Home ಕರಾವಳಿ Archive by category ಮೂಡಬಿದರೆ (Page 25)

ಮೂಡುಬಿದಿರೆ: ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ರಕ್ಷಿತಾ ಆಯ್ಕೆ

ಮೂಡುಬಿದಿರೆ: ಗುಜರಾತಿನ ಆಲಹಾಬಾದ್ ನಲ್ಲಿ ಫೆ. 16-18 ರಿಂದ ನಡೆಯುವ ರಾಷ್ಟ್ರೀಯ ಜ್ಯೂನಿಯರ್ ಅಥ್ಲೆಟಿಕ್ಸ್ ಗೆ ಎಡಪದವು ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ರಕ್ಷಿತಾ ಆಯ್ಕೆಯಾಗಿದ್ದಾರೆ.2023-24 ನೇ ಸಾಲಿನಲ್ಲಿ ಪುತ್ತೂರಿನಲ್ಲಿ ನಡೆದ ರಾಜ್ಯಮಟ್ಟದ 17ವರ್ಷ ವಯೋಮಿತಿ ಶಾಲಾ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಎತ್ತರ ಜಿಗಿತದಲ್ಲಿ

ಮೂಡುಬಿದಿರೆ: ಪುರಸಭೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ

ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ

ಮೂಡುಬಿದಿರೆ: ಸಮಾಜ ಮಂದಿರದಲ್ಲಿ 75ನೇ ಗಣರಾಜ್ಯ ದಿನಾಚರಣೆ

ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾ(ರಿ) ಇದರ ವತಿಯಿಂದ 75ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಮಾಜಿ ಸಚಿವ, ಸಮಾಜ ಮಂದಿರ ಸಭಾದ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಧ್ವಜರೋಹಣಗೈದು ಶುಭ ಹಾರೈಸಿದರು. ಉಪಾಧ್ಯಕ್ಷ ಸಂಪತ್ ಸಾಮ್ರಜ್ಯ, ಪ್ರಧಾನ ಕಾರ್ಯದರ್ಶಿ ಸುರೇಶ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಕೆ.ಆರ್. ಪಂಡಿತ್, ಸಿ.ಹೆಚ್.ಗಫೂರ್ , ಪುಂಡಿಕೈ ಗಣಪಯ್ಯ ಭಟ್, ದಯಾನಂದ ಪಂಡಿತ್ ರಾಮ್ ಪ್ರಸಾದ್, ಎಂ.ಎಸ್.ಕೋಟ್ಯಾನ್, ವೆಂಕಟೇಶ್ ಕಾಮತ್, ರಾಜೇಶ್

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮೂಡುಬಿದಿರೆ: ರಾಷ್ಟ್ರೀಯ ಮತದಾರರ ದಿನವನ್ನು ಮೂಡುಬಿದಿರೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕಾಧಿಕಾರಿ ಲೋಕೇಶ್ ಸಿ. ಅವರು ಮಾತನಾಡಿ, ಮತದಾನ ಮಾಡುವ ಅವಕಾಶವನ್ನು ಯುವಜನತೆ ಸದುಪಯೋಗಪಡಿಸಿಕೊಳ್ಳಬೇಕು.ನಮಗೆ ಮೂಲಭೂತ ಸೌಲಭ್ಯ ಬೇಕಾದಲ್ಲಿ ನಾವು ಉತ್ತಮ ನಾಯಕನ ಆಯ್ಕೆ ಮಾಡಬೇಕು ಹಾಗೂ ಈ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದ್ದು, ವಿದ್ಯಾರ್ಥಿಗಳು ಅದರಲ್ಲಿ ಭಾಗವಹಿಸಿ ಮಾಹಿತಿ

ಮೂಡುಬಿದಿರೆ: ಯೆನೆಪೋಯದಲ್ಲಿ ರೋಬಸ್ಟ್ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್

ಮೂಡುಬಿದಿರೆ: ಯೆನೆಪೊಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮೆಷಿನ್ ಲರ್ನಿಂಗ್ ವಿಭಾಗದ ಸಹಯೋಗದೊಂದಿಗೆ ಯೆನಾರ್ಟಿಫಿಷಿಯಾ ವಿದ್ಯಾರ್ಥಿ ಸಂಘದ ವತಿಯಿಂದ ಅನ್‌ಸ್ಕ್ರ್ಯಾಂಬಲ್ 2.0 ರಾಷ್ಟ್ರೀಯ ಹ್ಯಾಕಥಾನ್ ಸ್ಪರ್ಧೆ ನಡೆಯಿತು. ಉಡುಪಿಯ ರೋಬೋಸಾಫ್ಟ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಕ್ಯಾಂಪಸ್ ರಿಲೇಶನ್‌ಶಿಪ್ ಮ್ಯಾನೇಜರ್ ಲಕ್ಷ್ಮೀ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿಮ್ಮಲ್ಲಿ ನೀವು ನಂಬಿಕೆ

ಮೂಡುಬಿದಿರೆ : ಜ.26ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’

ಎಸ್.ಕೆ.ಎಸ್.ಎಸ್.ಎಫ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಜ.26 ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರತಿ ವರ್ಷ ಜ.26 ಗಣರಾಜ್ಯೋತ್ಸವದಂದು ಜಿಲ್ಲಾ ವ್ಯಾಪ್ತಿಯಲ್ಲಿ ‘ಮಾನವ ಸರಪಳಿ’ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದು ಈ ವರ್ಷ ಕೂಡಾ

* ಮೂಡುಬಿದಿರೆ: ಶ್ರೀ ರಾಮನ ಮಂದಿರ ನಿರ್ಮಾಣಕ್ಕಾಗಿ ಬೆಳುವಾಯಿಯಲ್ಲಿ ನಿರಂತರ ಬೆಳಗಿದ ನಂದಾದೀಪ

ಮೂಡುಬಿದಿರೆ : ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಮಂದಿರವು ಯಾವುದೇ ಅಡೆತಡೆಯಿಲ್ಲದೆ ನಿರ್ಮಾಣವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳುವಾಯಿಯ ಮನೆಯೊಂದರ ದೇವರ ಕೋಣೆಯಲ್ಲಿ ಕಳೆದ ಮೂರೂವರೆ ವರ್ಷಗಳಿಂದ “ನಂದಾದೀಪ” ನಿರಂತರ ಬೆಳಗುತ್ತಿದೆ. 2020 ರ ಆಗಸ್ಟ್ 4ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಯಿತು. ಆ ದಿನದಿಂದಲೇ ಬಿಜೆಪಿಯ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಬೆಳುವಾಯಿ ಮತ್ತು ಅವರ

ಮೂಡುಬಿದಿರೆ: ಜ.21ರಂದು ಸ್ಫೂರ್ತಿ ಕಲಾ ಸಂಭ್ರಮ

ಮೂಡುಬಿದಿರೆ: ರಿಜ್ಯುವನೇಟ್ ಚೈಲ್ಡ್ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದ ಸ್ಫೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಹಾಗೂ ತರಬೇತಿ ಕೇಂದ್ರದ ಆಶ್ರಯದಲ್ಲಿ ಸ್ಫೂರ್ತಿ ಕಲಾ ಸಂಭ್ರಮ 2024 ಕಾರ್ಯಕ್ರಮವು ಜ.21ರಂದು ಅರಮನೆಬಾಗಿಲು ಬಳಿಯಿರುವ ಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಶಾಲೆಯ ಸಂಸ್ಥಾಪಕ ಪ್ರಕಾಶ್ ಜೆ.ಶೆಟ್ಟಿಗಾರ್ ತಿಳಿಸಿದರು.ಅವರು ಮೂಡುಬಿದಿರೆ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.ಕಲಾಮೇಳದಲ್ಲಿ ಆಹಾರಮೇಳದ

ಮೂಡುಬಿದಿರೆ : ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು

ನೋ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ ವಾಹನಗಳಿಗೆ ಲಾಕ್ ಹಾಕಿದ ಪೊಲೀಸರು ಮೂಡುಬಿದಿರೆ : ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಆವರಣದ ನೋ-ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲುಗಡೆ ಮಾಡಿರುವ ವಾಹನಗಳಿಗೆ ಮೂಡುಬಿದಿರೆ ಪೊಲೀಸರು ಗುರುವಾರ ಸಂಜೆ ಲಾಕ್ ಮಾಡಿ ಎಚ್ಚರಿಕೆ ನೀಡಿದ ಘಟನೆ ನಡೆಯಿತು.ಮೂಡುಬಿದಿರೆಯ ಬಸ್ ನಿಲ್ದಾಣದ ಆವರಣದಲ್ಲಿ ಖಾಸಗಿ ವ್ಯಕ್ತಿಗಳು ಕಾರು, ಆಟೋ, ಓಮ್ನಿ ಹಾಗೂ ದ್ವಿಚಕ್ರ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಎಲ್ಲೆಲ್ಲಿಗೋ ಹೋಗಿ ಎಷ್ಟೋ