ಮೂಡುಬಿದಿರೆ: ಸಿಡಿಲು ಬಡಿದು ಹಾನಿಗೊಳಗಾಗಿದ್ದ ತೆಂಗಿನ ಮರವನ್ನು ಕಡಿಯಲು ಹತ್ತಿದ್ದ ಕೂಲಿ ಕಾರ್ಮಿಕರೊಬ್ಬರು ತೆಂಗಿನ ಮರ ತುಂಡಾಗಿ ಕೆಳಗೆ ಬಿದ್ದ ಪರಿಣಾಮವಾಗಿ ಸಾವನ್ನಪ್ಪಿದ ಘಟನೆ ಪಡುಮಾರ್ನಾಡು ಗ್ರಾಮದ ಬಸವನಕಜೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ನಡೆದಿದೆ.ಸಾವನ್ನಪ್ಪಿದ ಕೂಲಿ ಕಾರ್ಮಿಕ ಅಲಂಗಾರು ಚಂದ್ರಾಪುರ ನಿವಾಸಿ ನವೀನ್ ಪ್ರಕಾಶ್
ಮೂಡುಬಿದಿರೆ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಮೂಡುಬಿದಿರೆ ಮತ್ತು ಸರ್ವೋದಯ ಫ್ರೆಂಡ್ಸ್ ಇವುಗಳ ವತಿಯಿಂದ ಮಾಸ್ತಿಕಟ್ಟೆ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಕೊಡೆ ಮತ್ತು ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಗುರುಪ್ರಸಾದ್ ಭಂಡಾರಿ, ಪ್ರಧಾನ ಕಾರ್ಯದರ್ಶಿ ನವೀನ ಕುಂದರ್, ಉಪಾಧ್ಯಕ್ಷ ಗಿರೀಶ್ ನಾಯಕ್, ಕೋಶಾಧಿಕಾರಿ ಶಂಕರ ಕೋಟ್ಯಾನ್, ಯಶವಂತ್, ದೀರಜ್, ಸುಧಾಕರ,
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿ ಆವರಣದಲ್ಲಿ ನಡೆದ 2024ನೇ ಸಾಲಿನ 2 ದಿನದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ 2468 ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ಅವಕಾಶ ನೀಡುವುದರೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿದೆ ಈ ಬಾರಿಯ ಉದ್ಯೋಗ ಮೇಳದಲ್ಲಿ ಭಾಗವಹಿಸಿದ ಒಟ್ಟು 258 ಕಂಪನಿಗಳ ಪೈಕಿ 217 ಕಂಪನಿಗಳು 5953 ಜನರನ್ನು ಶಾರ್ಟ್ಲಿಸ್ಟ್ಗೊಳಿಸಿ ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 1542
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಜೂನ್ 12 ಮತ್ತು 13 ರಂದು ಸಂಜೆ 6.45 ಕ್ಕೆ ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ರಂಗಾಯಣ ಮೈಸೂರು ತಂಡದಿಂದ ಗೋರ್ ಮಾಟಿ ಎಂಬ ಕನ್ನಡ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಬಂಜಾರ ಜನಾಂಗದ ಕಲೆ ಸಂಸ್ಕೃತಿ ಬದುಕು ಬವಣೆಗಳ ಸಂಕಥನಗಳಿಂದ ಕೂಡಿದ ಗೋರ್ ಮಾಟಿ ನಾಟಕವನ್ನು ಪ್ರಸಿದ್ಧ ರಂಗನಿರ್ದೇಶಕರಾದ ಸಿ.ಬಸವಲಿಂಗಯ್ಯ ನಿರ್ದೇಶಿಸಿದ್ದಾರೆ. ಈ
ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಯುಜಿ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜಿನ ಒಂದೇ ಕ್ಯಾಂಪಸ್ ನ ಕ್ಲಾಸ್‌ರೂಮ್ ವ್ಯವಸ್ಥೆಯಲ್ಲಿ 600 ಅಂಕಗಳ ಮೇಲೆ 181 ವಿದ್ಯಾರ್ಥಿಗಳು ಅಂಕ ಪಡೆಯುವ ಮೂಲಕ ಆಳ್ವಾಸ್ ಸಾರ್ವಕಾಲಿಕ ಸಾಧನೆಯನ್ನು ಮಾಡಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆಳ್ವಾಸ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು 670ಕ್ಕೂ ಅಧಿಕ 11 ವಿದ್ಯಾರ್ಥಿಗಳು, 650ಕ್ಕೂ ಅಧಿಕ 51
ಮೂಡುಬಿದಿರೆ: ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ ಮತ್ತು ಮೂಡುಬಿದಿರೆ ಥಡ್ ೯ ಶಾಲೆಯ ಜಂಟಿ ಆಶ್ರಯದಲ್ಲಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎಸ್. ವೆಂಕಟಾಚಲಪತಿ ಅವರು ಗಿಡಗಳನ್ನು ನೆಡುವ ಮೂಲಕ ಚಾಲನೆಯನ್ನು ನೀಡಿದರು.ಶಾಲೆಯ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ರಾಬಟ್ ೯ ಡಿ’ಸೋಜಾ, ತಾ.ಪಂ.ಸಿಬಂದಿ
ಮೂಡುಬಿದಿರೆ: ಕಳೆದ ಭಾನುವಾರದಂದು ವಾಲ್ಪಾಡಿಯಲ್ಲಿ ಅಪಘಾತಕ್ಕೊಳಗಾಗಿದ್ದ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾಲ್ಪಾಡಿಯಲ್ಲಿ ಭಾನುವಾರ ಆಕ್ಟಿವಾ-ರಿಕ್ಷಾ ಮಧ್ಯೆ ಅಪಘಾತವಾಗಿದ್ದು ಇದರಲ್ಲಿ ಆಕ್ಟೀವಾ ಚಾಲಕ ವಾಲ್ಪಾಡಿ ನಿವಾಸಿ ಲೂವಿಸ್ ಡಿಕೋಸ್ತ (52)ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಲೂವಿಸ್ ಅವರು ವಾಲ್ಪಾಡಿಯಲ್ಲಿ ಅಂಗಡಿ ನಡೆಸುತ್ತಿದ್ದು ಭಾನುವಾರ ಮಧ್ಯಾಹ್ನದ
ಮೂಡುಬಿದಿರೆ: ಇಲ್ಲಿನ ಜೈನ ಪ್ರೌಢ ಶಾಲೆಯ ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣರಾಜ ಶೆಟ್ಟಿ ( 62) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. ಒಟ್ಟು 31 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಅವರು ಜೈನ್ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಸಿದ್ದರು.ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಸಹಿತ ಹಲವೆಡೆ ಅವರು ಗೌರವಾದರಗಳಿಗೆ ಪಾತ್ರರಾಗಿದ್ದರು.ಕೆಲವು ದಿನಗಳ ಹಿಂದೆ ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ
ಮೂಡುಬಿದಿರೆ: ಬಹು ವಿರಳವಾದ ವ್ಯಕ್ತಿತ್ವವನ್ನು ಹೊಂದಿದ್ದ ಶಿವರಾಮ ಕಾರಂತರು ತಮಗೆ ಅನಿಸಿದ್ದನ್ನು, ಮನಸ್ಸಿಗೆ ಬಂದದನ್ನು ನೇರವಾಗಿ ಹೇಳುತ್ತಿದ್ದರಲ್ಲದೆ ವಿಮರ್ಶೆ ಮಾಡಿ ಜೀವನ ಮಾಡು ಎಂಬ ವಿಚಾರವನ್ನು ಬಿಟ್ಟು ಹೋದವರು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಲಕ್ಷ್ಮೀಶ ತೋಳ್ಪಾಡಿ ಹೇಳಿದರು. ಅವರು ಶಿವರಾಮ ಕಾರಂತ ಪ್ರತಿಷ್ಠಾನ (ರಿ) ಮೂಡುಬಿದಿರೆ ಇದರ ವತಿಯಿಂದ ಮೂಡುಬಿದಿರೆ ಕನ್ನಡ ಭವನದ ಮಹಾಕವಿ ರತ್ನಾಕರ ವರ್ಣಿ ವೇದಿಕೆಯಲ್ಲಿ ನಡೆದ 2023ನೇ
ಮೂಡುಬಿದಿರೆ ಕೋ-ಓಪರೇಟಿವ್ ಸರ್ವೀಸ್ ಸೊಸೈಟಿ ಲಿ.ಮೂಡುಬಿದಿರೆ ಮತ್ತು ಎಮ್.ಸಿ.ಲಿಯೋಡ್ ಫಾರ್ಮಾ ಇವುಗಳ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತಾ ಪರೀಕ್ಷಾ ಶಿಬಿರವು ಬ್ಯಾಂಕಿನ ಸಭಾಭವನದಲ್ಲಿ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅವರು ದೀಪ ಬೆಳಗಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಆರೋಗ್ಯದ ಬಗ್ಗೆ ನಾವು ಇಂದು ವಿಶೇಷವಾಗಿ ಗಮನ ಹರಿಸುವುದು ಅನಿವಾರ್ಯವಾಗಿದೆ. ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಶಿಬಿರವನ್ನು




























