Home ಕರಾವಳಿ Archive by category ಮೂಡಬಿದರೆ (Page 33)

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹ ವಾಪಾಸ್

ಮೂಡುಬಿದಿರೆ: ಭೂಮಿ ಹಕ್ಕಿಗೆ ಒತ್ತಾಯಿಸಿ ಭೂಮಿ ಹೋರಾಟ ಸಮಿತಿಯು ಆಡಳಿತ ಸೌಧದ ಮುಂಭಾಗ ಸೋಮವಾರ ಕೈಗೊಂಡಿದ್ದ ಅಹೋರಾತ್ರಿ ಧರಣಿಯು ಮೂಡುಬಿದಿರೆ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಅವರ ಮನವೊಲಿಕೆಯಿಂದಾಗಿ ವಾಪಾಸ್ ಪಡೆದುಕೊಂಡಿದೆ. ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಯಾದವ ಶೆಟ್ಟಿ ಅವರು ಧರಣಿ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿ, ಮೂಡುಬಿದಿರೆ

ಕಲ್ಲಬೆಟ್ಟು ಗಣೇಶೋತ್ಸವದಲ್ಲಿ ಧನಸಂಗ್ರಹ ಮಾಡಿ ಅನಾರೋಗ್ಯ ಪೀಡಿತೆಗೆ ನೆರವು ನೀಡಿದ ವಿದ್ಯಾರ್ಥಿನಿಯರು

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿ ನಡೆದ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಲ್ವರು ವಿದ್ಯಾರ್ಥಿನಿಯರು ಸೇರಿ ಆನಾರೋಗ್ಯ ಪೀಡಿತೆಯೋರ್ವರ ಚಿಕಿತ್ಸೆಗಾಗಿ ಧನ ಸಂಗ್ರಹ ಮಾಡಿ ಹಸ್ತಾಂತರ ಮಾಡಿ ಊರವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಾಲೂಕಿನ ಕಲ್ಲಬೆಟ್ಟು ಗ್ರಾಮದ ನಿವಾಸಿಗಳಾದ ಮಹಾವೀರ ಕಾಲೇಜಿನ ವಿದ್ಯಾರ್ಥಿನಿಯರಾದ ತುಷಾರ, ಅನೂಷಾ, ತುಷಿತಾ ಹಾಗೂ ಪ್ರತಿಕ್ಷಾ ಎಂಬ ವಿದ್ಯಾರ್ಥಿಯರು ಅನಾರೋಗ್ಯ ಪೀಡಿತೆಯ ಚಿಕಿತ್ಸೆಯ ನೆರವಿಗೆ ಸ್ಪಂದಿಸಿದವರು. ಕಲ್ಲಬೆಟ್ಟುವಿನಲ್ಲಿ

ಮೂಡುಬಿದಿರೆ: ಕಂಬಳ ಸಮಾಲೋಚನಾ ಸಭೆ, ಸಾಧಕರಿಗೆ ಸನ್ಮಾನ

ಮೂಡುಬಿದಿರೆ : ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮೂಡುಬಿದಿರೆಯ ಕಡಲಕೆರೆ ಬಳಿಯಿರುವ ಸೃಷ್ಠಿ ಗಾರ್ಡನ್‍ನಲ್ಲಿ ಕಂಬಳದ ಈ ಋತುವಿನ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಂಬಳ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೋಣದ ಯಜಮಾನರುಗಳಿಗೆ, ವ್ಯವಸ್ಥಾಪಕರಿಗೆ ಹಾಗೂ ತೀರ್ಪುಗಾರರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ನಂತರ ಮಾತನಾಡಿದ ಡಾ.ದೇವಿಪ್ರಸಾದ್ ಶೆಟ್ಟಿ

ಮೂಡುಬಿದಿರೆ: ನೀರುಡೆ ನಿವಾಸಿ ಓಲ್ವಿನ್ ಪಿಂಟೋ ನಾಪತ್ತೆ

ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾ. ಪಂ ವ್ಯಾಪ್ತಿಯ ನೀರುಡೆ ನಿವಾಸಿ ಓಲ್ವಿನ್ ಪಿಂಟೋ(59) ಅವರು ಸೆ.8ರಿಂದ ನಾಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 3 ವರ್ಷಗಳ ಹಿಂದೆ ಮಂಗಳೂರು ತಲಪಾಡಿಯಲ್ಲಿ ಹಾಸ್ಟೇಲ್ ಒಂದರಲ್ಲಿ ಕೆಲಸ ಮಾಡುಕೊಂಡಿದ್ದವರು, ಇತ್ತೀಜೆಗೆ ಮನೆಗೆ ಬಂದು ಕೃಷಿ ಕೆಲಸ ಮಾಡುತ್ತಿದ್ದರು. ಸೆ.8 ರಂದು ಸಂಜೆ 4.30 ಕ್ಕೆ ಮನೆಯಲ್ಲಿ ತನ್ನ ಮೊಬೈಲ್ ಬಿಟ್ಟು ಮನೆಯಿಂದ ಹೊರಗೆ ಹೋದವರು ಮತ್ತೆ ಮರಳಿ ಮನೆಗೆ ಬಾರದೇ

ಮೂಡುಬಿದಿರೆ: ಖಾಸಗಿ ಬಸ್ಸಿನಿಂದ ಬಿದ್ದು ಮಹಿಳೆ ಸಾವು

ಮೂಡುಬಿದಿರೆ: ಖಾಸಗಿ ಬಸ್‍ನಿಂದ ಮಧ್ಯ ವಯಸ್ಸಿನ ಮಹಿಳೆಯೊಬ್ಬರು ಬಿದ್ದು ತೀವೃ ತರಹದ ಗಾಯದಿಂದಾಗಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟ ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರೂರಿನಲ್ಲಿ ನಡೆದಿದೆ. ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66ವ ) ದುರ್ಘಟನೆಯಲ್ಲಿ ಸಾವನ್ನಪ್ಪಿದವರು. ನೀಲಮ್ಮ ಅವರು ಬಿಪಿ, ಶುಗರ್ ತಪಾಸಣೆ ಮಾಡಲೆಂದು ತನ್ನ ಮೊಮ್ಮಗನ ಜತೆ ಮೂಡುಬಿದಿರೆ ಆಸ್ಪತ್ರೆಗೆಂದು ಸಾಯಿ ಟ್ರಾವೆಲ್ಸ್ ಎಂಬ ಹೆಸರಿನ ಖಾಸಗಿ ಬಸ್ಸಿಗೆ

ದ.ಕ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ

ಮೂಡುಬಿದಿರೆ: ಅವಿಭಜಿತ ದ.ಕ ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಡಾ.ಬೆಳಪು ದೇವಿಪ್ರಸಾದ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಗುಣಪಾಲ ಕಡಂಬ, ಪ್ರಧಾನ ಕಾರ್ಯದರ್ಶಿಯಾಗಿ ಮುಚ್ಚೂರು ಕಲ್ಕುಡ ಲೋಕೇಶ್ ಶೆಟ್ಟಿಯವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಒಂಟಿಕಟ್ಟೆಯ ಸೃಷ್ಠಿ ಗಾರ್ಡನ್‍ನ ಸಭಾಭವನದಲ್ಲಿ ನಿರ್ಗಮಿತ ಅಧ್ಯಕ್ಷ ಏರ್ಮಾಳ್ ರೋಹಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಿತಿಯ

ಮೂಡುಬಿದಿರೆ: ಮೊಸರು ಕುಡಿಕೆ ಉತ್ಸವದಲ್ಲಿ ಗುಣಪಾಲ ಕಡಂಬರಿಗೆ “ಶ್ರೀ ಕೃಷ್ಣ ಪ್ರಶಸ್ತಿ” ಪ್ರದಾನ

ಮೂಡುಬಿದಿರೆ: ಮೂಡುಬಿದಿರೆಯಲ್ಲಿ ಕರ್ಮ ಜೀವನ ಆರಂಭಿಸಿ 50 ವರ್ಷ ತುಂಬಿರುವ ಈ ಸುಸಂದರ್ಭದಲ್ಲಿ ತನ್ನ ಅಧ್ಯಾಪನ, ಆಡಳಿತ, ಕಂಬಳ, ಕೃಷಿ, ಧಾರ್ಮಿಕ ಸೇವಾನುಭವವನ್ನು ಗುರುತಿಸಿ ನೀಡಿರುವ ಗೌರವವನ್ನು ಸಂತೃಪ್ತಿ, ಸಂತೋಷದಿಂದ ಸ್ವೀಕರಿಸಿದ್ದೇನೆ, ಎಲ್ಲ ರಂಗಗಳಲ್ಲೂ ಪ್ರಾಮಾಣಿಕ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟವರೆಲ್ಲರನ್ನೂ ಕೃತಜ್ಞತಪೂರ್ವಕ ನೆನೆಯುತ್ತೇನೆ ಎಂದು ಜೈನ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ, ಕಂಬಳ ವಿದ್ವಾಂಸ ಕೆ. ಗುಣಪಾಲ ಕಡಂಬ ಹೇಳಿದರು.

ಸೆ.2-6 ಆಳ್ವಾಸ್ ನಲ್ಲಿ ನಾಯಿಮರಿ ನಾಟಕ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸೆ.02 ರಿಂದ ಸೆ.06 ರ ವರೆಗೆ ವಿದ್ಯಾಗಿರಿಯ ಕೃಷಿ ಸಿರಿ ವೇದಿಕೆಯಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿಗಳು ಅಭಿನಯಿಸುವ, ಡಾ| ಜೀವನ್ ರಾಂ ಸುಳ್ಯ ನಿರ್ದೇಶನದ ನಾಯಿಮರಿ ನಾಟಕದ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಶ್ರೀಮತಿ ವೈದೇಹಿ ರಚಿಸಿರುವ ಈ ನಾಟಕವು ಈಗಾಗಲೇ ರಾಜ್ಯದ ಅನೇಕ ಕಡೆಗಳಲ್ಲಿ ಯಶಸ್ವೀ ಪ್ರದರ್ಶನಗೊಂಡ ಅತ್ಯುತ್ತಮ ಮಕ್ಕಳ ನಾಟಕವೆಂಬ ಹೆಗ್ಗಳಿಕೆಗೆ

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ

ಮೂಡುಬಿದಿರೆ: ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ

ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿದಂತ್ತಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಅವರು ರಾಜ್ಯ ದೈಹಿಕ ಶಿಕ್ಷಣ