Home ಕರಾವಳಿ Archive by category ಮೂಡಬಿದರೆ (Page 12)

ಮೂಡುಬಿದಿರೆ : ನ.9ರಂದು ಪಣಪಿಲ ‘ಜಯ-ವಿಜಯ’ ಜೋಡುಕರೆ ಕಂಬಳ

ಮೂಡುಬಿದಿರೆ : ‘ಜಯ-ವಿಜಯ’ ಜೋಡುಕರೆ ಕಂಬಳ ಸಮಿತಿ ಪಣಪಿಲ ಇದರ ವತಿಯಿಂದ ನಡೆಯುವ 15ನೇ ವರ್ಷದ ಹೊನಲು ಬೆಳಕಿನ ಜೋಡುಕರೆ ಕಂಬಳವು ನ. 9ರಂದು ಶನಿವಾರ ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸುಭಾಶ್ಚಂದ್ರ ಚೌಟ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಂಬಳದ ಜಿಲ್ಲಾ ತೀರ್ಪುಗಾರರ ಸಂಚಾಲಕ ವಿಜಯ್ ಕುಮಾರ್ ಜೈನ್ ಕಂಗಿನಮನೆ

ಪಡುಮಾರ್ನಾಡು ಪಂಚಾಯತ್ ಗೆ ಶಿವರಾಮ ಕಾರಂತ ಪ್ರಶಸ್ತಿ

ಮೂಡುಬಿದಿರೆ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಶಿವರಾಮ ಕಾರಂತ ಪ್ರತಿಷ್ಠಾನ ಕೋಟ ಇವರು ಕೊಡಮಾಡುವ 2023-24 ನೇ ಸಾಲಿನ ” ಶಿವರಾಮ ಕಾರಂತ ಪ್ರಶಸ್ತಿ-2024 ” ಪ್ರಶಸ್ತಿಗೆ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ಆಯ್ಕೆಯಾಗಿರುತ್ತದೆ. ಪ್ರಶಸ್ತಿಯನ್ನು ನ.10 ರಂದು ಕೋಟದ ಪಂಚಾಯತ್ ಅಧ್ಯಕ್ಷ ವಾಸುದೇವ ಉಪಾಧ್ಯಾಯ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಹಾಯಕ ನಿರ್ದೇಶಕರು(ಪ್ರಭಾರ) ಸಾಯೀಶ ಚೌಟ ಮತ್ತು ಸದಸ್ಯರು ಮೇಘಾಲಯದ

ಮೂಡುಬಿದಿರೆ: ಸಿಪಿಐಎಂನ ತಾಲೂಕು ಸಮ್ಮೇಳನ

ಮೂಡುಬಿದಿರೆ: ಕೇಂದ್ರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಅಮೆರಿಕ ಸಾಮ್ರಾಜ್ಯಶಾಹಿಯ ಅಡಿಯಾಳು ಆಗಬಾರದು ಎಂದು ಸಿಪಿಐಎಂನ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಕೆ ಯಾದವ್ ಶೆಟ್ಟಿ ಹೇಳಿದರು. ಅವರು ಭಾನುವಾರ ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಮೂಡುಬಿದಿರೆ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.ಪ್ಯಾಲೆಸ್ತೀನ್ ನಾಗರಿಕರನ್ನು ಅತ್ಯಂತ ಅಮಾನವೀಯವಾಗಿ ಕೊಲ್ಲುತ್ತಿರುವ ಇಸ್ರೇಲಿಗೆ ಸರ್ವ ರೀತಿಯ ಸಹಕಾರ ನೀಡುತ್ತಿರುವ ಅಮೆರಿಕ ಮತ್ತು

ಕಿನ್ನಿಗೋಳಿ : ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ

ಕಿನ್ನಿಗೋಳಿ ಸಮೀಪದ ಎಳತ್ತೂರು ದೇವಸ್ಧಾನದ ದೇವರ ಗುಂಡಿ ಸಂಕದ ಬಳಿ ಚಿರತೆಯೊಂದು ಹುಲ್ಲು ಕತ್ತರಿಸುತ್ತಿದ್ದ ವ್ಯಕ್ತಿಯೋರ್ವರ ಮೇಲೆ ದಾಳಿ‌ ನಡೆಸಿದ್ದು ಗಂಭೀರ ಗಾಯಗೊಂಡ ವ್ಯಕ್ತಿ ಕಟೀಲು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾಯಗೊಂಡವರನ್ನು ಸ್ಧಳೀಯ ನಿವಾಸಿ ಲಿಗೋರಿ (58) ಎಂದು ಗುರುತಿಸಲಾಗಿದೆ.ಗಾಯಾಳು ಲಿಗೋರಿ ಹೈನುಗಾರರಾಗಿದ್ದು ದನಗಳಿಗೆ ಮೇವು ತರಲು ಹೋದಾಗ ಈ ಘಟನೆ ನಡೆದಿದ್ದು ಲಿಗೋರಿ ಅವರು ಧೈರ್ಯದಿಂದ ಚಿರತೆಯನ್ನು ಎದುರಿಸಿದ್ದು ಕೂಡಲೇ ಚಿರತೆ ಸ್ಧಳದಿಂದ

ಮೂಡುಬಿದಿರೆ : ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ : ಎರಡು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿರುವ ಮಹಿಳೆಯೋರ್ವರು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇಮಾರಿನಲ್ಲಿ ಶುಕ್ರವಾರ ಬೆಳಿಗ್ಗೆ ತಿಳಿದು ಬಂದಿದೆ.ಪಾಲಡ್ಕ ಗ್ರಾ.ಪಂ.ವ್ಯಾಪ್ತಿಯ ಕೇಮಾರು ನಡಿಹಿಲ್ಲು ನಿವಾಸಿ ಪ್ರಮೀಳಾ (36ವ)ಅವರು ಮಾಡಿಕೊಂಡ ಮಹಿಳೆ. ಈಕೆ ಗಂಡನನ್ನು ಕಳೆದುಕೊಂಡ ಮೇಲೆ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದರು. ಕುಡಿತದ ಚಟವನ್ನು ಹೊಂದಿದ್ದ ಪ್ರಮೀಳಾ ಅವರು ಜೀವನದಲ್ಲಿ ಜಿಗುಪ್ಸೆಗೊಂಡು

ಪೂರ್ಣಿಮಾ ಸುರೇಶ್ ಉಡುಪಿ ಮತ್ತು ಕಾವ್ಯಶ್ರೀ ಮಹಾಗಾಂವಕರ ಕಲಬುರ್ಗಿ ಅವರಿಗೆ 2024ರ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಪಠೇಲ್ ಪುನರೂರು ವಾಸುದೇವರಾವ್ ಟ್ರಸ್ಟ್ ಪ್ರಾಯೋಜಕತ್ವದ 2024ರ ಸಾಲಿನ ಪ್ರತಿಷ್ಠಿತ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಉಡುಪಿಯ ಪೂರ್ಣಿಮ ಸುರೇಶ್ ಅವರ ‘ಸಂತೆಯೊಳಗಿನ ಏಕಾಂತ’ ಮತ್ತು ಕಲಬುರ್ಗಿಯ ಕಾವ್ಯಶ್ರೀ ಮಹಾಗಾಂವಕರ ಅವರ ‘ಒಲವ ಒರತೆಯ ಜಾಡಿನಲ್ಲಿ’ ಎಂಬ ಎರಡು ಹಸ್ತಪ್ರತಿಗಳು ಗೆದ್ದುಕೊಂಡಿವೆ. ಈ ಎರಡೂ ಹಸ್ತಪ್ರತಿಗಳು ತೀರ್ಪುಗಾರರಿಂದ ಸಮಾನ ಅಂಕಗಳನ್ನು ಪಡೆದಿರುವುದರಿಂದ ಎರಡು ಹಸ್ತಪ್ರತಿಗಳನ್ನು ಕೂಡಾ ಪ್ರಶಸ್ತಿಗೆ

ಮೂಲ್ಕಿ : ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

ಮೂಲ್ಕಿಯ ಲಯನ್ಸ್ ಸೌಧದಲ್ಲಿ ಕಾರ್ಯಾಚರಿಸುತ್ತಿರುವ ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ ದೀಪಾವಳಿ ಮತ್ತು ಹೊಸ ವರ್ಷದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ನೀಡುತ್ತಿದ್ದಾರೆ. ಕ್ಯಾನ್‌ಕೋಸ್ ಡ್ರೈಫ್ರೂಟ್ಸ್ ಸ್ಟೋರ್‌ನಲ್ಲಿ 2000 ರೂಗಳ ಖರೀದಿಗೆ ಗ್ರಾಹಕರಿಗೆ 100ಗ್ರಾಂ ಬಾದಾಮಿ ಉಚಿತ, ಹಾಗೂ ಮೊದಲ 100 ಗ್ರಾಹಕರಿಗೆ 50ಗ್ರಾಂನ ಡ್ರೈಫ್ರೂಟ್ಸ್ ಮಿಕ್ಸ್ ಹಾಗೂ 100 ಗ್ರಾಂನ ಖರ್ಜೂರ ಉಚಿತವಾಗಿ ಪಡೆಯುವ ಅವಕಾಶ ನೀಡಿದ್ದಾರೆ.ಇದು ಸೀಮಿತ ಅವಧಿಗೆ

ಮಂಗಳೂರು ವಿ.ವಿ. ಬ್ಯಾಡ್ಮಿಂಟನ್: 16ನೇ ಬಾರಿ ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರಕಾಲೇಜು ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ವಿಭಾಗದಲ್ಲಿ ಸತತ 16ನೇ ಬಾರಿ ಚಾಂಪಿಯನ್ ಆಗಿರುವ ಆಳ್ವಾಸ್ ಕಾಲೇಜು ತಂಡವು ‘ಶ್ರೀ ಕೆಮ್ಮಾರು ಬಾಲಕೃಷ್ಣ ಗೌಡ ಸ್ಮರಣಾರ್ಥ ಟ್ರೋಫಿ’ಯನ್ನು ಎತ್ತಿ ಹಿಡಿದಿದೆ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ತೃತೀಯ ಸ್ಥಾನ ಪಡೆದಿದೆ.ಮಂಗಳೂರಿನ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಶ್ರಯದಲ್ಲಿ ನಡೆದ ಟೂರ್ನಿಯ ಪುರುಷರ ವಿಭಾಗದ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ೩-೦

ಮೂಡುಬಿದಿರೆ: ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ ನಿಧನ

ಮೂಡುಬಿದಿರೆ: ಇಲ್ಲಿನ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ, ವಿದ್ಯುತ್ ಗುತ್ತಿಗೆದಾರ ಗಣೇಶ್ ರಾವ್ (57ವ) ಅವರು ಹೃದಯಾಘಾತಕ್ಕೊಳಗಾಗಿ ಶನಿವಾರ ರಾತ್ರಿ ನಿಧನ ಹೊಂದಿದರು. ಪ್ರಾಂತ್ಯ ಗಾಮದ ವಿಶಾಲ್ ನಗರ ನಿವಾಸಿಯಾಗಿರುವ ಗಣೇಶ್ ರಾವ್ ಅವರು ಮೂಡುಬಿದಿರೆಯಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಗುತ್ತಿಗೆದಾರರಾಗಿ ದುಡಿಯುತ್ತಿದ್ದರು. ಅಲ್ಲದೆ ಶ್ರೀ ಕೃಷ್ಣ ಫ್ರೆಂಡ್ಸ್ ಸರ್ಕಲ್ ನ ಸ್ಥಾಪಕ ಸದಸ್ಯರಾಗಿದ್ದ ಅವರು 20 ವರ್ಷಗಳ ಕಾಲ ಅಧ್ಯಕ್ಷರಾಗಿ ಹಾಗೂ

ಮೂಡುಬಿದಿರೆಯಲ್ಲಿ ಜೈನ ಬಾಂಧವರ ಹೊಸ ತೆನೆ ಹಬ್ಬ

ಮೂಡುಬಿದಿರೆ: ಜೈನ ಬಾಂಧವರು ಆಚರಿಸಿಕೊಂಡು ಬರುವ ಹೊಸ ತೆನೆ ಹಬ್ಬ(ಕುರಾಲ್ ಪರ್ಬ) ಜೈನ ಕಾಶಿ ಮೂಡುಬಿದಿರೆಯಲ್ಲಿ ರವಿವಾರ ಜರಗಿತು. ಬೆಟ್ಟೇರಿಯಲ್ಲಿರುವ, ಮಹಾವೀರ ಸಂಘ ದವರ ‘ಕೊರಲ್ ಕಟ್ಟೆ’ಯಲ್ಲಿ ಹೊಸ ತೆನೆರಾಶಿ ಹಾಕಿ 18 ಬಸದಿಗಳ ಇಂದ್ರರು ಪೂಜೆ ಸಲ್ಲಿಸಿದರು. ಶ್ರೀಮಠದಲ್ಲಿ ಪಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಪಟ್ಟಾಚಾರ್ಯ ಸ್ವಾಮೀಜಿ ಪಾವನ ಸಾನ್ನಿಧ್ಯ ಮಾರ್ಗದರ್ಶನದಲ್ಲಿ 18ಬಸದಿಗಳ ದೇವಕಾರ್ಯ ನೆರವೇರಿಸಿ ಅರ್ಚಕರಿಗೆ