಿಂಟನ್‌ಕೋರ್ಟ್, ವಿಶಾಲವಾದಡಬಲ್ ಹೈಟ್ ಹೋಂದಿರುವ ವಿಸಿಟರ್ಸ್ ಲೋಬಿ, ಸ್ನೇಕ್ಸ್‌ಆಂಡ್ ಲ್ಯಾಡರ್ಸ್
ಖ್ಯಾತ ನಟ, ನಾಟಕ ಕಲಾವಿದ, ಹಾಡುಗಾರ ಪ್ರಸಾಧನಕಾರ ಎಸ್. ರಾಮದಾಸ್ (86) ಇಲ್ಲಿನ ಟಿ. ಟಿ. ರಸ್ತೆ ನಿವಾಸಿ ಅಲ್ಪ ಕಾಲದ ಅಸೌಖ್ಯದಿಂದಾಗಿ 27.03.2024 ರಂದು ಮಧ್ಯಾಹ್ನ ನಗರದ ಸ್ವಗ್ರಹದಲ್ಲಿ ನಿಧನ ಹೊಂದಿದರು. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ ಯಲ್ಲಿ 32 ವರ್ಷ ಸೇವೆ ಸಲ್ಲಿಸಿದ ಇವರು ಕಲ್ಕೂರ ಜಾಹಿರಾತು ಸಂಸ್ಥೆಯಲ್ಲಿ ಕೆಲವು ವರ್ಷ ಕೆಲಸ ಮಾಡಿದ್ದರು .ದಶಕಗಳ ಕಾಲದ ಹಿಂದೆ ಪ್ರಾಥಮಿಕ ನವೋದಯ ಕಲಾವೃoದದಲ್ಲಿ ಮಸಣಕ್ಕೆ, ತರಂಗ ತರಂಗ ಅಂತರಂಗ, ಹೆಗಲಿಗೆ
ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಕೋಳಿ, ಮೀನಿನ ಆಹಾರ ತಯಾರಿಕಾ ಘಟಕವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ನಷ್ಟ ಸಂಭವಿಸಿದೆ. ಶಿಹಾರ್ ಎಂಟರ್ ಪ್ರೈಸಸ್ ಎಂಬ ಈ ಫ್ಯಾಕ್ಟರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಫ್ಯಾಕ್ಟರಿಯನ್ನು ಆವರಿಸಿದೆ. ಸ್ಥಳಕ್ಕೆ ಆಗಮಿಸಿದ ಎಂಆರ್ ಪಿಎಲ್, ಎನ್ ಎಂಪಿಟಿನಿಂದ ಸುಮಾರು 8 ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟವು. ನಿರಂತರ ಮೂರೂವರೆ ಗಂಟೆಗಳ




























