Home ಕರಾವಳಿ Archive by category ಮೂಡಬಿದರೆ (Page 17)

ಕಡಂದಲೆ ದೈವಸ್ಥಾನ ಹಾಗೂ ಮನೆ ಮೇಲೆ ಮರ ಬಿದ್ದು ಹಾನಿ

ಮೂಡುಬಿದಿರೆ : ಸೋಮವಾರ ಸುರಿದ ಭಾರೀ ಗಾಳಿ ಮಳೆಗೆ ಕಡಂದಲೆ ಗ್ರಾಮ ವ್ಯಾಪ್ತಿಯ ಕೆ.ಬಿ. ಕೃಷ್ಣ ಮೂರ್ತಿ ಭಟ್ ಎಂಬವರ ಜೋಡಿಕಟ್ಟೆ ಬಡಗಬೆಟ್ಟು ಎಂಬಲ್ಲಿ ದೈವಸ್ಥಾನದ ಮೇಲೆ ಮರ ಬಿದ್ದು ಹಾನಿ ಆಗಿದೆ. ಮರ ಬಿದ್ದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ ರಸ್ತೆ ಮೇಲೆ ಬಿದ್ದಿದೆ. ಜಾನ್ ಫೆರ್ನಾಂಡಿಸ್ ಜೋಡಿಕಟ್ಟೆ ಮುದಲಗಡಿ ಎಂಬವರ ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಮೂಡುಬಿದಿರೆ: ಸ್ವ ಉದ್ಯೋಗ ಅಭಿವೃಧ್ಧಿ ತರಬೇತಿ ಸಮರೋಪ : ಪ್ರಮಾಣ ಪತ್ರ ವಿತರಣೆ

ಮೂಡುಬಿದಿರೆ: ಬ್ರಾಂಚ್ ಎಂ.ಎಸ್.ಎಂ.ಇ, ಡಿ.ಎಫ್. ಒ, ಮಿನಿಸ್ಟ್ರಿ ಆಫ್ ಮೈಕ್ರೋ ಸ್ಮಾಲ್ & ಮೀಡಿಯಂ ಎಂಟರ್ ಪ್ರೈಸಸ್ ಗವರ್ನಮೆಂಟ್ ಆಫ್ ಇಂಡಿಯ ಇಂಡಸ್ಟ್ರಿಯಲ್ ಎಸ್ಟೇಟ್ ಯೆಯ್ಯಾಡಿ ಮಂಗಳೂರು ಇದರ ವತಿಯಿಂದ ಮಹಿಳಾ ಉದ್ಯಮಿಗಳಿಗೆ ಆಯೋಜಿಸಲಾಗಿದ್ದ ಐದು ದಿನಗಳ ಮ್ಯಾನೇಜ್ ಮೆಂಟ್ ಡೆವಲಪ್ ಮೆಂಟ್ ತರಬೇತಿಯ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಮೂಡಬಿದಿರೆ ವೀಚೀಸ್ ಫ್ಯಾಶನ್ ಡಿಸೈನಿಂಗ್ ಹಾಗು ಕೌಶಲ್ಯಾಧಾರಿತ ತರಬೇತಿ ಕೇಂದ್ರದಲ್ಲಿ ನಡೆಯಿತು.ಎಂ.ಎಸ್.ಎಮ್.ಇ

ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ

ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ

ಪಡುಮಾರ್ನಾಡು ರಸ್ತೆ, ಗದ್ದೆಗಳಲ್ಲಿ ಜಲಾವೃತ

ಮೂಡುಬಿದಿರೆ: ಮಂಗಳೂರು-ಕಾರ್ಕಳ ಹೆದ್ದಾರಿಯ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬನ್ನಡ್ಕ ಎಸ್‌ಕೆಎಫ್ ಬಳಿ ಗುಡ್ಡ ಕುಸಿತದಿಂದ ರಸ್ತೆ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಪೋಯ್ಯದ ಪಲ್ಕೆ ಬಳಿ ಪ್ರವಾಹದಿಂದ ರಸ್ತೆ ಹಾಗೂ ಗದ್ದೆಗೆ ನೀರು ನುಗ್ಗಿ ಹಾನಿ, ಕೆಂಪುಲು ಬಳಿ ಮಳೆಯಿಂದ ರಸ್ತೆಗೆ ಹಾನಿ, ಕೆಸರ್ ಗದ್ದೆ ವಿಕ್ಟರ್ ಮನೆ ಬಳಿ ಮಳೆಯ ಪ್ರವಾಹ ದಿಂದ ಮೋರಿ ಬ್ಲಾಕ್ ಆಗಿ ಜಮೀನಿಗೆ ನೀರು ಬಂದು ಹಾನಿಯಾಗಿದೆ. ಅಂಬೂರಿ ಬಳಿಯ ಕಿರಣ್

ಮೂಡುಬಿದಿರೆ: ನೇಣಿಗೆ ಶರಣಾದ ವಾಹನ ತರಬೇತುದಾರೆ

ಮೂಡುಬಿದಿರೆ: ಕಳೆದ 25 ವರ್ಷಗಳಿಂದ ವಾಹನ ತರಬೇತುದಾರೆಯಾಗಿ ಕೆಲಸ ನಿರ್ವಹಿಸುತ್ತಿದ್ದ ಮಹಿಳೆಯೋರ್ವರು ತನ್ನ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಡಂಗಲ್ಲು ಹುಡ್ಕೋ ಕಾಲನಿ ನಿವಾಸಿ ಬೆನ್ನಿ ಡಿಸೋಜ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೂಡುಬಿದಿರೆಯ ಪ್ರಸಿದ್ಧ ಮಂಜುಶ್ರೀ ಡ್ರೈವಿಂಗ್ ಸ್ಕೂಲ್ ನಲ್ಲಿ ಅವರು ವಾಹನ ತರಬೇತುದಾರೆಯಾಗಿದ್ದರು.ಪ್ರಾಂತ್ಯ ಹೈಸ್ಕೂಲ್ ನ ಎಂಟನೇ

ಮಂಗಳೂರು: ಜುಲೈ 7ರಂದು ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ

ಮಂಗಳೂರು: ಖ್ಯಾತ ವಕೀಲರು ಮತ್ತು ನೋಟರಿ ಆಗಿರುವ ಮೂಡಬಿದಿರೆ ಚೌಟರ ಅರಮನೆಯ ಡಾ.ಅಕ್ಷತಾ ಆದರ್ಶ್ ಅವರು ಬರೆದ ಸರಳ ಕಾನೂನುಗಳ ಅರಿವಿಲ್ಲದೆ ಮೋಸ ಹೋಗದಿರಿ ಎಂಬ ಕಾನೂನು ಮಾಹಿತಿ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮವು ಜುಲೈ 7ರಂದು ನಗರದ ಎಂ.ಜಿ ರಸ್ತೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಜುಲೈ 7ರಂದು ಬೆಳಿಗ್ಗೆ 10.15ಕ್ಕೆ ಸರಿಯಾಗಿ ನಡೆಯಲಿರುವ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ

ಕಿನ್ನಿಗೋಳಿ: ರೋಟರಿಯ ವಲಯ ಸಹಾಯಕ ಗವರ್ನರ್ ಆಗಿ ಶರತ್ ಶೆಟ್ಟಿ ಆಯ್ಕೆ

ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ,ಸಂಕಲಕರಿಯ ಹಾಲು ಉತ್ಪಾದಕರ ಸಂಘ,ಮುಲ್ಕಿ ವಲಯ ಪತ್ರಕರ್ತರ ಸಂಘ,ಕಿನ್ನಿಗೋಳಿಯ ಸಾರ್ವಜನಿಕ

ಮೂಡುಬಿದಿರೆ: ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ  ಚಂದ್ರಶೇಖರ  ಪದೋನ್ನತಿ

ಮೂಡುಬಿದಿರೆ:  ಕಳೆದ 23 ವರ್ಷಗಳಿಂದ ಅಗ್ನಿಶಾಮಕ ದಳದಲ್ಲಿ ಚಾಲಕರಾಗಿದ್ದ ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ಅಮನಬೆಟ್ಟುವಿನ ನಿವಾಸಿ ಚಂದ್ರಶೇಖರ ಅವರು ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿಯಾಗಿ ಪದೋನ್ನತಿಯನ್ನು ಹೊಂದಿದ್ದಾರೆ. 2001ರಲ್ಲಿ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆಯನ್ನು ಆರಂಭಿಸಿದ್ದ ಅವರು ಬೆಳ್ತಂಗಡಿ, ಮೂಡುಬಿದಿರೆ ಮತ್ತು ಕಾರ್ಕಳದಲ್ಲಿ ಸೇವೆಯನ್ನು ಸಲ್ಲಿಸಿದ್ದರು.  ಇದೀಗ ಕಾರ್ಕಳದಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಅವರು ಕಾರ್ಕಳ

ಸರಕಾರದ ಸವಲತ್ತುಗಳಿಂದ ವಂಚಿತರಾಗಿದ್ದಾರೆ ಗ್ರಾ.ಪಂ.ನೌಕರರು:ಅಧಿಕಾರಿಗಳು ಮೌನ

ಆರೋಗ್ಯ ಭದ್ರತೆಯಿಲ್ಲ, ಭವಿಷ್ಯನಿಧಿಯಿಲ್ಲ, ನಿವೃತ್ತಿಯ ನಂತರ ಆರ್ಥಿಕ ಭದ್ರತೆ ಸಹಿತ ಸರಕಾರದ ಹಲವಾರು ಸವಲತ್ತುಗಳಿಂದ ಗ್ರಾ.ಪಂಚಾಯತ್ ನೌಕರರು ವಂಚಿತರಾಗಿದ್ದು ಇವರ ಈ ಸಮಸ್ಯೆಗಳನ್ನು ಬಗೆ ಹರಿಸದೆ ಅಧಿಕಾರಿಗಳು ಮೌನ ವಹಿಸಿದ್ದಾರೆ. ತಮ್ಮ ಮನೆಗಳಿಗೆ ಆಧಾರ ಸ್ಥಂಭವಾಗಿರುವ ಗ್ರಾ.ಪಂ. ನೌಕರರು ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾದರೆ ಅವರಿಗೆ ಇಎಸ್ ಐ ಇರಲ್ಲ ಅಲ್ಲದೆ ಪಂಚಾಯತ್ ನಿಂದ ಬರಬೇಕಾಗಿರುವ ತಿಂಗಳ ಸಂಬಳವೂ ಬರಲ್ಲ ಇದರಿಂದಾಗಿ ಆರ್ಥಿಕವಾಗಿ

ಕಡಂದಲೆ : ಮನೆಯ ಮೇಲೆ ಮರ ಬಿದ್ದು ಹಾನಿ

ಮೂಡುಬಿದಿರೆ : ಕಡಂದಲೆ ಗ್ರಾಮ ವ್ಯಾಪ್ತಿಯ ಬಾರಬೆಟ್ಟುವಿನ ಅಣ್ಣಿ ಎಂಬವರ ಮನೆ ಮೇಲೆ ಬುಧವಾರ ಸಂಜೆ ಭಾರೀ ಗಾತ್ರದ ಮರವೊಂದು ಬಿರುಗಾಳಿಗೆ ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ. ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. ಸ್ಥಳಕ್ಕೆ ಗ್ರಾ.ಪಂ. ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ದಿನೇಶ್ ಕಂಗ್ಲಾಯಿ, ಪಿಡಿಓ ರಕ್ಷಿತಾ, ವಿಎ ಅನಿಲ್ ಕುಮಾರ್ ಆಗಮಿಸಿ ಪರಿಶೀಲನೆ ನಡೆಸಿದರು.