ಮೂಡುಬಿದಿರೆ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್ ಕ್ಲಬ್ ಮೂಡುಬಿದಿರೆ ಇದರ ನೂತನ ಅಧ್ಯಕ್ಷರಾಗಿ ವಿಜಯವಾಣಿ ಪತ್ರಿಕೆಯ ಪ್ರತಿನಿಧಿ ಯಶೋಧರ ವಿ. ಬಂಗೇರ, ಕಾರ್ಯದರ್ಶಿಯಾಗಿ ವಿ4 ನ್ಯೂಸ್ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ್ತಿ ಪ್ರೇಮಶ್ರೀ ಕಲ್ಲಬೆಟ್ಟು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರ ಪ್ರೆಸ್ ಕ್ಲಬ್ ನಲ್ಲಿ ನಡೆದ ಸಂಘದ ವಾರ್ಷಿಕ
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನಡೆದ ಅಂತರ ಕಾಲೇಜು ಹಗ್ಗ ಜಗ್ಗಾಟದ ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಚಾಂಪಿಯನ್ ಹಾಗೂ ಪುರುಷರ ತಂಡವು ರನ್ನರ್ ಅಪ್ ಸ್ಥಾನ ಪಡೆದುಕೊಂಡಿದೆ.ಮಹಿಳೆಯರ ಫೈನಲ್‌ನಲ್ಲಿ ಆಳ್ವಾಸ್ ಕಾಲೇಜು ತಂಡವು ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ನಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ವಿರುದ್ಧ ಜಯ
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿಯಮವನ್ನು ಉಲ್ಲಂಘಿಸಿರುವ, ಹೆಲ್ಮೆಟ್ ಧರಿಸದ, ಚಾಲನ ಅನುಜ್ಞಾ ಪತ್ರವಿಲ್ಲದೆ ಚಾಲನೆಯನ್ನು ಮಾಡುತ್ತಿರುವವರ ವಿರುದ್ಧ ಮೂಡುಬಿದಿರೆ ಪೊಲೀಸರು ಕ್ರಮಕೈಗೊಂಡರು.
ಮೂಡುಬಿದಿರೆ: ಜಿಲ್ಲಾ ಪಂಚಾಯತ್ ದ.ಕ.ಜಿಲ್ಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಶ್ರಿತ ರೋಗವಾಹಕ ನಿಯಂತ್ರಣಾಧಿಕಾರಿಗಳ ಕಛೇರಿ ಮಂಗಳೂರು, ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಪುರಸಭೆ, ನೇತಾಜಿ ಬ್ರಿಗೇಡ್ ಹಾಗೂ ಜವನೆರ್ ಬೆದ್ರ ಇವುಗಳ ಸಹಯೋಗದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನವನ್ನು ಸಮಾಜ ಮಂದಿರದಲ್ಲಿ ಆಚರಿಸಲಾಯಿತು. ಉದ್ಯಮಿ ಸತ್ಯಪ್ರಕಾಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಜಿಲ್ಲಾ ಆಶಿತಾ ರೋಗವಾಹಕ
ಮೂಡುಬಿದಿರೆ: ಕರಾವಳಿಯ ಜಾನಪದ ಕ್ರೀಡೆ ಕಂಬಳ. ರಾಜ್ಯದಲ್ಲಿ ಪ್ರಾಣಿ ಹಿಂಸಾ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕರಾವಳಿ ಕರ್ನಾಟಕದಲ್ಲಿ ನಡೆಯುವ ಕಂಬಳಕ್ಕೆ ಮಾನ್ಯತೆ ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ದಯಾ ಸಂಘಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಕಂಬಳ ಸಮಿತಿ ಸಂತಸ ವ್ಯಕ್ತಪಡಿಸಿದ್ದು, ಈ ದಿನ ಕಂಬಳ ಕ್ಷೇತ್ರದಲ್ಲಿ ಐತಿಹಾಸಿಕ ದಿನ ಎಂದು ಕಂಬಳ ಸಮಿತಿ ಬಣ್ಣಿಸಿದೆ. ಈ ಬಗ್ಗೆ ಜಿಲ್ಲಾ ಕಂಬಳ ಸಮಿತಿಯ
ಮೂಡುಬಿದಿರೆ: ಸಿಬಿಎಸ್‍ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),
ಮೂಡುಬಿದಿರೆ- 22468 ಮತಗಳ ಅಂತರದಿಂದ ಕಾಂಗ್ರೆಸ್ ನ ಅಭ್ಯರ್ಥಿ ಮಿಥುನ್ ರೈ ಅವರನ್ನು ಪರಾಭವಗೊಳಿಸಿರುವ ಬಿಜೆಪಿಯ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಬಿಜೆಪಿ ಏರ್ಪಡಿಸಿದ ವಿಜಯೋತ್ಸವದಲ್ಲಿ ಭಾಗವಹಿಸಿದರು.ಮೂಡುಬಿದಿರೆಗೆ ಆಗಮಿಸಿ ಮೊದಲಿಗೆ ವಿದ್ಯಾಗಿರಿಯಲ್ಲಿರುವ ಬಿಜೆಪಿ ಕಛೇರಿಗೆ ಆಗಮಿಸಿ ಅಲ್ಲಿ ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಕೃತಜ್ಞತೆಯನ್ನು ಸಲ್ಲಿಸಿದರು. ನಂತರ ಮೂಡುಬಿದಿರೆ ವರೆಗೆ ನಡೆದ ರ್‍ಯಾಲಿಯಲ್ಲಿ ತೆರೆದ
ಮಂಗಳೂರು: ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ನಿನ್ನೆ (ಬುಧವಾರ) ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು. ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ನಿನ್ನ ನಡೆದ ಘಟನೆಗಳ ಕುರಿತು ವಾಸ್ತವ ಸಂಗತಿಗಳನ್ನು ವಿವರಿಸಿದರು. ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮತದಾನ ಮುಗಿದು ಅಧಿಕಾರಿಗಳು
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿಜಯನಾಥ ವಿಠಲ ಶೆಟ್ಟಿ ಮಿಜಾರು ಬಂಗಬೆಟ್ಟು ಪಬ್ಲಿಕ್ ಶಾಲೆಯಲ್ಲಿ ಮತದಾನ ಮಾಡಿದರು.
ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೈಂಟ್ ಮೇರಿಸ್ ಸ್ಕೂಲ್ ನಲ್ಲಿ ಪತ್ನಿಯ ಜೊತೆ ಮತದಾನ ಮಾಡಿದರು.




























