ಮೂಡುಬಿದಿರೆ: ಖಾಸಗಿ ಶಿಕ್ಷಣ ಸಂಸ್ಥೆಯ ಬಸ್ಸು ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾದ ಪರಿಣಾಮವಾಗಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಮೃತಪಟ್ಟ ಸಂಪಿಗೆಯಲ್ಲಿ ನಡೆದಿದೆ. ಸುರತ್ಕಲ್ ನ ಆಲಿಯಮ್ಮ (76) ಮೃತಪಟ್ಟ ವೃದ್ಧೆ. ಮೂಡುಬಿದಿರೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸುರತ್ಕಲ್‌ನಿಂದ ಬೀಪಾತಿಮ್ಮ, ಆಯೀಷಾ ಹಾಗೂ ಆಲಿಯಮ್ಮ ಎಂಬವರು
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಎರಡು ದಿನಗಳು ನಡೆದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿಯ 13ನೇ ಆವೃತಿಯಲ್ಲಿ 1,871 ಉದ್ಯೋಗಾಕಾಂಕ್ಷಿಗಳು ಸ್ಥಳದಲ್ಲಿಯೇ ನೇಮಕಗೊಂಡಿದ್ದಾರೆ. ಭಾಗವಹಿಸಿದ ಒಟ್ಟು 198 ಕಂಪನಿಗಳ ಪೈಕಿ 174 ಕಂಪನಿಗಳು, 3,259 ಜನರನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿವೆ. ಉದ್ಯೋಗ ಮೇಳದ ಎರಡನೇ ದಿನ 2,284 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದು, ಒಟ್ಟು ಎರಡು ದಿನಗಳ ಉದ್ಯೋಗ ಮೇಳದಲ್ಲಿ 10,252 ಅಭ್ಯರ್ಥಿಗಳು ಭಾಗವಹಿಸಿದರು.
ಕಡಲ ಕೆರೆ ಕೈಗಾರಿಕಾ ಪ್ರದೇಶದಿಂದ ಸಾರ್ವಜನಿಕ ರಸ್ತೆ ಸಾರ್ವಜನಿಕ ಜನ ವಸತಿ ಪ್ರದೇಶಕ್ಕೆ ಕೊಳಚೆ ನೀರು ಬರುತ್ತಿದ್ದು ಸುಮಾರು ಮೂರು ವರ್ಷಗಳಿಂದ ಸತತ ದೂರು ನೀಡಿದ್ದರೂ ಪುರಸಭೆಯು ಕ್ರಮಕೈಗೊಂಡಿಲ್ಲವೆಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ರಾಜೇಶ್ ಕಡಲಕೆರೆ ಅವರು ಪುರಸಭಾ ಕಛೇರಿಯ ಮುಂಭಾಗ ಧರಣಿ ಕುಳಿತು ಪುರಸಭೆಗೆ ಧಿಕ್ಕಾರವನ್ನು ಕೂಗಿದರು. ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗಳಿಂದ ಹೊರ ಬಿಡುತ್ತಿರುವ ಕೊಳಚೆ ನೀರು ರಸ್ತೆ ಬದಿಯ ಚರಂಡಿಗಳಲ್ಲಿ ಹರಿದು
ನಮ್ಮ ತನದಲ್ಲಿ ಜಗತ್ತನ್ನು ನೋಡುವ, ಮತ್ತೊಬ್ಬರ ಕಷ್ಟಗಳನ್ನು ಅರಿಯುವುದರ ಮೂಲಕ ನಾವೆಲ್ಲರೂ ಒ೦ದೇ ಎ೦ಬುದನ್ನು ಧರ್ಮಗಳು ಹೇಳುತ್ತವೆ. ಅ೦ಧಕಾರದಲ್ಲಿರುವವರನ್ನು ಬೆಳಕಿನೆಡೆಗೆ ಕೊ೦ಡೊಯ್ಯುವುದೇ ಧರ್ಮ. ಈ ನಿಟ್ಟಿನಲ್ಲಿ ಎಲ್ಲರನ್ನೂ ಧರ್ಮೀಯರನ್ನಾಗಿ ಮಾಡುವುದು ಧರ್ಮಗಳ ಕರ್ತವ್ಯವಾಗಬೇಕು ಎ೦ದು ಮೂಡುಬಿದಿರೆ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಹೇಳಿದರು. ಅವರು ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆ೦ಟ್ ವಿದ್ಯಾ
ಮೂಡುಬಿದಿರೆ: ಕ್ಷೇತ್ರ ಸಮನ್ವಯ ಸಂಪನ್ಮೂಲ ಕೇಂದ್ರ ಮೂಡುಬಿದಿರೆ ಇಲ್ಲಿ ಮಂಗಳವಾರ ವಲಯದ 15 ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಅವರು ಸಾಧನ ಸಲಕರಣೆ ವಿತರಿಸಿ ಮಾತನಾಡಿ ಪೋಷಕರು ತಮ್ಮ ಮಕ್ಕಳಿಗೆ ಮತ್ತಷ್ಟು ಉತ್ತೇಜನ ನೀಡಿ ಈ ಮಕ್ಕಳು ಮುಖ್ಯವಾಹಿನಿ ಬರುವಂತೆ ಮಾಡಬೇಕು. ಸರ್ಕಾರದ ವ್ಯವಸ್ಥೆ ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಹಯೋಗದಿಂದ ಸಲಕರಣೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಮೂಡುಬಿದಿರೆ: ಮಕ್ಕಳಲ್ಲಿ ಸೇವಾ ಮನೋಭಾವ ಬೆಳೆಸಲು ರೋವರ್ಸ್ ಮತ್ತು ರೇಂಜರ್ಸ್ ಸಹಕಾರಿ’ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೂಡುಬಿದಿರೆ ಘಟಕದ ಖಜಾಂಚಿ, ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಚಂದ್ರ ಅಂಬೂರಿ ಹೇಳಿದರು.ಅವರು ಆಳ್ವಾಸ್ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ೨೦೨೩-೨೪ನೇ ಸಾಲಿನ ಚಟುವಟಿಕೆಗಳನ್ನು ಕಾಲೇಜಿನ ಶಿವರಾಮ ಕಾರಂತ ಸಭಾಂಗಣದಲ್ಲಿ ಉದ್ಘಾಟಿಸಿ ಮಾತನಾಡಿದರು. ಮಕ್ಕಳಿಗೆ ಮೌಲ್ಯಯುತ ಶಿಕ್ಷಣ
ಮೂಡುಬಿದಿರೆ : “ಅಂತಾರಾಷ್ಟ್ರೀಯ ಎಜುಕೇಶನ್ ಎಂಡ್ ಮ್ಯಾನೇಜ್ಮೆಂಟ್ ಸಂಸ್ಥೆ”ಕೊಡಮಾಡುವ ಪ್ರತಿಷ್ಠಿತ “ಗ್ಲೋಬಲ್ ಎಂಬಾಸಿಡೆರ್ ಆಫ್ ಎಜುಕೇಶನ್ ಎಕ್ಸಲೆನ್ಸ್ ಪ್ರಶಸ್ತಿ ಯನ್ನು ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ ಜೈನ್ ಇವರಿಗೆ ನೀಡಿ ಗೌರವಿಸಿತು. ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿ ಕಳೆದ ಮೂರು ದಶಕಗಳಿಂದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಮೂಲಕ ಗುರುಕುಲ ಮಾದರಿಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ನೀಡುತ್ತಾ
ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಸ್ವರಾಜ್ಯ ಮೈದಾನದಲ್ಲಿ ನಡೆಯಿತು. ಮಾಜಿ ಕ್ರೀಡಾ ಸಚಿವ ಕೆ. ಅಭಯಚಂದ್ರ ಜೈನ್ ಕ್ರೀಡಾಕೂಟವನ್ನು ಉದ್ಘಾಟಿಸಿ, ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಸ್ಪೂರ್ತಿಯಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು. ಮೂಡುಬಿದಿರೆಯಲ್ಲಿರುವ ಸಿಂಥೆಟಿಕ್ ಟ್ರ್ಯಾಕ್ ನ ಪ್ರಯೋಜನವನ್ನು ಪಡೆದುಕೊಂಡು ರಾಷ್ಟ್ರ- ಅಂತರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸುವಂತಹ ಕ್ರೀಡಾಪಟುಗಳಾಗಬೇಕೆಂದು ಶುಭ ಹಾರೈಸಿದರು. ತಾಲೂಕು ತಹಶೀಲ್ದಾರ್ ಪ್ರದೀಪ್
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ವಶಕ್ಕೆ ಪಡೆದುಕೊಂಡಿದೆ. ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್( 22 ವ), ಫರ್ಹಾನ್ ಖಾನ್ (18ವ) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತರು. ಇವರು ಮೂವರು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದು ಖಚಿತ
ಮೂಡುಬಿದಿರೆ : 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾಮ ಪಂಚಾಯತ್ ಮೊದಲ ಬಾರಿ ಆಯ್ಕೆಯಾಗಿದೆ. ತಾಲೂಕಿನ ಎರಡನೇ ಅತೀ ದೊಡ್ಡ ಗ್ರಾಮವಾಗಿರುವ ಪುತ್ತಿಗೆ ಗ್ರಾಮ ಪಂಚಾಯತ್ ಜನರ ಗುಣಮಟ್ಟವನ್ನು ಹೆಚ್ಚಿಸಲು ಕೈಗೊಂಡ ಕಾರ್ಯಕ್ರಮಗಳು, ಹಣಕಾಸಿನ ವಿಷಯದಲ್ಲಿ ಶಿಸ್ತುಬದ್ಧ ಕ್ರಮಗಳು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ, ಉತ್ತಮ ಆಡಳಿತ, ಗ್ರಾ.ಪಂಚಾಯತ್ ಸೇವೆಗಳನ್ನು ಕ್ಲಪ್ತ ಸಮಯದಲ್ಲಿ ಗ್ರಾಮದ ನಾಗರಿಕರಿಗೆ




























