ಮೂಡುಬಿದಿರೆ : ದ್ವಿಚಕ್ರ ವಾಹನ ಸವಾರರಿಬ್ಬರು ವೃದ್ಧೆಯೋರ್ವರ ಬಳಿ ದಾರಿ ಕೇಳುವ ನೆಪದಲ್ಲಿ ಮಾತನಾಡಿ ಆಕೆಯ ಕುತ್ತಿಗೆಯಲ್ಲಿದ್ದ 3 ಪವನಿನ ಚಿನ್ನದ ಸರವನ್ನು ಎಗರಿಸಿ ಪರಾರಿಯಾದ ಘಟನೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ.ನ ಮಾರ್ನಾಡಿನಲ್ಲಿಸೋಮವಾರ ಮಧ್ಯಾಹ್ನ ನಡೆದಿದೆ. ಮಾರ್ನಾಡು ವರ್ಧಮಾನ ಬಸದಿ ಬಳಿಯ 82 ರ ವಯಸ್ಸಿನ ವೃದ್ಧೆ ಪ್ರೇಮಾ ಅವರು ತಮ್ಮ ಮನೆಯ ಸಮೀಪದ
ಪವರ್ ಫ್ರೆಂಡ್ಸ್ ಬೆದ್ರ ಮಹಿಳಾ ಘಟಕ ಮತ್ತು ಇನ್ನರ್ ವ್ಹೀಲ್ ಕ್ಲಬ್ ಆಫ್ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮಂಗಳೂರಿನ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಕನ್ನಡ ಭವನದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಇನ್ನರ್ ವ್ಹೀಲ್ ಕ್ಲಬ್ ಅದ್ಯಕ್ಷ ಬಿಂದಿಯಾ ಎಸ್.ಶೆಟ್ಟಿ ಅಧ್ಯಕ್ಷತೆ ವಹಿಸಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ನಮಗೆ ಆರೋಗ್ಯ ಮುಖ್ಯವಾಗಿ ಬೇಕು. ಒಂದೊಂದು ಅಂಗವೂ
ಮೂಡುಬಿದಿರೆ : ಕಳೆದ ಬಾರಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತುಳುನಾಡಿನ ಕಂಬಳವನ್ನು ಆಯೋಜಿಸಿ ಸೈ ಎನಿಸಿಕೊಂಡಿರುವ ಕಂಬಳ ಸಮಿತಿಯು ಈ ಬಾರಿ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಸಲು ನಿರ್ಧರಿಸಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದ್ದಾರೆ. ಮೂಡುಬಿದಿರೆ ಸ್ವರ್ಣ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯ ವಿಶೇಷ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಂಬಳದ ಬಗ್ಗೆ ಅಪಾರ ಆಸಕ್ತಿಯನ್ನು ಹೊಂದಿರುವ
ಮೂಡುಬಿದಿರೆ: ಇಲ್ಲಿ ವಲಯ ಅರಣ್ಯಾಧಿಕಾರಿಯಾಗಿರುವ ದಿನೇಶ್ ಜಿ.ಡಿ.ಅವರು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಭಡ್ತಿ ಹೊಂದಿದ್ದು ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ದಿನೇಶ್ ಅವರು ಮೂಡುಬಿದಿರೆ ವಲಯ ಅರಣ್ಯಾಧಿಕಾರಿಯಾಗಿದ್ದು ಈ ಹಿಂದೆ ಕೂಡಾ ಮೂಡುಬಿದಿರೆಯಲ್ಲಿ ವಲಯಾರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದರು.ಅಲ್ಲಿಂದ ಕಾರ್ಕಳ ವನ್ಯಜೀವಿ ವಿಭಾಗದ ವಲಯ
ಮೂಡುಬಿದಿರೆ: ತಾಲೂಕಿನ ಕೋಟೆಬಾಗಿಲು ಬಳಿ ಸೋಮವಾರ ಮಧ್ಯಾಹ್ನ ಈಕೋ-ಮ್ಯಾಸ್ಟ್ರೋ ಢಿಕ್ಕಿಯಾಗಿ ಮರಿಯಾಡಿಯ ನಿವಾಸಿ ಅಹಮದ್ ಬಾವ (50) ಅವರು ಮೃತಪಟ್ಟಿದ್ದಾರೆ.ಮೂಡುಬಿದಿರೆ ಕಡೆಗೆ ಬರುತ್ತಿದ್ದ ಈಕೋ ಕಾರು ಮೂಡುಬಿದಿರೆಯಿಂದ ಮರಿಯಾಡಿ ಕಡೆಗೆ ಹೋಗುತ್ತಿದ್ದ ಮ್ಯಾಸ್ಟ್ರೊ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡಿದ್ದ ಮ್ಯಾಸ್ಟ್ರೋ ಸವಾರ ಅಹಮದ್ ಬಾವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ
ಮೂಡುಬಿದಿರೆ: ಪರಿಚಯಸ್ಥನಂತೆ ನಟಿಸಿ ಮಹಿಳೆಯ ಜತೆ ಮಾತನಾಡಿ ಆಕೆಯ ಮೂರೂವರೆ ಪವನಿನ ಸರವನ್ನು ವ್ಯಕ್ತಿಯೊಬ್ಬ ಎಗರಿಸಿ ಪರಾರಿಯಾದ ಘಟನೆ ಸೋಮವಾರ ಮಧ್ಯಾಹ್ನದ ವೇಳೆ ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ನಡೆದಿದೆ. ಅಶ್ವತ್ಥಪುರದಲ್ಲಿರುವ ತನ್ನ ಮಗಳ ಮನೆಗೆ ಹೋಗಲು ನಾರಾವಿಯಿಂದ ಬಂದಿದ್ದ ಮಧ್ಯ ವಯಸ್ಸಿನ ಮಹಿಳೆಯು ಬಸ್ಸಿನಿಂದ ಇಳಿದು ಬರುತ್ತಿದ್ದಾಗ ಚಿಕ್ಕಮ್ಮನೆಂದು ಕರೆದು ಪರಿಚಯಿಸಿಕೊಂಡಿದ್ದ ಅಲ್ಲದೆ ಮಹಿಳೆಯ ಮನೆಯವರ ಪರಿಚಯವನ್ನೆಲ್ಲಾ ಹೇಳಿದ ಅಲ್ಲದೆ ಆಕೆಯನ್ನು
ಮೂಡುಬಿದಿರೆ: ಪಾಲಡ್ಕ – ಕಲ್ಲಮುಂಡ್ಕೂರು ಕೂಡು ರಸ್ತೆಯ ಗುಂಡ್ಯಡ್ಕ ಎಂಬಲ್ಲಿ ವಿಪರೀತ ಮಳೆಯಿಂದಾಗಿ ಶನಿವಾರ ರಸ್ತೆಯ ಬದಿಯಲ್ಲಿದ್ದ ಗುಡ್ಡ ಜರಿದು ಬಿದ್ದು, ಜನರು ನಡೆದಾಡುವ ಹಾಗೂ ವಾಹನ ಸಂಚರಿಸುವ ರಸ್ತೆಯು ಸಂಪೂರ್ಣ ಹಾಳಾಗಿದ್ದ ಸ್ಥಳಕ್ಕೆ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಭಾನುವಾರ ಭೇಟಿ ನೀಡಿದರು.ಗುಂಡ್ಯಡ್ಕದಲ್ಲಿ ಎಲ್ಲಾ ಮನೆ ವಿದ್ಯುತ್ ಸಂಪರ್ಕ ಕಡಿದು ಹೋಗಿರುವ ಬಗ್ಗೆ ಮಾಹಿತಿಯನ್ನು ಪಡೆದ ಜೈನ್ ತಕ್ಷಣವೇ ಸಂಬಂಧಪಟ್ಟ ಮೆಸ್ಕಾಂ ಹಾಗೂ
ಮೂಡುಬಿದಿರೆ: ಬುಧವಾರ ರಾತ್ರಿ ಸುರಿದ ವಿಪರೀತ ಮಳೆಗೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಡೆಂಜಾರುವಿನ ಪ್ರಕಾಶ್ ಎಂಬವರ ಮನೆಯ ಕೊಟ್ಟಿಗೆಯಲ್ಲಿದ್ದ 5 ದನಗಳು ನೀರಿನಲ್ಲಿ ಕೊಚ್ಚಿಹೋಗಿದ್ದು ಅದರಲ್ಲಿ 1 ದನ ಅಸುನೀಗಿದೆ.2 ದನಗಳು ವಾಪಾಸು ಬಂದಿದ್ದು ಇನ್ನೆರಡು ದನಗಳು ಕಾಣೆಯಾಗಿರುತ್ತದೆ.ಸ್ಥಳಕ್ಕೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲೊಕೇಶ್ ಬಿ., ಸಹಾಯಕ ನಿರ್ದೇಶಕರು(ಗ್ರಾ.ಉ), ಗ್ರಾಮ ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲಾ
ಮೂಡುಬಿದಿರೆ : ಪುತ್ತಿಗೆ ಗ್ರಾಮದ ಹಿರಿಯ ಅರ್ಚಕ, ಶತಾಯುಷಿ ಅಡಿಗಳ್ ಶ್ರೀನಿವಾಸ ಭಟ್ (100) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸುಮಾರು 65 ವರ್ಷಗಳ ಕಾಲ ಸೋಮನಾಥೇಶ್ವರ ಹಾಗೂ ಸಪರಿವಾರ ದೇವರುಗಳ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿ ಜನಾನುರಾಗಿಯಾಗಿದ್ದರು.
ಸ್ನಾನಗೃಹದಲ್ಲಿ ಗ್ಯಾಸ್ ಗೀಸರ್ ಕೆಮಿಕಲ್ ಸ್ಪ್ರೆಡ್ ಆಗಿ ಸ್ನಾನಗೃಹದಲ್ಲಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.ಕೋಟೆಬಾಗಿಲಿನ ಪ್ಲಾಟ್ ಒಂದರಲ್ಲಿ ವಾಸವಾಗಿರುವ ದಿ.ಅನ್ಸಾರ್ ಎಂಬವರ ಪುತ್ರ ಶಾರಿಕ್ ( 18) ಎಂಬವನೇ ಮೃತಪಟ್ಟ ಯುವಕ.ಪ್ಲಾಟ್ ನಲ್ಲಿ ಶಾರಿಕ್ ಮತ್ತು ಆತನ ತಾಯಿ ವಾಸವಾಗಿದ್ದರು.ರಾತ್ರಿ ಶಾರಿಕ್ ಸ್ನಾನಕ್ಕೆಂದು ಹೋಗಿದ್ದ.ಆತ ಸ್ನಾನ ಮುಗಿಸಿಕೊಂಡು ಬರುವಾಗ ಯಾವತ್ತೂ ತಡವಾಗುತ್ತಿತ್ತೆಂದು ಆತನ




























