Home ಕರಾವಳಿ Archive by category ಮೂಡಬಿದರೆ (Page 36)

ಮೂಡುಬಿದರೆ : 60ನೇ ಶ್ರೀ ಸಾರ್ವಜನಿಕ ಗಣೇಶೋತ್ಸವ : ಡಾ.ಎಂ. ಮೋಹನ್ ಅಳ್ವಾರಿಂದ ಲೋಗೋ ಅನಾವರಣ

ಮೂಡುಬಿದಿರೆ: 1964ರಲ್ಲಿ ಆರಂಭಗೊಂಡಿರುವ ಇಲ್ಲಿನ ಶ್ರೀ ಸಾರ್ವಜನಿಕ ಗಣೇಶೋತ್ಸವವು 60ನೇ ವರ್ಷದ ಸಂಭ್ರಮದಲ್ಲಿದ್ದು ಅದಕ್ಕಾಗಿ ಈ ವರ್ಷ ಹಬ್ಬವನ್ನು ವಿಶೇಷವಾಗಿ ಆಚರಿಸುವ ಉದ್ದೇಶವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಶನಿವಾರ ಲೋಗೋವನ್ನು ಅನಾವರಣಗೊಳಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಲೋಗೋ ಅನಾವರಣಗೊಳಿಸಿ ಮಾತನಾಡಿ

ಮಣಿಪುರದಲ್ಲಿ ಹಿಂಸಾಚಾರ ಪ್ರಾಯೋಜಿತ ಕಾರ್ಯಕ್ರಮ : ಶಾಸಕ ಉಮಾನಾಥ್ ಕೋಟ್ಯಾನ್

ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ

ದಕ್ಷಿಣ ಕೊರಿಯಾದಲ್ಲಿ 25ನೇ ಅಂತರರಾಷ್ಟ್ರೀಯ ಜಾಂಬೂರಿ: ಆಳ್ವಾಸ್ ನ 8 ವಿದ್ಯಾರ್ಥಿಗಳು ಆಯ್ಕೆ

ಮೂಡುಬಿದಿರೆ : ದಕ್ಷಿಣ ಕೊರಿಯಾದ ಜಿಯೋಲ್ಲಾದಲ್ಲಿ ಆಗಸ್ಟ್ 2 ರಿಂದ 12ರ ವರೆಗೆ ನಢೆಯುವ 25ನೇ ಅಂತರರಾಷ್ಟ್ರೀಯ ಸ್ಕೌಟ್ಸ್ ಮತ್ತು ಗೈಡ್ಸ್ ಜಾಂಬೂರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 8 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.ಆಳ್ವಾಸ್‌ನ 8 ಸ್ಕೌಟ್ಸ್ ಮತ್ತು ಗೈಡ್ಸ್ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 48 ಸ್ಕೌಟ್ಸ್ ಮತ್ತು ಗೈಡ್ಸ್ ಗಳು ಭಾಗವಹಿಸಲಿದ್ದಾರೆ. ಆಳ್ವಾಸ್ ಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ, ಹತ್ತನೇಯ ತರಗತಿ

ಮಣಿಪುರ ಹಿಂಸಾಚಾರ ಖಂಡಿಸಿ ಆಲಂಗಾರಿನಲ್ಲಿ ಪ್ರತಿಭಟನೆ 

ಮೂಡುಬಿದಿರೆ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಅಲಂಗಾರು ಚಚ್ ೯ ಬಳಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಅಲಂಗಾರು ಚರ್ಚಿನ ಧರ್ಮಗುರು ರೇ.ಫಾ. ವಾಲ್ಟಾರ್ ಡಿಸೋಜಾ , ಸರ್ವ ಅಯೋಗದ ಸಂಚಾಲಕ ರಾಜೇಶ್ ಕಡಲಕೆರೆ , ಉಪಾಧ್ಯಕ್ಷ ಎಡ್ವಾರ್ಡ್ ಸೆರವೋ , ಕಾರ್ಯದರ್ಶಿ ಲಾರೆನ್ಸ್ , ಕಥೋಲಿಕ್ ಸಭಾ ಮುಖಂಡ ಅಲ್ವಿನ್ ಡಿಸೋಜಾ , ಜೇಸಿಂತ ಅರನ್ಹ , ಮೇಬಲ್ , ಅನಿಶ್ , ರಾಜ ಡಿಸೋಜಾ , ವಲೇರಿಯನ್ ಸಿಕ್ವೆರಾ , ಐವನ್ […]

ಯಕ್ಷಸಂಭ್ರಮ: ರೆಂಜಾಳ ರಾಮಕೃಷ್ಣ ರಾವ್, ಪೆರುವಾಯಿ ನಾರಾಯಣ ಶೆಟ್ಟಿಗೆ ‘ಯಕ್ಷದೇವ’ ಪ್ರಶಸ್ತಿ  

ಮೂಡುಬಿದಿರೆ: ಬೆಳುವಾಯಿ ಶ್ರೀ ಯಕ್ಷದೇವ ಮಿತ್ರಕಲಾ ಮಂಡಳಿ ವತಿಯಿಂದ 26ನೇ ವರ್ಷದ ಯಕ್ಷಸಂಭ್ರಮ-2023ರ ಕಾಯಕ್ರಮ ಜುಲೈ 30 ರಂದು ಕನ್ನಡ ಭವನದಲ್ಲಿ ದಿನಪೂರ್ತಿ ನಡೆಯಲಿದೆ ಎಂದು ಯಕ್ಷದೇವ ಮಿತ್ರಕಲಾ ಮಂಡಳಿಯ ಸ್ಥಾಪಕ ಅಧ್ಯಕ್ಷ ಎಂ.ದೇವಾನಂದ ಭಟ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ವೇಷಧಾರಿಗಳಾದ ರೆಂಜಾಳ ರಾಮಕೃಷ್ಣ ರಾವ್ ಮತ್ತು ಪೆರುವಾಯಿ ನಾರಾಯಣ ಶೆಟ್ಟಿ ಅವರಿಗೆ ತಲಾ 10 ಸಾವಿರ ರೂ.ನಗದಿನೊಂದಿಗೆ ‘ಯಕ್ಷದೇವ’ ಪ್ರಶಸ್ತಿ

ಮುಂಡ್ಕೂರು : ಹಡಿಲು ಬಿದ್ದ ಭೂಮಿಯಲ್ಲಿ ಭತ್ತದ ಕೃಷಿ

ಮುಂಡ್ಕೂರು ಸಮೃದ್ಧಿ ಸಂಜೀವಿನಿ ಒಕ್ಕೂಟದ ವತಿಯಿಂದ ಮುಂಡ್ಕೂರು ಜೈನಪೇಟೆಯ ಬಳಿ ಗದ್ದೆಯಲ್ಲಿ ಒಕ್ಕೂಟದ ಮಹಿಳೆಯರು ಗದ್ದೆ ನಾಟಿ ಮಾಡಿದರು. ಸುಮಾರು ಒಂದು ಎಕರೆ ಹಡಿಲು ಭೂಮಿಯನ್ನು ಸಮತಟ್ಟು ಮಾಡಿ ಟ್ಯಾಕ್ಟರ್ ಮೂಲಕ ಉಳುಮೆ ಮಾಡಿ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಸಮೃದ್ಧಿ ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ವನಿತಾ ಶೆಟ್ಟಿ ಎಲ್ ಸಿ ಆರ್ ಪಿ ಶಶಿಕಲಾ, ಸುಮನ ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ ಒಕ್ಕೂಟದ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು.

ಮೂಡುಬಿದರೆ : ಪ್ಲಾಸ್ಟಿಕ್ ಮುಕ್ತ ಪರಿಸರ ರಕ್ಷಣಾ ಅಭಿಯಾನ

ಮೂಡುಬಿದಿರೆ: ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಗೈಡ್ಸ್ ಘಟಕ, ಇಂಟರಾಕ್ಟ್ ಕ್ಲಬ್, ಶಾಲಾ ಸಂಸತ್ತು ಹಾಗೂ ಮೂಡುಬಿದಿರೆ ಪುರಸಭೆಯ ಸಂಯುಕ್ತ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣಾ ಅಭಿಯಾನ ಮೂಡುಬಿದಿರೆ ಮಾರುಕಟ್ಟೆ ಸಮೀಪ ನಡೆಯಿತು. ಪುರಸಭಾ ಮುಖ್ಯಾಧಿಕಾರಿ ಶಿವ ನಾಯಕ್ ಅಭಿಯಾನಕ್ಕೆ ಚಾಲನೆ ನೀಡಿ ಪ್ಲಾಸ್ಟಿಕ್ ನ ದುಷ್ಪರಿಣಾಮಗಳ ಬಗ್ಗೆ ಮಾತನಾಡಿದರು. ಈ ಜನ ಜಾಗೃತಿ ಕಾರ್ಯಕ್ರಮದಲ್ಲಿ ರೋಟರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ನಾರಾಯಣ ಪಿ ಎಂ

ಪಿಂಗಾರ ಕಲಾವಿದೆರ್ ಬೆದ್ರ- ನೂತನ ನಾಟಕದ ಶೀರ್ಷಿಕೆ ಬಿಡುಗಡೆ

ಪಿಂಗಾರ ಕಲಾವಿದೆರ್ ಬೆದ್ರ ತಂಡದ ನೂತನ ನಾಟಕ `ಕದಂಬ’ ಇದರ ಶೀರ್ಷಿಕೆಯನ್ನು ಭಾನುವಾರ ಕೋಟೆ ಬಾಗಿಲು ಮಹಾಮ್ಮಾಯಿ ದೇವಸ್ಥಾನದ ಆವರಣದಲ್ಲಿ ಲೋಕಾರ್ಪಣೆಗೊಳಿಸಲಾಯಿತು. ದೇವಳದ ಆಡಳಿತ ಮೋಕ್ತೇಸರ ನಾರಂಪ್ಪಾಡಿಗುತ್ತು ಸೇಸಪ್ಪ ಹೆಗ್ಡೆ ಶೀರ್ಷಿಕೆಯನ್ನು ಬಿಡುಗಡೆಗೊಳಿಸಿದರು.ತಂಡದ ಮುಖ್ಯಸ್ಥ ಮಣಿಕೋಟೆಬಾಗಿಲು ಪ್ರಾಸ್ತಾವಿಕವಾಗಿ ಮಾತನಾಡಿ, ಕದಂಬ ನಾಟಕವು ತುಳು ರಂಗಭೂಮಿಯಲ್ಲಿ ವಿಭಿನ್ನ ಪ್ರಯತ್ನವಾಗಿದ್ದು, ವಿನೂತನ ಶೈಲಿಯ ರಂಗ ವಿನ್ಯಾಸವನ್ನು ಹೊಂದಿದೆ. ಈ

ವಿದ್ಯಾಗಿರಿಯಲ್ಲಿ ವೈವಿಧ್ಯಮಯ ಹಣ್ಣುಗಳ ಮೇಳ ಸಮಾಪನ

ಮೂಡುಬಿದಿರೆ: ಹಲಸು- ವೈವಿಧ್ಯಮಯ ಹಣ್ಣುಗಳ ಮಹಾಮೇಳ ಸಮಿತಿ ನೇತೃತ್ವದಲ್ಲಿ ಕೃಷಿಋಷಿ ಡಾ.ಎಲ್.ಸಿ. ಸೋನ್ಸ್ ಸ್ಮರಣಾರ್ಥ ವಿದ್ಯಾಗಿರಿಯಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಭವನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡ ಹಲಸು ಮತ್ತು ವೈವಿಧ್ಯಮಯ ಹಣ್ಣುಗಳು, ಆಹಾರೋತ್ಸವ ಮತ್ತು ಕೃಷಿ ಪ್ರದರ್ಶನಗಳ ಪರಿಕರಗಳ ಪ್ರದರ್ಶನ ಮತ್ತು ಮಾರಾಟ `ಸಮೃದ್ಧಿ’ಯು ಸಮಾಪನಗೊಂಡಿತ್ತು. ಶ್ರೀಮತಿ ಮೋಹಿನಿ ಅಪ್ಪಾಜಿ ನಾಯಕ್ ವೇದಿಕೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ

ಶಿರ್ತಾಡಿ : ಸಂಜೀವಿನಿ ಕಟ್ಟಡಕ್ಕೆ ಶಿಲಾನ್ಯಾಸ

ಮೂಡುಬಿದಿರೆ: ಶಿರ್ತಾಡಿ ಗ್ರಾಮ ಪಂಚಾಯತ್ ನ ನೇತೃತ್ವದಲ್ಲಿ ಶಿರ್ತಾಡಿಯ ಪೇಟೆ ಬಳಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಸಂಜೀವಿನಿ ಕಟ್ಟಡಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿತು. ಪಂಚಾಯತ್ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅವರು ಶಿಲಾನ್ಯಾಸಗೈದು ಮಾತನಾಡಿ ಸಂಜೀವಿನಿ ಸ್ವಸಹಾಯ ಗುಂಪುಗಳಿಗೆ ಸುಮಾರು ರೂ. 26ಲಕ್ಷ ಅನುದಾನವನ್ನು ಉದ್ಯೋಗ, ಸ್ವ ಉದ್ಯೋಗಕ್ಕಾಗಿ ನೀಡಲಾಗಿದೆ. ಮಹಿಳೆಯರು ಸ್ವಾವಲಂಬಿಯಾಗಿ ಬದುಕನ್ನು ಕಟ್ಟಿಕೊಳ್ಳಲು ಸಂಜೀವಿನಿಯ ಕಾರ್ಯಕ್ರಮಗಳು