ಮೂಡುಬಿದಿರೆಯ ಹೋಲಿ ರೋಸರಿ ಪ್ರೌಢಶಾಲೆಯ ಕನ್ನಡ ಅಧ್ಯಾಪಕ ಡಾ. ರಾಮಕೃಷ್ಣ ಶಿರೂರು ಅವರು ಕರ್ನಾಟಕ ಸಿರಿಗನ್ನಡ ಸಿರಿ ರಾಜ್ಯಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ ಎಂದು ದಾವಣಗೆರೆಯ ಕರ್ನಾಟಕ ರಾಜ್ಯ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸಾಲಿಗ್ರಾಮ ಗಣೇಶ್ ಶೆಣೈ ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ. 2025 ನವಂಬರ್ 23 ರಂದು ದಾವಣಗೆರೆಯಲ್ಲಿ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.ಸ್ಪರ್ಧೆಯ ಫಲಿತಾಂಶ :ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್
ಮೂಡುಬಿದಿರೆ : ಪುರಸಭಾ ವ್ಯಾಪ್ತಿಯ ಸಾವ೯ಜನಿಕ ಸ್ಥಳಗಳಲ್ಲಿ, ಖಾಲಿ ಸೈಟ್ಟ್ ನಲ್ಲಿ, ರಸ್ತೆ ಬದಿಗಳಲ್ಲಿ, ತೋಡಿನಲ್ಲಿ ಹೀಗೆ ಎಲ್ಲೆಂದರಲ್ಲಿ ಕಸ ಬಿಸಾಡುವವರೇ ಜೋಕೆ.. ನಿಮಗೆ ಪುರಸಭೆಯಿಂದ ಬೀಳುತ್ತೆ 10,000 ದಂಡ. ಮೂಡುಬಿದಿರೆ ಪುರಸಭೆಯು ಸಮಪ೯ಕ ತ್ಯಾಜ್ಯ ನಿವ೯ಹಣೆಯ ಬಗ್ಗೆ ಕಳೆದ ಹಲವು ವರುಷಗಳಿಂದ ಶ್ರಮ ವಹಿಸುತ್ತಾ ಬರುತ್ತಿದೆ. ಮನೆಗಳಲ್ಲಿ, ಉದ್ಯಮದಲ್ಲಿ, ವ್ಯಾಪಾರದಲ್ಲಿ, ವಸತಿ ಸಮುಚ್ಛಯಗಳಲ್ಲಿ ಉತ್ಪಾದನೆಯಾಗುವ ಘನ ತ್ಯಾಜ್ಯವನ್ನು ಕಡ್ಡಾಯವಾಗಿ
ಮೂಡುಬಿದಿರೆ: ಇಲ್ಲಿನ ಕಡಲಕೆರೆಯಲ್ಲಿರುವ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಪ್ರೀತಿ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ರಾಜ್ಯ ಮಟ್ಟದಲ್ಲಿ ಸಮಗ್ರ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ 4 x 100 ಮೀಟರ್ ರಿಲೇ: ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಿಂದೆ ಅವರು 400 ಮೀಟರ್ ಫ್ರೀ ಸ್ಟೈಲ್- ದ್ವಿತೀಯ ಸ್ಥಾನ, 400 ಮೀಟರ್ ಫ್ರೀ ಸ್ಟೈಲ್- ಪ್ರಥಮ
ಕಾಪು ಪುರಸಭಾ ವ್ಯಾಪ್ತಿಯ ಬೀಡುಬದಿ ವಾರ್ಡಿನ ಶ್ರೀ ಕೃಷ್ಣ ಪೂಜಾರಿ ಅವರ ಮನೆಯಿಂದ ಸಾದು ಶೆಟ್ಟಿ ಮನೆ ವರೆಗೆ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 5 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು 20-11-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆಯ
ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಅವಳಿ ಪ್ರಶಸ್ತಿ ಪಡೆದಿದೆ. ಆಳ್ವಾಸ್ ಹುಡುಗರ ವಿಭಾಗದಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ ಗಳಿಸಿ 178 ಅಂಕಗಳೊಂದಿಗೆ ಪ್ರಥಮ ಸ್ಥಾನ ಪಡೆದುಕೊಂಡಿತು. ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 2
ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಕಾಂಪಿಟೀಷನ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮೂಡುಬಿದಿರೆ ಕೋಡೆಬಾಗಿಲಿನ ಯುವಕ ಅನ್ಸಾರ್ ಎಂಬಾತ ಎರಡು ಚಿನ್ನದ ಪದಕಗಳೊಂದಿಗೆ ಜೂನಿಯರ್ ಮಿಸ್ಟರ್ ವರ್ಲ್ಡ್ ವಿಭಾಗದಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.ದುಬೈನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಭಾರತ ,ಸ್ಪೈನ್,ಕೊರಿಯಾ,ಪೋಲಂಡ್,ನ್ಯೂಯಾರ್ಕ್, ಆಸ್ಟ್ರೇಲಿಯಾ, ಪಾಕಿಸ್ತಾನ,ಇರಾನ್, ಚೈನಾ ಹಾಗೂ ಇತರ ದೇಶಗಳ
ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ. ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಮೂಡುಬಿದಿರೆ : ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ದ್ವೈಮಾಸಿಕ ಪತ್ರಿಕೆ “ವಾಯ್ಸ್ ಆಫ್ ವೈಬ್ರೆಂಟ್”ನ ಬಿಡುಗಡೆ ಸಮಾರಂಭವು ಸೋಮವಾರ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಾಯ್ಸ್ ಆಫ್ ವೈಬ್ರೆಂಟ್ ಪತ್ರಿಕೆಯ ಮೊದಲ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಪಠ್ಯ ಚಟುವಟಿಕೆಯೊಂದಿಗೆ ಪಠ್ಯೇತರ ಕೌಶಲವನ್ನು ಬರವಣಿಗೆಯ ರೂಪದಲ್ಲಿ ಈ ಪತ್ರಿಕೆಯಲ್ಲಿ ಪ್ರಕಟಿಸಬೇಕು. ಸಂಸ್ಥೆಯು ತಮಗೆ
ಮೂಡುಬಿದಿರೆ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್ ಆಗಿದ್ದಾರೆ. ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7 ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಈಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮೂಡುಬಿದಿರೆ ಸಂಪಿಗೆ ನಿವಾಸಿ ಪ್ರಕಾಶ್ ಪೂಜಾರಿ- ಗೃಹಿಣಿ ಸೌಮ್ಯ ದಂಪತಿಯ ಪುತ್ರಿ.




























