ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ
ಮೂಡುಬಿದಿರೆ : ನಿಡ್ಡೋಡಿಯ ಮನೆಯೊಂದರಲ್ಲಿ ನಾಲ್ಕು ಮಂದಿ ಯುವಕರೊಂದಿಗೆ ಇಬ್ಬರು ಅಪ್ರಾಪ್ತ ಬಾಲಕಿಯರಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಅವರ ತಂಡವು ದಾಳಿ ನಡೆಸಿ ಸಂಭಾವ್ಯ ಗ್ಯಾಂಗ್ ರೇಪ್ ನಿಂದ ಬಾಲಕಿಯರನ್ನು ರಕ್ಷಿಸಿದ ಘಟನೆ ಸೋಮವಾರ ನಡೆದಿದೆ. ಈ ಪ್ರಕರಣದ ಆರೋಪಿಗಳಾಗಿರುವ ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಡುಬಿದಿರೆ: ಹುಬ್ಬಳ್ಳಿಯ ಸೇಂಟ್ ಪೌಲ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ 17 ವಯೋಮಿತಿಯ ಬಾಲಕ ಬಾಲಕಿಯರ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಐದು ಚಿನ್ನ ಹಾಗೂ ಒಂದು ಬೆಳ್ಳಿ ಪದಕದೊಂದಿಗೆ ಒಟ್ಟು ಆರು ಪದಕಗಳನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆಯುವಲ್ಲಿ ಮಹತ್ವದ ಕೊಡುಗೆ ನೀಡಿದರು. ಫಲಿತಾಂಶ : 58 ಕೆಜಿ ವಿಭಾಗದಲ್ಲಿ – ಸ್ಪೂರ್ತಿ (ದ್ವಿತೀಯ), 77 ಕೆಜಿ ವಿಭಾಗದಲ್ಲಿ
ಮೂಡುಬಿದಿರೆ : ತಾಲೂಕಿನಲ್ಲಿ ಶನಿವಾರ ಸಂಜೆ ಬೀಸಿದ ಗಾಳಿ ಮಳೆಗೆ ಸಮಾಜ ಮಂದಿರದ ಬಳಿ ಮರವೊಂದು ಸೀಯಾಳದ ಅಂಗಡಿ ಮೇಲೆ ಬಿದ್ದು ಜಖಂಗೊಂಡಿದೆ ಹಾಗೂ ಅಲ್ಲಿಯೇ ಪಕ್ಕದಲ್ಲಿರುವ ವಿದ್ಯುತ್ ಕಂಬವು ತುಂಡಾಗಿ ಫ್ಲೆಕ್ಸ್ ನ ಮೇಲೆ ಬಿದ್ದು ಸಿಲುಕಿಕೊಂಡಿರುವುದರಿಂದ ಸಂಭಾವ್ಯ ಅಪಾಯ ತಪ್ಪಿದ ಘಟನೆ ನಡೆದಿದೆ.ಆಲಂಗಾರು ಮತ್ತು ಉಳಿಯ ಪರಿಸರದಲ್ಲಿಯೂ ತೀವೃವಾದ ಗಾಳಿ ಬೀಸಿದ ಪರಿಣಾಮವಾಗಿ ಸಂತ ಥೋಮಸ್ ಹೈಸ್ಕೂಲ್ ನ ಮೇಲ್ಛಾವಣಿ ಹಾರಿ ಸುಮಾರು 100 ಮೀಟರ್ ದೂರದಲ್ಲಿ ಬಿದ್ದಿದ್ದು
ಮೂಡುಬಿದಿರೆ: ಕಳೆದ ನಾಲ್ಕು ದಶಕಗಳಿಂದ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳ ಮೂಲಕ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಪದವಿ ಪೂರ್ವ ವಿಭಾಗದಲ್ಲಿ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷ ಶೈಕ್ಷಣಿಕ ವಿದ್ಯಾರ್ಥಿ ವೇತನವನ್ನು(ಆಸೆ) ಕಳೆದ ಎರಡು ವರ್ಷಗಳಿಂದ ಆಯೋಜಿಸುತ್ತಾ
ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.
ಮೂಡುಬಿದಿರೆ : ಗಂಟಾಲ್ ಕಟ್ಟೆಯಲ್ಲಿ ನಡೆಯುತ್ತಿದ್ದ ಅನಧಿಕೃತ ಕಸಾಯಿಖಾನೆಗೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ. ಜಿ ನೇತೃತ್ವದ ತಂಡವು ದಾಳಿ ನಡೆಸಿ ಸುಮಾರು 50 ಕೆ.ಜಿ ದನದ ಮಾಂಸ, ಪರಿಕರಗಳು ಹಾಗೂ 2 ಕಾರುಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೋಮವಾರ ನಡೆದಿದೆ. ಗಂಟಾಲ್ ಕಟ್ಟೆಯ ಜಲೀಲ್ ಎಂಬವನ ಮನೆಯ ಹಿಂಭಾಗದ ಗುಡ್ಡೆಯ ಕಾಡಿನಲ್ಲಿ ಹಸುವನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು
ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು. ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು. ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ
ಮೂಡುಬಿದಿರೆ : ವಿವಿಧ ಪೂಜಾ ಸಾಮಗ್ರಿಗಳ ಬೆಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಟೀಲು ದೇವಳದ ಆಡಳಿತ ಮಂಡಳಿಯವರು ವಿವಿಧ ಸೇವೆಗಳ ಮೌಲ್ಯವನ್ನು ಏರಿಸಿದ್ದರೂ ಅದು ಕಾಂಗ್ರೆಸ್ ಸರಕಾರವೇ ಏರಿಸಿದ್ದು ಎಂದು ಜನಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಮೂಡುವಂತೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯ ವಿರುದ್ಧ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.ಬಿಜೆಪಿಯ ಐಟಿ ಸೆಲ್,ವಾಟ್ಸಾಪ್ ಮತ್ತು ಫೇಸ್ ಬುಕ್ ಗಳಂತಹ ಸಾಮಾಜಿಕ
ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ಬಳಿ ಇರುವ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ವಿವಾಹಿತ ಮಹಿಳೆಯೋವ೯ರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.ಮಂಗಳೂರು ಬೊಂದೆಲ್ ನಿವಾಸಿ ರೋಹಿತ್ ಫೆರ್ನಾಂಡಿಸ್ ಅವರ ಪತ್ನಿ ರಿಶಾಲ್ ವೆಲಿಟಾ ಪಿಂಟೋ (24ವ)ಮೃತಪಟ್ಟ ಮಹಿಳೆ. ಈಕೆ ಮೂಡುಬಿದಿರೆಯ ಪ್ಲಾನೆಟ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು.