Home ಕರಾವಳಿ Archive by category ಮಂಗಳೂರು (Page 89)

ಮಂಗಳೂರು|| ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್: ವಿಶೇಷ ಅತಿಥಿಯಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಮಂಗಳೂರಿನ ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನ ವಾರದ ವಿಶೇಷ ಮೀಟಿಂಗ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದು, ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನಲ್ಲಿರುವ ಉದ್ಯಮಿಗಳಿಗೆ ಉತ್ಸಾಹ ತುಂಬಿಸಿದರು. ಮಂಗಳೂರಿನಲ್ಲಿ ಉದ್ಯಮ ಕ್ಷೇತ್ರದಲ್ಲಿ

ಮಂಗಳೂರು: ದಸರಾದ ಮೆರಗು ಹೆಚ್ಚಿಸಿದ ಕ್ರೈಸ್ತ ಬಾಂಧವರ ಟ್ಯಾಬ್ಲೋ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ತತ್ವಚಿಂತನೆಯನ್ನು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಸ್ಥಾಪಿತ ಕುದ್ರೋಳಿ ಶ್ರೀಕ್ಷೇತ್ರದ ದಸರಾ ವಿಶ್ವವಿಖ್ಯಾತ ಮಂಗಳೂರು ದಸರಾವೆಂದೇ ಪ್ರಸಿದ್ಧ. ಈ ದಸರಾ ಶೋಭಾಯಾತ್ರೆಯಲ್ಲಿ ಇದೇ ಮೊದಲ ಬಾರಿಗೆ ಕ್ರೈಸ್ತ ಬಾಂಧವರ ಟ್ಯಾಬ್ಲೊ ಮಂಗಳೂರು ದಸರಾ ಮೆರುಗು ಹೆಚ್ಚಿಸಿದೆ. ಜೊತೆಗೆ ಧರ್ಮಧರ್ಮಗಳ ನಡುವಿನ ಬಾಂಧವ್ಯ ವೃದ್ಧಿಸಿದೆ. ಕ್ರೈಸ್ತ ಬಾಂಧವರ ಸ್ತಬ್ಧಚಿತ್ರ ಇದೇ ಮೊದಲ ಬಾರಿಗೆ ಮಂಗಳೂರು ದಸರಾ

ಮಂಗಳೂರು: ಮಂಗಳೂರು ದಸರಾ ಶೋಭಾಯಾತ್ರೆಯಲ್ಲಿ ಗಮನಸೆಳೆದ ಮಂತ್ರದೇವತೆ ಟ್ಯಾಬ್ಲೋ

ಕುದ್ರೋಳಿ ಕ್ಷೇತ್ರದ ಮಂಗಳೂರು ದಸರಾ ಶೋಭಾಯಾತ್ರೆ ವೈಭವದಿಂದ ನಡೆದಿದ್ದು ಈ ಪೈಕಿ ಅಪ್ಪೆ ಮಂತ್ರದೇವತೆ ಟ್ಯಾಬ್ಲೋ ಜನರ ಗಮನ ಸೆಳೆಯಿತು. ನಗರದ ಪದವು ಫ್ರೆಂಡ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ 9ನೇ ವರ್ಷದ ಕಾಣಿಕೆಯಾಗಿ ಮಂತ್ರದೇವತೆ ದೈವದ ಸ್ತಬ್ಧಚಿತ್ರ ಮಾಡಲಾಗಿತ್ತು. ಅಪ್ಪೆ ಮಂತ್ರದೇವತೆ ಹೆಸರಿನ ಟ್ಯಾಬ್ಲೋದಲ್ಲಿ ದೈವದ ಅಪಚಾರ ಆಗದಂತೆ, ದೈವಾರಾಧನೆ ಮಹತ್ವ ಸಾರುವ ಯತ್ನ ಮಾಡಲಾಯಿತು. ದೈವರಾಧನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಟಿಯಿಂದ ಮಂತ್ರದೇವತೆಯ

ಕಡಬ: ಕಾಡಾನೆ ಮತ್ತು ಇತರ ಪ್ರಾಣಿಗಳ ಉಪಟಳ: ಅ.26ರಂದು ಬೃಹತ್ ಪ್ರತಿಭಟನೆಗೆ ನಿರ್ಧಾರ

ಕಡಬ: ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಆನೆ ಹಾಗೂ ಇತರ ಪ್ರಾಣಿಗಳ ಉಪಟಳ ಮಿತಿ ಮೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಗ್ರಹಿಸಿ ಅ.26ರಂದು ಕಡಬದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಐತ್ತೂರು ಮರ್ಧಾಳ ಜಾಗೃತ ರೈತ ಕುಟುಂಬಗಳ ಒಕ್ಕೂಟದ ಅಧ್ಯಕ್ಷ ಅತ್ಯಡ್ಕ ನಾರಾಯಣ ಶೆಟ್ಟಿ ತಿಳಿಸಿದ್ದಾರೆ. ಕಡಬದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಆನೆ ಉಪಟಳದಿಂದ ಬೇಸತ್ತ ರೈತರು ಒಗ್ಗೂಡಿ

ಬೈಕ್ ಧಾವಂತಕ್ಕೆ ಮಹಿಳೆ ಬಲಿ

ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ ನಂತರ ಬಬ್ಬುಕಟ್ಟೆ ಬಳಿಯ ಸೋಝಾ ಇಲೆಕ್ಟ್ರಿಕಲ್ಸ್ ಬಳಿಯ ಮನೆಯಲ್ಲಿ ವಾಚ್ ಮೆನ್ ವೃತ್ತಿ

“ವಿಶ್ವ ಪೊಲಿಯೋ ದಿನ -ಅಕ್ಟೋಬರ್-24” || V4NEWS

ಪೊಲಿಯೋ ಎನ್ನುವ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ಮತ್ತು ಶಾಶ್ವತ ಅಂಗ ವೈಕಲ್ಯಕ್ಕೆ ಕಾರಣವಾಗುವ ರೋಗವಾಗಿದ್ದು, ಲಸಿಕೆಯಿಂದ ತಡೆಗಟ್ಟಲು ಸಾಧ್ಯವಿದೆ. ಪ್ರತಿ ವರ್ಷ ಅಕ್ಟೋಬರ್ -24 ರಂದು “ವಿಶ್ವ ಪೊಲಿಯೋ ದಿನ” ಎಂದು ಆಚರಿಸಿ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪೊಲಿಯೋ ರೋಗಕ್ಕೆ ಮೊತ್ತ ಮೊದಲ ಬಾರಿ ಲಸಿಕೆ ಕಂಡು ಹಿಡಿದ ಸಂಶೋಧಕ ಶ್ರೀ ಜೋನಾಡ್ ಸಾಲ್ ಅವರ ಹುಟ್ಟಿದ ದಿನವನ್ನು ಅವರ ನೆನಪಿಗಾಗಿ ಪೊಲಿಯೋ ದಿನ ಎಂದು ಆಚರಿಸಲಾಗುತ್ತಿದೆ. 1955 ರಲ್ಲಿ

ಹಾರ್ನ್‍ಬಿಲ್ ಹಕ್ಕಿಗಳಿಗೆ ಆಶ್ರಯ ತಾಣವಾದ MRPL

ದಕ್ಷಿಣ ಭಾರತದ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚಾಗಿ ಕಂಡುಬರುವ ಮಲಬಾರ್ ಹಾರ್ನ್‍ಬಿಲ್ ಪಕ್ಷಿಗಳು ಇತ್ತೀಚೆಗೆ ಕರಾವಳಿ ಭಾಗದಲ್ಲಿ ಕಂಡುಬಂದಿದೆ. ಮಂಗಳೂರಿನ ಎಂಆರ್‍ಪಿಎಲ್ ಪ್ರದೇಶವು ಇದೀಗ ಹಾರ್ನ್‍ಬಿಲ್ ಪಕ್ಷಿಗಳಿಗೆ ಆಶ್ರಯತಾಣವಾಗಿದೆ.ಮಲಬಾರ್ ಫೈಡ್ ಹಾರ್ನ್‍ಬಿಲ್ ಭಾರತ ಮತ್ತು ಶ್ರೀಲಂಕಾದಲ್ಲಿ ಹೆಚ್ಚಾಗಿ ಕಾಣಸಿಗುತ್ತದೆ. ದೊಡ್ಡ ಕೊಕ್ಕಿನ ಉದ್ದವಾದ ಗರಿಯ ಹಾರ್ನ್‍ಬಿಲ್ ಹಕ್ಕಿಯನ್ನು ನೋಡುವುದೇ ಚೆಂದ. ಈ ಪಕ್ಷಿಗಳು

ಮಂಗಳೂರು: ಶ್ರೀ ಭ್ರಾಮರಿ ಹುಲಿ ತಂಡದ ಊದು ಇಡುವ ಕಾರ್ಯಕ್ರಮ

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ದಸರಾ ಮಹೋತ್ಸವ ಶಾರದಾ ಮಾತೆಯ ಶೋಭಾ ಯಾತ್ರೆಯ ಸಲುವಾಗಿ ಕೂಳೂರಿನ ಟೀಮ್ ಡ್ಯಾಜ್ಲರ್ ಟೈಗರ್ಸ್ 1ನೇ ವರ್ಷದ ಸಂಭ್ರಮದಲ್ಲಿ ಶ್ರೀ ಭ್ರಾಮರಿ ಹುಲಿ ಇದರ ಊದು ಇಡುವ ಕಾರ್ಯಕ್ರಮವು ಅಕ್ಟೋಬರ್ 23ರಂದು ಸಂಜೆ 4.30ಕ್ಕೆ ಮಂಗಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯಲಿದೆ. ಕರಾವಳಿಯೇ ಸಂಭ್ರಮಪಡುವ ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ ಮಂಗಳೂರು ದಸರಾವು ವಿಜೃಂಭಣೆಯಿಂದ ನಡೆಯುತ್ತಿದೆ.

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ “ಕುಡ್ಲದ ಪಿಲಿ ಪರ್ಬ-2023” ಉದ್ಘಾಟನೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕುಡ್ಲ ಪಿಲಿಪರ್ಬದ ರೂವಾರಿ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಅವರ ತಂಡದ ಕಾರ್ಯವನ್ನು ಶ್ಲಾಘಿಸಿ ಅಭಿನಂದಿಸಿದರು. ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಮಾತನಾಡಿ,

ಮಂಗಳೂರು: ಅ.22ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರ

ಪಣಂಬೂರಿನ ಗೋಲ್ಡನ್ ಈಗಲ್ ಫ್ರೆಂಡ್ಸ್ ಸರ್ಕಲ್ ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ಸಹಯೋಗದಲ್ಲಿ ಅ.22 ರಂದು ಪಣಂಬೂರು ಎನ್‍ಎಂಪಿಎ ಆಫೀಸರ್ಸ್ ಕ್ಲಬ್‍ನಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಈ ಶಿಬಿರ ಪ್ರಾರಂಭಗೊಳ್ಳಲಿದ್ದು, ರಕ್ತದಾನ ಮಾಡುವ ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9901722647,