Home ಕರಾವಳಿ Archive by category ಮೂಡಬಿದರೆ (Page 45)

ಹಿರಿಯ ದೈವ ಪಾತ್ರಿ ಲಾಡಿ ಅಣ್ಣು ಶೆಟ್ಟಿ ನಿಧನ

ಮೂಡುಬಿದಿರೆ: ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ (78ವ)ಅಲ್ಪಕಾಲದ ಅಸೌಖ್ಯದಿಂದ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ಜಿಲ್ಲೆಯ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಮತ್ತು

ಮೂಡುಬಿದಿರೆಯ ಕೃಷಿ ತಜ್ಞ ಡಾ.ಎಲ್.ಸಿ ಸೋನ್ಸ್ ಅಸ್ತಂಗತ

ಮೂಡುಬಿದಿರೆ: ಕೃಷಿ ತಜ್ಞ, ಮೂಡುಬಿದಿರೆ ಬನ್ನಡ್ಕದ ಸೋನ್ಸ್ ಫಾರ್ಮ್‍ನ ಪ್ರಗತಿಪರ ಕೃಷಿಕ ಡಾ.ಎಲ್.ಸಿ ಸೋನ್ಸ್ ಅವರು ಇಂದು (ಬುಧವಾರ) ಬೆಳಿಗ್ಗೆ ಅಸ್ತಂಗತರಾದರು.ಕೃಷಿ ಋಷಿ: 1934 ಏಪ್ರಿಲ್ 4ರಂದು ಜನಿಸಿರುವ ಡಾ.ಎಲ್.ಸಿ ಸೋನ್ಸ್ ತನ್ನ ಜೀವನವನ್ನು ಕೃಷಿಗಾಗಿ ಮುಡಿಪಾಗಿಟ್ಟವರು. ಕೃಷಿ ಕ್ಷೇತ್ರದಲ್ಲಿ ಅಸಾಮಾನ್ಯ ಸಾಧನೆ ಮಾಡಿರುವ ಸೋನ್ಸ್ ಅನಾನಸು ಕೃಷಿ, ಬಿದಿರಿನ ವಿವಿಧ ಪ್ರಬೇಧ, ದೇಶ-ವಿದೇಶಗಳ ಹಣ್ಣು-ತರಕಾರಿ ಪ್ರಬೇಧಗಳನ್ನು ಮೂಡುಬಿದಿರೆ ಬನ್ನಡ್ಕದ

ಚುನಾವಣಾ ಅಕ್ರಮ ತಡೆಗೆ ಕ್ರಮ : ಮೂಡುಬಿದರೆ ಚುನಾವಣಾಧಿಕಾರಿ ಕೆ.ಮಹೇಶ್ಚಂದ್ರ ಹೇಳಿಕೆ

ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಲ್ಲಿ ಅಳವಡಿಸಲಾಗಿರುವ ಬಂಟಿಂಗ್ಸ್ ಬ್ಯಾನರ್ ಗಳನ್ನು ತೆಗೆಸುವ ಕ್ರಮ ಕೈಗೊಳ್ಳಲಾಗಿದೆ, ಯಾವುದೇ ಕಾರ್ಯಕ್ರಮ ನಡೆಸುವಲ್ಲಿ ಅನುಮತಿ ಪಡೆದುಕೊಂಡೇ ನಡೆಸಬೇಕು, ರಾಜಕಾರಣಿಗಳು, ಚುನಾಯಿತ ಸದಸ್ಯರು ವೇದಿಕೆಯೇರಿ ಭಾಷಣ ಮಾಡುವಂತಿಲ್ಲ. ಯಾವುದೇ ಭರವಸೆ ನೀಡುವುದಾಗಲೀ, ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮತಯಾಚನೆ ಮಾಡುವು ದಾಗಲೀ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳ ಲಾಗುವುದೆಂದು ಚುನಾವಣಾ ಅಧಿಕಾರಿಯಾಗಿರುವ ಕೆ.ಮಹೇಶಚಂದ್ರ

ಎಸ್ ಕೆಡಿಆರ್ ಡಿಪಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಮೂಡುಬಿದಿರೆ: ನಿರ್ಗತಿಕರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ತಾಲೂಕಿನ ವಾಲ್ಪಾಡಿ, ಇರುವೈಲು ಮತ್ತು ಕಲ್ಲಬೆಟ್ಟುವಿನಲ್ಲಿ ಒಟ್ಟು 7 ಜನರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು.ದಕ್ಷಿಣ ಕನ್ನಡ 1ಜಿಲ್ಲೆಯ ನಿರ್ದೇಶಕರಾದ ಸತೀಶ್ ಶೆಟ್ಟಿ ಮೂಡುಬಿದಿರೆ ವಲಯದ ಜನ ಜಾಗ್ರತಿ ಅಧ್ಯಕ್ಷ, ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್, ಕಲ್ಲಬೆಟ್ಟುವಿನ ಶಶಿಕಿರಣ್, ಒಕ್ಕೂಟದ ಪದಾಧಿಕಾರಿ ದೀಪ , ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ, ವಲಯದ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ನೇಣಿಗೆ ಶರಣು

ಮೂಡುಬಿದಿರೆ: ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ಬುಧವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ ನಿವಾಸಿ ಚಂದ್ರಶೇಖರ ಭಟ್ ಎಂಬವರ ಪತ್ನಿ ಕುಸುಮಾ( 49 ವ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಮನೆಯಲ್ಲಿ ಮಹಿಳೆಯ ಗರ್ಭಿಣಿ ಮಗಳು ಇದ್ದು ಅವರು ಮಲಗಿದ್ದರು. ಬೆಳಿಗ್ಗೆ 8.30ರ ವೇಳೆಗೆ ಮಗಳು

ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕನಿಗೆ ಢಿಕ್ಕಿ, ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಸೋಮವಾರ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಹಿಮ್ಮುಖವಾಗಿ ಚಲಿಸುವಾಗ

ಮೂಡುಬಿದಿರೆ : ಕುಂಬಳದಾಳ್ ನೆರವಂಡ ತಂಗಮ್ಮ ನಿಧನ

ಮೂಡುಬಿದಿರೆ : ಮೂಲತ: ಕೊಡಗಿನ ಮೂರ್ನಾಡ್ ನಿವಾಸಿ ಕುಂಬಳದಾಳ್ ನೆರವಂಡ ತಂಗಮ್ಮ (88) ಶನಿವಾರ ರಾತ್ರಿ ಮೂಡುಬಿದ್ರಿ ಆಳ್ವಾಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಆಳ್ವಾಸ್ ಸಮೂಹ ಸಂಸ್ಥೆಯ ಉದ್ಯೋಗಿ ಮೋಹನ್ ಭೋಪಯ್ಯ ಸೇರಿದಂತೆ 3ಗಂಡು 1ಹೆಣ್ಣು ಮಗಳು ಸಹಿತ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮೂರ್ನಾಡಿನ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಇರಿಸಲಾಗಿದ್ದು ಮಧ್ಯಾಹ್ನ 2 ಗಂಟೆಗೆ ಕೊಡವ ಸಮಾಜ ಮಡಿಕೇರಿಯ ಸ್ಮಶಾನದಲ್ಲಿ

ಮೂಡುಬಿದಿರೆ: ಹೈಮಾಸ್ಟ್ ದೀಪ ಲೋಕಾರ್ಪಣೆ

ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ 12ನೇ ವಾರ್ಡಿನ ಹಳೆ ಪೊಲೀಸ್ ಠಾಣೆಯ ಬಳಿ ರೂ 9.50 ಲಕ್ಷ ಪುರಸಭಾ ನಿಧಿಯಿಂದ ಮಾಡಿರುವ ಅಭಿವೃದ್ಧಿ ಕಾಮಗಾರಿಗಳಾದ ರಸ್ತೆ ಅಗಲೀಕರಣ ಮತ್ತು ಇಂಟರ್ ಲಾಕ್ ಅಳವಡಿಕೆ, ಚರಂಡಿ ಹಾಗೂ ಹೈ ಮಾಸ್ಟ್ ದೀಪವನ್ನು ಶನಿವಾರ ಸಂಜೆ ಪುರಸಭಾಧ್ಯಕ್ಷ ಪ್ರಸಾದ್ ಕುಮಾರ್ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಪುರಸಭಾ ಉಪಾಧ್ಯಕ್ಷೆ ಸುಜಾತ ಶಶಿಕಿರಣ್, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಸದಸ್ಯರಾದ ಸ್ವಾತಿ

ವಿಕಲಚೇತನ ಫಲಾನುಭವಿಗಳಿಗೆ ಸಾಧನಾ ಸಲಕರಣೆ ವಿತರಣೆ

ಮೂಡುಬಿದಿರೆ: 2022-23 ನೇ ಸಾಲಿನ ತಾಲೂಕು ಪಂಚಾಯತ್ ಅನಿರ್ಬಂಧಿತ ಅನುದಾನದಡಿ 14,ಮಂದಿ ಫಲಾನುಭವಿಗಳಿಗೆ ದ್ವಿಚಕ್ರ ವಾಹನ, ವೀಲ್ ಚೆರ್ ಹಾಗೂ ಶ್ರವಣ ಸಾಧನಗಳನ್ನು ಮಾನ್ಯ ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಶನಿವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ವಿತರಿಸಿದರು.ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಈ ಸಂದರ್ಭದಲ್ಲಿದ್ದರು.

ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆ : ಆಳ್ವಾಸ್ ನ ಮನುಜ ನೇಹಿಗ ಪ್ರಥಮ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ನಡೆಸಿರುವ ಹಿಂದೂಸ್ತಾನೀ ತಬಲ ಜ್ಯೂನಿಯರ್ ಪರೀಕ್ಷೆಯಲ್ಲಿ ಆಳ್ವಾಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಮನುಜ ನೇಹಿಗ ಸುಳ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾನೆ. ಯಕ್ಷಗಾನ,ನಾಟಕ,ಜಾದೂ,ಹಾರ್ಮೋನಿಯಂ,ತಬಲ,ಮಣಿಪುರಿ ಸ್ಟಿಕ್ ಡ್ಯಾನ್ಸ್ ಇತ್ಯಾದಿಯಾಗಿ ಬಹುಮುಖ ಪ್ರತಿಭೆ ಹೊಂದಿರುವ ಈತ ಆರಂಭದಲ್ಲಿ ಆಳ್ವಾಸ್ ನಲ್ಲಿ ತಬಲ ಶಿಕ್ಷಕರಾಗಿದ್ದ ದಯಾನಂದ ಧಾರವಾಡ ಮತ್ತು ಪ್ರಸ್ತುತ ವಿದ್ವಾನ್ ವಿನೋದ್