ಮೂಡುಬಿದಿರೆಯ ಸಮಾಜ ಮಂದಿರ ಸಭಾದಲ್ಲಿ ವಾಚ್ ಮೆನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಕುಮಾರ್ ಹೆಗ್ಡೆ (56 ವ) ಅವರು ಬಿಪಿ ಹೈ ಆಗಿ ಸೋಮವಾರ ಬೆಳಿಗ್ಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕೊಕ್ರಾಡಿಯ ನಿವಾಸಿ ಸುಕುಮಾರ್ ಹೆಗ್ಡೆ ಅವರು ಕಳೆದ 5 ವರ್ಷಗಳಿಂದ ಸಮಾಜ ಮಂದಿರದಲ್ಲಿ ವಾಚ್ ಮೆನ್ ಆಗಿ ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದು, ಹಗಲಿನಲ್ಲಿ ಬೇರೆ
ಮೂಡುಬಿದಿರೆ: ಬಹುಮುಖ ಪ್ರತಿಭೆಯ ಹೆಸರಾಂತ ಕಲಾವಿದೆ ಅಯನಾ. ವಿ. ರಮಣ್ ಮೂಡುಬಿದಿರೆ, ದೂರದರ್ಶನ ಕಲಾವಿದೆಯಾಗಿ ಆಯ್ಕೆಯಾಗಿದ್ದಾರೆ .ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾ ಮಣಿ ಶೇಖರ್ ಮಾರ್ಗದರ್ಶನದಲ್ಲಿ, ಬೆಂಗಳೂರು ದೂರದರ್ಶನ ಕೇಂದ್ರದ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಎದುರಿಸಿದ್ದ ಅವರು “ಬಿ” ಗ್ರೇಡ್ ಮಾನ್ಯತೆ ಪಡೆದಿದ್ದಾರೆ.ಬೆಂಗಳೂರಿನ ಕರ್ನಾಟಕ ಕಲಾಶ್ರೀ ವಿದ್ವಾನ್ ಸತ್ಯನಾರಾಯಣ ರಾಜು ಅವರಲ್ಲಿ ವಿಶೇಷ
ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಇವರನ್ನು ಶ್ರೀ ಸಿದ್ದರಾಮೇಶ್ವರ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ವಿಶ್ವಕನ್ನಡ ಕಲಾ ಸಂಸ್ಥೆ ಮತ್ತು ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ರವೀಶ್ (ಅಕ್ಕರ) ಅವರು ತಿಳಿಸಿರುತ್ತಾರೆ. ಶಿಕ್ಷಣ ಕ್ಷೇತ್ರ, ಶಿಕ್ಷಕ ಸಂಘಟನಾ ಕ್ಷೇತ್ರ ಮತ್ತು ಸಾಹಿತ್ಯ ಸಂಘಟನಾ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಈ
ಮೂಡುಬಿದಿರೆ: ಕಳೆದ ಕೆಲ ವರ್ಷಗಳಿಂದ ಮೂಡುಬಿದಿರೆ ನೂತನ ಮಾರುಕಟ್ಟೆ ಕಟ್ಟಡ ವಿವಾದವು ಹೈಕೋರ್ಟ್ ನಲ್ಲಿದ್ದು ಇದರ ವಿಚಾರಣೆಯನ್ನು ಮತ್ತೆ ಆ.8 ಕ್ಕೆ ಮುಂದೂಡಿದೆ.ಸಂರಕ್ಷಿತ ಸ್ಮಾರಕ ಪ್ರದೇಶದ ವ್ಯಾಪ್ತಿಯಲ್ಲಿ ಹೊಸ ಮಾರುಕಟ್ಟೆ ಕಟ್ಟಡ ನಿರ್ಮಾಣ ಮಾಡುವ ಮೂಡುಬಿದಿರೆ ಪುರಸಭೆಯ ಕ್ರಮವನ್ನು ಪ್ರಶ್ನಿಸಿ ಜೈಸನ್ ಮಾರ್ಷಲ್ ಸುವಾರಿಸ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಗೂ ಮಾರುಕಟ್ಟೆ ಕಟ್ಟಡ ನಿರ್ಮಾಣ ಅನುಮತಿಯನ್ನು ತಿರಸ್ಕರಿಸಿದ
ಮೂಡುಬಿದಿರೆ: ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ನಲ್ಲಿ ಜುಲೈ 26ರಿಂದ ಆರಂಭವಾಗಲಿರುವ ಒಲಿಂಪಿಕ್ಸ್ ಗೇಮ್ಸ್ಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ದತ್ತು ಶಿಕ್ಷಣ ಯೋಜನೆಯಲ್ಲಿ ಶಿಕ್ಷಣ ಮುಗಿಸಿರುವ ಐವರು ಹಿರಿಯ ವಿದ್ಯಾರ್ಥಿಗಳು ನಮ್ಮ ದೇಶವನ್ನೂ ಪ್ರತಿನಿಧಿಸಲಿದ್ದಾರೆ. ಇದರೊಂದಿಗೆ ಈ ವರೆಗೆ ಒಟ್ಟು 11 ಕ್ರೀಡಾಪಟುಗಳು ವಿವಿಧ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾಗವಹಿಸಿದ ಕೀರ್ತಿ ಆಳ್ವಾಸ್ ಸಂಸ್ಥೆಗೆ ಸಲ್ಲುತ್ತದೆ. ಇದು ಕರ್ನಾಟಕ ರಾಜ್ಯದಿಂದ ಒಂದು ಸಂಸ್ಥೆಯಿಂದ ಅತೀ
ಮೂಡುಬಿದಿರೆ: ಇಲ್ಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಶ್ರೀಧರ್ ಪಿ ಅವರು ಅಧಿಕಾರ ಸ್ವೀಕರಿಸಿದ್ದಾರೆ.ಮೂಡುಬಿದಿರೆ ಎ.ಸಿ.ಎಫ್ ಆಗಿದ್ದ ಸತೀಶ್ ಎನ್.ಅವರು ಕಾರ್ಕಳ ವನ್ಯಜೀವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.ಶ್ರೀಧರ್ ಅವರು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದು ಅಲ್ಲಿಂದ ಮೂಡುಬಿದಿರೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಈ ಹಿಂದೆ ಮೂಡುಬಿದಿರೆ ವಲಯಾರಣ್ಯಾಧಿಕಾರಿಯಾಗಿ
ವಿದ್ಯಾರ್ಥಿಗಳು ಸಂಶೋಧನಾ ಕೃತಿಗಳಿಂದ ಪ್ರೇರಣೆಗೊಳಗಾಗಬೇಕು: ಡಾ.ಕುರಿಯನ್ಮೂಡುಬಿದಿರೆ: ಸಾಹಿತ್ಯ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಸ್ಫೂರ್ತಿಗೊಳಗಾಗುವಂತೆ, ಸಂಶೋಧನಾ ಕೃತಿಗಳು ಬಿಡುಗಡೆಗೊಂಡು ವಿದ್ಯಾರ್ಥಿಗಳು ಪ್ರೇರಣೆಗೊಳಗಾಗಬೇಕು ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಅಭಿಪ್ರಾಯ ಪಟ್ಟರು. ಅವರು ಆಳ್ವಾಸ್ ಕನ್ನಡ ವಿಭಾಗದ ಉಪನ್ಯಾಸಕ ಹರೀಶ್ ಟಿ.ಜಿ.ಯವರ ‘ಉದ್ದ ಲಂಗದ ಕಾಲೇಜು ದಿನಗಳು’ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ನಾವು
ಮೂಡುಬಿದಿರೆ ತಾಲೂಕು ಕಟ್ಟಡ ಕಾರ್ಮಿಕರ ವಾರ್ಷಿಕ ಸಮಾವೇಶವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾವೇಶವನ್ನು ಸಿ.ಐ.ಟಿ.ಯು. ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್ ಉದ್ಘಾಟಿಸಿ ಮಾತನಾಡಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಗಬೇಕಾದ ವಿದ್ಯಾರ್ಥಿವೇತನ ನೀಡಬೇಕಾದ ಮಂಡಳಿಯು ಅದರ ಮೊತ್ತವನ್ನು ಕಡಿತ ಮಾಡಿದೆ. ಹೋರಾಟದ ಬಳಿಕ ಈಗ ಮತ್ತೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕುವ ಪ್ರಕ್ರಿಯೆ ಆರಂಭವಾಗಿದೆ. ಈ ಕುರಿತು ನಡೆದಿರುವ ನ್ಯಾಯಾಂಗ ಹೋರಾಟದ
ಮೂಡುಬಿದಿರೆ: ಸೋಮವಾರದಂದು ಬೀಸಿದ ಗಾಳಿ ಮಳೆಗೆ ಶಿರ್ತಾಡಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಮನೆಯ ಮೇಲೆ ಮರ ಬಿದ್ದು ಅಪಾರ ನಷ್ಟ ಉಂಟಾಗಿದೆ. ಮೂಡುಕೊಣಾಜೆಯ ಮಾಲತಿ ಪೂಜಾರ್ತಿ ಮತ್ತು ದಿವ್ಯ ದಿನೇಶ್ ರವರ ಮನೆಗೆ ಮರ ಬಿದ್ದು ಹಾನಿಯಾಗಿರುವುದಲ್ಲದೆ ಗಣೇಶ್ ಪೂಜಾರಿ ಯವರ ಅಟೋದ ಮೇಲೆ ಮರ ಬಿದ್ದು ಪೂರ್ತಿ ಹಾನಿಯಾಗಿದೆ. ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ ಶೆಟ್ಟಿ ಮತ್ತು ದಿನೇಶ್ ಶೆಟ್ಟಿ ತಿಮರ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುಳಾ ಹನುಮಗುಂದ ಸ್ಥಳಕ್ಕೆ ಭೇಟಿ
ಮೂಡುಬಿದಿರೆ: ಇಲ್ಲಿನ ಬೋವಿ ಸಮಾಜದ ಹಿರಿಯರಾಗಿದ್ದ ಗಿರಿಯ ಬೋವಿ( 88ವ) ಅಲ್ಪ ಕಾಲದ ಅಸೌಖ್ಯದಿಂದ ಬೋವಿ ಕೇರಿಯ ತಮ್ಮ ನಿವಾಸದಲ್ಲಿ ನಿಧನ ಹೊಂದಿದರು. ಹಲವು ದಶಕಗಳಿಂದ ಪುರಾತನ ಆದಿಶಕ್ತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ಸಕ್ರಿಯರಾಗಿದ್ದ ಅವರು ಪುರಾತನ ದೇವಾಲಯದ ಜೀರ್ಣೋದ್ದಾರ ಸಹಿತ ಬೋವಿಕೇರಿಯಲ್ಲಿನ ಸಮಾಜದ ನಾಗಾಲಯದ ಅಭಿವೃದ್ಧಿ ಕಾರ್ಯಗಳಲ್ಲಿ ನಿರಂತರವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಧಾರ್ಮಿಕ, ಪರೋಪಕಾರ ಮನೋಭಾವದ ಅವರು ಬೋವಿ ಸಮಾಜದ ಪರಂಪರೆಯ ಹಿರಿಯ




























