Home ಕರಾವಳಿ Archive by category ಮಂಗಳೂರು (Page 93)

ಮಂಗಳೂರು: ಪ್ರತಿಯೊಂದು ವಿಚಾರದಲ್ಲೂ ರಾಜ್ಯ ಸರ್ಕಾರದಿಂದ ಜನತೆಗೆ ಅನ್ಯಾಯ: ವೇದವ್ಯಾಸ ಕಾಮತ್ ಕಿಡಿ

ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಅಲ್ಲಿ ಅಮಾಯಕರ ಮೇಲೆ ಹಲ್ಲೆ ಮನೆಗಳ ಮೇಲೆ ದಾಳಿಗಳು ನಡೆದಿವೆ. ಮುಖ್ಯಮಂತ್ರಿ, ಗೃಹಸಚಿವರು ಏನೂ ನಡೆದೇ ಇಲ್ಲವೆಂಬಂತೆ

ಸುರತ್ಕಲ್: ಸುರತ್ಕಲ್ ರೈಲ್ವೇ ಸೇತುವೆ ಅಕ್ಕಪಕ್ಕದ ರಸ್ತೆ ಗುಂಡಿ ಮುಚ್ಚುವಂತೆ ಡಿವೈಎಫ್‍ಐ ಆಗ್ರಹ

ಸುರತ್ಕಲ್ ರೈಲ್ವೇ ಸೇತುವೆ ಅಕ್ಕಪಕ್ಕದ ರಸ್ತೆ ಗುಂಡಿ ಮುಚ್ಚಿ ವಾಹನ ಸಂಚಾರಕ್ಕೆ ಯೋಗ್ಯ ರಸ್ತೆ ನಿರ್ಮಿಸಲು ಒತ್ತಾಯಿಸಿ ಹಾಗೂ ಟ್ರಾಫಿಕ್ ಸಮಸ್ಯೆಗೆ ಕಾರಣವಾಗುತ್ತಿರುವ ಕೊಂಕಣ ರೈಲ್ವೆ ರೋರೋ ಘಟಕವನ್ನು ಶೀಘ್ರ ಸ್ಥಳಾಂತರಕ್ಕೆ ಆಗ್ರಹಿಸಿ ಡಿವೈಎಫ್‍ಐ ಸುರತ್ಕಲ್ ಘಟಕದಿಂದ ಪ್ರತಿಭಟನೆ ನಡೆಸಿದರು. ಡಿವೈಎಫ್‍ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸುರತ್ಕಲ್ ಭಾಗದಲ್ಲಿ ರಸ್ತೆ ಹೊಂಡ

ಪಿಲಿಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರಿನ ಕಲೆ, ಸಂಸ್ಕೃತಿಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಆರಂಭವಾಗಿರುವ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಎರಡನೇ ವರ್ಷದ ಪಿಲಿಪರ್ಬದ ಆಮಂತ್ರಣ ಪತ್ರಿಕೆಯನ್ನು ಪ್ರತಿಷ್ಠಾನದ ಮಾರ್ಗದರ್ಶಕರೂ, ಸಂಸದರೂ, ಭಾಜಪಾ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಅಕ್ಟೋಬರ್ 21 ರಂದು ನಡೆಯುವ ಪಿಲಿಪರ್ಬ ಈ ವರ್ಷವೂ ಆದ್ದೂರಿಯಾಗಿ ನಡೆಯಲಿದೆ.

ಇಸ್ರೇಲ್‍ನಲ್ಲಿದ್ದ ಕರಾವಳಿಗರ ರಕ್ಷಣೆಯ ಕೆಲಸ ಸರ್ಕಾರ ಮಾಡಲಿದೆ: ಸಂಸದ ನಳಿನ್ ಕುಮಾರ್ ಕಟೀಲ್

ಇಸ್ರೇಲ್ ನಲ್ಲಿರುವ ಕರಾವಳಿಯ ಜನರನ್ನು ಸುರಕ್ಷಿತವಾಗಿ ಕರೆತರುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತದೆ. ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಅವರು, ಯಾರು ಭಯ ಪಡಬೇಕಾಗಿಲ.್ಲ ಇಸ್ರೇಲ್‍ನಲ್ಲಿ ಐದು ಸಾವಿರ ದ.ಕ ಜಿಲ್ಲೆಯ ಜನರು ಇದ್ದಾರೆಂಬ ಮಾಹಿತಿ ಇದೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ ಪತ್ರ ಬರೆದಿದ್ದೇನೆ, ಯಾರಿಗೂ

ನರೇಂದ್ರ ಮೋದಿ ಸರಕಾರವನ್ನು ಕಿತ್ತೊಗೆಯಲು ಕಾರ್ಮಿಕ ವರ್ಗದ ದೃಢ ನಿರ್ಧಾರ – ಜೆ. ಬಾಲಕೃಷ್ಣ ಶೆಟ್ಟಿ

ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ಸರಕಾರ ಕಳೆದ 9 ವರ್ಷಗಳಲ್ಲಿ ನಿರಂತರವಾಗಿ ಕಾರ್ಪೊರೇಟ್ ಕಂಪೆನಿಗಳ ಹಿತ ಕಾಯುವ ಮೂಲಕ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದೆ. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಯವರ ಕೈಗೊಪ್ಪಿಸಿ ದೇಶದ ಆರ್ಥಿಕತೆಯನ್ನು ದಿವಾಳಿ ಮಾಡಿದೆ.ಇಂತಹ ಜನದ್ರೋಹಿ ಸರಕಾರ ಮತ್ತೆ ಅಧಿಕಾರಕ್ಕೇರಿದರೆ ದೇಶದ ಸ್ವಾತಂತ್ರ್ಯ ಸಮಗ್ರತೆ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಕಟ್ಟಿಟ್ಟ

ಮಂಗಳೂರು: ಶೌರ್ಯ ಜಾಗರಣ ರಥಯಾತ್ರೆಗೆ ಭವ್ಯ ಸ್ವಾಗತ

ವಿಶ್ವ ಹಿಂದೂ ಪರಿಷತ್‍ನ 60ನೇ ವರ್ಷದ ಪ್ರಯುಕ್ತ ಬಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ ಶೌರ್ಯ ಜಾಗರಣ ರಥಯಾತ್ರೆ ಇಂದು ಬೆಳಗ್ಗೆ ಮಂಗಳೂರು ಪ್ರವೇಶಿಸಿದ್ದು ಅಡ್ಯಾರ್‍ನಲ್ಲಿ ಭವ್ಯ ಸ್ವಾಗತ ಕೋರಲಾಯಿತು. ಈ ವೇಳೆ ವಿಎಚ್ ಪಿಯ ಶರಣ್ ಪಂಪ್ ವೆಲ್, ಪುರುಷೋತ್ತಮ್, ಎಂ.ಬಿ ಪುರಾಣಿಕ್ ಮೊದಲಾದವರು ಉಪಸ್ಥಿತರಿದ್ದರು. ಅಪರಾಹ್ನ 2.30ಕ್ಕೆ ಅಂಬೇಡ್ಕರ್ ವೃತ್ತದಿಂದ ಕದ್ರಿ ಮೈದಾನದ ವರೆಗೆ ಭವ್ಯವಾದ ಶೋಭಾಯಾತ್ರೆ ನಡೆಯಲಿದ್ದು, ವಿವಿಧ ಟ್ಯಾಬ್ಲೋಗಳು

ನೆಕ್ಸಾ ಮಾಂಡವಿ ಮೋಟಾರ್‍ಸ್‌ ನಲ್ಲಿ 100ಕ್ಕಿಂತಲೂ ಅಧಿಕ ಕಾರುಗಳು ಮಾರಾಟ

ಮಂಗಳೂರಿನ ಮೆರಿಹಿಲ್‌ನಲ್ಲಿರುವ ನೆಕ್ಸಾ ಮಾಂಡವಿ ಮೋಟಾರ್‍ಸ್‌ನಲ್ಲಿ ಸೆಪ್ಟಂಬರ್ ತಿಂಗಳಿನಲ್ಲಿ 100ಕ್ಕಿಂತಲೂ ಅಧಿಕ ಕಾರುಗಳು ಮಾರಾಟವಾಗಿದೆ. ಗ್ರಾಹಕರ ಅಚ್ಚುಮೆಚ್ಚಿನ ಕಾರುಗಳಾದ ಎಕ್ಸ್‌ಎಲ್ ೬, ಫೋನ್ಕ್ಸ್, ಬಲೆನೋ, ಗ್ರಾಂಡ್ ವಿಟಾರ, ಜಿಮ್ನಿ, ಇಗ್ನೀಸ್, ಇನ್ವಿಕ್ಟೋ, ಕಿಯಾಜ್ ಕಾರುಗಳು ಮಾರಾಟವಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ

ಮಂಗಳೂರು : ಎಸ್ ಸಿಡಿಸಿಸಿ ಬ್ಯಾಂಕ್ ಗೆ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ ” ಪ್ರಶಸ್ತಿ

ಸಹಕಾರ ರಂಗದ ಅಗ್ರಮಾನ್ಯ ಬ್ಯಾಂಕ್ ಎನಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಮಹಾರಾಷ್ಟ್ರದ ಅವಿಸ್ ಪಬ್ಲಿಕೇಶನ್ ನೀಡುವ ಪ್ರತಿಷ್ಠಿತ “ಬ್ಯಾಂಕೊ ಬ್ಲೂ ರಿಬ್ಬನ್ – 2023 ಪ್ರಶಸ್ತಿ”ಯನ್ನು ಮುಂಬಯಿಯಲ್ಲಿ ಪ್ರದಾನ ಮಾಡಲಾಯಿತು. ದಮನ್ ನ ಡೆಲ್ಟಿನ್ ರೆಸಾರ್ಟ್ ಸಭಾಂಗಣದಲ್ಲಿ ಆಯೋಜಿಸಲಾದ ಮೂರು ದಿನಗಳ ವಾರ್ಷಿಕ ಶೃಂಗಸಭೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಾಜಿ

ಒಂದು ಕ್ಷಣ ಪುಟ್ಟ ಮಕ್ಕಳ ಜತೆ ಮಕ್ಕಳಾಗಿ ಹೋದ್ರು ಪೊಲೀಸ್  ಕಮಿಷನರ್

ಪೊಲೀಸ್ ಠಾಣೆಯಲ್ಲಿ ಕೆಲವು ಗಂಟೆಗಳ ಕಾಲ ಕಳೆಯುವ ಮಕ್ಕಳಿಗೆ ಲವಲವಿಕೆಯಿಂದ ಕೂಡಿದ ವಾತಾವರಣವನ್ನು ಕಲ್ಪಿಸುವುದು   ಪೊಲೀಸ್   ಅಂದಾಗ ಮಕ್ಕಳ ಮನಸಿನಲ್ಲಿ ಮೂಡುವ ಭಾವನೆಗಳು  ಬೇರೆ ಬೇರೆಯ ಪ್ರಶ್ನೆಗಳು ಮೂಡಿಬರುವುದು  ಬಹಳಷ್ಟಿದೆ.  ಇಲ್ಲಿ  ಪೊಲೀಸ್ರು ಅಂದಾಗ ಭಯ ಪಡುವ ದೃಷ್ಟಿಕೋನ ದೂರ ಅಗಬೇಕಿದೆ. ಈ ನಿಟ್ಟಿನಲ್ಲಿ ಮಕ್ಕಳ ಜತೆ ಒಂದೊತ್ತು ಕಾಲ ಕಳೆದು  ಮಕ್ಕಳ ಜತೆ  ಮಕ್ಕಳಾಗಿ   ಹೋದ್ರು

ಶಾಸ್ತ್ರೀ ಜಿ ಮತ್ತು ಗಾಂಧೀಜಿಯವರ ಆದರ್ಶಗಳನ್ನು ನಿತ್ಯ ಅಳವಡಿಸಿಕೊಳ್ಳೋಣ : ಡಾ|| ಚೂಂತಾರು

ದಿನಾಂಕ 02-10-2023ನೇ ಸೋಮವಾರದಂದು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಅಂಗವಾಗಿ ನಗರದ ಮೇರಿಹಿಲ್‍ನಲ್ಲಿ ಇರುವ ಜಿಲ್ಲಾ ಗೃಹರಕ್ಷಕದಳ ಮತ್ತು ಪೌರರಕ್ಷಣಾ ಕಛೇರಿಯಲ್ಲಿ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಟನಮನ ಸಲ್ಲಿಸಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಮತ್ತು ಗಾಂಧೀಜಿಯವರ ತ್ಯಾಗ, ಸೇವೆ ಹಾಗೂ ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ