ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಗಾಂಧಿನಗರದ ಕಡ್ದಬೆಟ್ಟು ವಾಡ್ 9ನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಕಾರ್ಯಕರ್ತರ ಜತೆ ಮಾತುಕತೆ ನಡೆಸಿ ಮತದಾನ ಮಾಡುವಂತೆ ವಿನಂತಿಸಿದರು. ನಂತರ ಕಾರ್ಯಕರ್ತರು ಕಡ್ದಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಪರವಾಗಿ ಮತಯಾಚಿಸಿದರು.ವಾಡ್ 9 ಸದಸ್ಯೆ ದಿವ್ಯಾ ಜಗದೀಶ್,
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ವಾಲ್ಪಾಡಿ ಗ್ರಾ.ಪಂಚಾಯತ್ ವ್ಯಾಪ್ತಿಯಲ್ಲಿರುವ ಗೇರು ಬೀಜ ಫ್ಯಾಕ್ಟ್ರಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಪುರಸಭಾ ವ್ಯಾಪ್ತಿಯ ಒಂಟಿಕಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪರವಾಗಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಟಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಜಯಕುಮಾರ್, ಎಪಿಎಂಸಿಯ ಮಾಜಿ ಅಧ್ಯಕ್ಷ ಪ್ರವೀಣ್ ಜೈನ್, ವಾಲ್ಪಾಡಿ ಗ್ರಾ.ಪಂ.
ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.
ಮೂಲ್ಕಿ: “ಕಳೆದ 5 ವರ್ಷಗಳ ಹಿಂದೆ ನಾನು ಮೊದಲ ಬಾರಿಗೆ ಮೂಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದೆ. ಇದಕ್ಕೆ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಶ್ರಮವೇ ಕಾರಣ. ವಿವಿಧ ಇಲಾಖೆಗಳಿಂದ ಅನುದಾನ ತಂದು ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಶ್ರಮಿಸಿದ್ದೇನೆ. ಹೀಗಾಗಿ ಮತ ಯಾಚನೆಗೆ ಮನೆ ಮನೆಗೆ ಹೋದಾಗ ಬಹಳ ಒಳ್ಳೆಯ ಸ್ಪಂದನೆ ಜನರಿಂದ ಸಿಗುತ್ತಿದೆ. ಮೇ 3ರಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಮೂಲ್ಕಿಗೆ ಬರಲಿದ್ದಾರೆ. ಇಲ್ಲಿಯವರೆಗೆ
ಬಿಸಿಲಿನ ಬೇಗೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ನೀರಿನ ಒರತೆಯ ಕೊರತೆ ಹೆಚ್ಚುತ್ತಿದೆ. ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಜೀವಜಲವಾಗಿರುವ ಪುಚ್ಚಮೊಗರು ಪಲ್ಗುಣಿ ಅಣೆಕಟ್ಟಿನಲ್ಲಿ ಜಲಧಾರೆಯು ದಿನದಿಂದ ದಿನಕ್ಕೆ ಬರಿದಾಗುತ್ತಿದ್ದು ಜನರು ನೀರಿಗಾಗಿ ಹಾಹಾಕಾರ ಎದುರಿಸುತಿದ್ದಾರೆ. ಕಳೆದ ವರ್ಷ ಮಾರ್ಚ್ ತಿಂಗಳಿನಲ್ಲಿಯೇ ವರುಣ ದೇವ ಕರುಣೆ ತೋರಿದ್ದರಿಂದ ನೀರಿನ ಸಮಸ್ಯೆ ಕಂಡು ಬಂದಿರಲಿಲ್ಲ. ಆದರೆ ಈ ಬಾರಿ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದರಿಂದ
ಮೂಡುಬಿದಿರೆ: ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿಯನ್ನು ಆಚರಿಸಲಾಯಿತು.ತಾಲೂಕು ಉಪತಹಾಶಿಲ್ದಾರ್ ಬಾಲಚಂದ್ರ, ಮೂಡಾ ಎಂಜಿನಿಯರ್ ಪ್ರವೀಣ್, ಸುವಿದಾ ನೋಡೆಲ್ ಗಳಾದ ಶಿವಾನಂದ ಕಾಯ್ಕಿಣಿ ಮತ್ತು ಡಾ.ಪ್ರತಿಮಾ ಹಾಗೂ ವಿವಿಧ ಇಲಾಖೆಯ ಸಿಬಂಧಿಗಳು ಈ ಸಂದರ್ಭದಲ್ಲಿದ್ದರು.
ಮೂಡುಬಿದಿರೆ: ಹದಿನೆಂಟು ಕೆರೆ, ಬಸದಿ,ದೇವಸ್ಥಾನಗಳು, ಕೇರಿಗಳು ಹೀಗೆ ಐತಿಹಾಸಿಕ ಮಹತ್ವವಿರುವ ಜೈನಕಾಶಿ, ಜ್ಞಾನಕಾಶಿ ಮೂಡುಬಿದಿರೆಯಲ್ಲಿ ಪ್ರಾಚೀನ ಕೆರೆಗಳದ್ದೇ ವಿಶೇಷತೆ. ಇದೀಗ ಬಹುಕಾಲದ ಕಾಯುವಿಕೆಯ ಬಳಿಕ ಶತಮಾನಗಳಿಂದ ಗಿಡಗಂಟಿಪೆÇದೆಗಳಲ್ಲಿ ಮರೆಯಾಗಿ ಹೂಳು ತುಂಬಿಕೊಂಡಿದ್ದ ದೊಡ್ಮನೆ ಶ್ರೀ ಚಂದ್ರಶೇಖರ ದೇವಸ್ಥಾನದ ಸುಂದರ ಕೆರೆ ಜೀಣೋದ್ಧಾರಕ್ಕೆ ತೆರೆದುಕೊಂಡಿದೆ. ಇಲ್ಲಿನ ಪ್ರಾಂತ್ಯ ಗ್ರಾಮದ ದೊಡ್ಮನೆ ರಸ್ತೆ ಕೊನೆಯಲ್ಲಿರುವ ಶ್ರೀ ಚಂದ್ರಶೇಖರ
ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ
ಮೂಡುಬಿದಿರೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಅನನ್ಯಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದರು. ಅನನ್ಯಳಿಗೆ ರೂ.3 ಲಕ್ಷ ನಗದು ಪುರಸ್ಕಾರವನ್ನು ಘೋಷಿಸಿದ ಅವರು, ಆಕೆ ಮುಂದಿನ ಸಿಎಸ್ ವ್ಯಾಸಂಗಕ್ಕೆ ಉಚಿತ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.
ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ಓರ್ವ ವಿದ್ಯಾರ್ಥಿನಿ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ ತೃತೀಯ