ಮೂಡುಬಿದಿರೆ: ಕಂಬಳವು ಕರಾವಳಿ ಭಾಗದ ಜನರ ಜನಪದ ಕಲೆಯಾಗಿದೆ. ಈ ಭಾಗದ ಜನರು ಪ್ರಪಂಚದ ಯಾವ ಮೂಲೆಗೆ ಹೋದರೂ ಇಲ್ಲಿನ ಭಾಷೆ, ಆಚರಣೆ, ಸಾವಿರಾರು ವರ್ಷಗಳ ಪರಂಪರೆಗಳನ್ನು ತುಳುನಾಡಿನ ಜನತೆ ಮರೆತಿಲ್ಲ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್‌ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್‌ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಮಿಳುನಾಡು ಸರ್ಕಾರ
ಮೂಡುಬಿದಿರೆ: ಹಲವು ವಿಶೇಷಗಳಿಗೆ ಮುನ್ನುಡಿ ಬರೆಯಲಿರುವ, ಶೂನ್ಯತ್ಯಾಜ್ಯದತ್ತ ಗಮನವಿರಿಸಿಕೊಂಡು ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ 20ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ” ಕೋಟಿ-ಚೆನ್ನಯ” ಜೋಡುಕರೆ ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.ಚೌಟರ ಅರಮನೆಯ ಕುಲದೀಪ್ ಎಂ ಅವರು ಮುಹೂರ್ತವನ್ನು ನಡೆಸಿಕೊಟ್ಟು,
ಮೂಡುಬಿದಿರೆ : ದೈವಗಳಿಗೆ ಹಾಕಿದ ಹೂವಿನ ಹಾರಗಳನ್ನು ಸಂಗ್ರಹಿಸಿ ಇಡಲು ಅಪೂರ್ವ ಕೆತ್ತನೆಯ ” ಪುಷ್ಪ ದಂಡಿಗೆ ” ಯನ್ನು ತೋಡಾರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಮೂಡುಬಿದಿರೆ ಘಟಕದ ಸಂಚಾಲಕ ಕಾರಮೊಗರು ಗುತ್ತು ಪ್ರೇಮನಾಥ ಮಾರ್ಲರು ಶುಕ್ರವಾರ ಸೇವಾರೂಪವಾಗಿ ಸಮರ್ಪಿಸಿದರು. ಮೂಡುಬಿದಿರೆ ದೇವಕೀ ಲಕ್ಷ್ಮಿ ಮಿಲ್ ನ ಮಾಲಕರಾಗಿರುವ ಪ್ರೇಮನಾಥ ಮಾರ್ಲ ಅವರು ತಮ್ಮದೇ ಮಿಲ್ ನಲ್ಲಿ ನಿರ್ಮಿಸಿರುವ ಈ ಪುಷ್ಪ ದಂಡಿಗೆಯು
ಕರ್ನಾಟಕದ ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‍ನಲ್ಲಿ ನಡೆಯುತ್ತಿರುವ ಸ್ಕೌಟ್ ಮತ್ತು ಗೈಡ್ಸ್ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯನ್ನು ಸೌತ್ ಕೊರಿಯಾದಿಂದ ತಾಯಿ ಮಗ ಪ್ರತಿನಿಧಿಸಿದ್ದಾರೆ.ಒಟ್ಟು 7 ಜನ ಪ್ರತಿನಿಧಿಗಳು 2 ತಿಂಗಳ ಹಿಂದೆಯೇ ಕರ್ನಾಟಕಕ್ಕೆ ಬಂದಿರುವುದಾಗಿ ತಿಳಿಸಿದ ಚಾ ಸಾಂಗೋಕ್, ಇಲ್ಲಿ ನಡೆಯುತ್ತಿರುವ ಸ್ಕೌಟ್ಸ್ ಗೈಡ್ಸ್ ನ ಕಾರ್ಯಕ್ರಮ ಉತ್ತಮವಾಗಿ ನಡೆಯುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸಿಗೆ ಹಿತವನ್ನು ನೀಡಿದೆ. ಊಟೋಪಚಾರದ
ಜಾಂಬೂರಿಯ ಉತ್ಸವದ ಯಶೋಕಿರಣ ಸಂಕೀರ್ಣ ದಲ್ಲಿ ಟೀಂ ಮಂಗಳೂರು ವತಿಯಿಂದ ಖ್ಯಾತ ಕಲಾವಿದ ದಿನೇಶ್ ಹೊಳ್ಳ ಪರಿಕಲ್ಪನೆ ಯಲ್ಲಿ ನಡೆಯುತ್ತಿದೆ . ಆ ಗಾಳಿಪಟದಲ್ಲಿ ತುಳುನಾಡಿನ ಜನಪದಗಳಾದ ಬಡಗುತಿಟ್ಟು ತೆಂಕುತಿಟ್ಟು ಯಕ್ಷಗಾನ, ಭೂತರಾದನೆ , ಗುತ್ತಿನ ಮನೆ , ಪಿಲಿನಲಿಕೆ, ಸಿರಿತುಪ್ಪೆ, ಪಾರ್ದನ, ಕಂಬಳ, ಅಕ್ಕಿಮುಡಿ, ಆಟಿಕಳೆಂಜ, ಮುಟ್ಟಾಳೆ , ಚೆಂಡೆ ಮದ್ದಳೆ ,ಮೀನುಗಾರಿಕೆ, ಗಗ್ಗರದ ಅನಾವರಣ ವಾಗಿದೆ .ಒಟ್ಟು 1000 ವಿದ್ಯಾರ್ಥಿ ಗಳಿಗೆ ಗಾಳಿಪಟ ತಯಾರಿಕೆಯನ್ನು
ಅದೊಂದು ಕಮ್ಮಾರಿಕೆಯ ಸ್ಟಾಲ್. ಅದರೊಳಗಡೆ ಮಲಗಿಕೊಂಡಿರುವ ಎರಡು ನಾಯಿಗಳು, ಇನ್ನೊಂದು ಕಡೆಯಲ್ಲಿ ಹುಡುಗಿಯೊಬ್ಬಳು ಕತ್ತಿಗಾಗಿ ಮರದ ಕೈಯನ್ನು ತಯಾರಿಸುತ್ತಿರುವುದು, ಇನ್ನೊಂದು ಕಡೆಯಲ್ಲಿ ಮಹಿಳೆಯೊಬ್ಬರು ಕಮ್ಮಾರಿಕೆಗೆ ಬೇಕಾದ ವಸ್ತುಗಳ ತಯಾರಿಕೆಯಲ್ಲಿ ನಿರತರಾಗಿರುವುದು ಮತ್ತೊಂದು ಕಡೆಯಲ್ಲಿ ಗಂಡಸು ಮತ್ತು ಮಗ ಸೇರಿಕೊಂಡು ಕತ್ತಿಯನ್ನು ರೆಡಿ ಮಾಡುತ್ತಿರುವ ದೃಶ್ಯವೊಂದು ಎಲ್ಲರ ಗಮನ ಸೆಳೆಯುತ್ತಿರುವುದು ಜಾಂಬೂರಿಯಲ್ಲಿ. ಹೀಗೆ ಕಮ್ಮಾರಿಕೆಯಲ್ಲಿ
ಮೂಡುಬಿದಿರೆ: ಸಾಸಿವೆ, ಕೊತ್ತಂಬರಿ, ಹುರುಳಿ, ರಾಗಿ ಸೇರಿದಂತೆ ಹಸಿ ಮತ್ತು ಒಣ ಅಡಿಕೆಯಿಂದ ವಿಶಿಷ್ಟ ತಿರುಗುವ ಕ್ರಿಸ್ಮಸ್ ನಕ್ಷತ್ರವನ್ನು ಶಿರ್ತಾಡಿಯ ಲೈಫ್ ಸೇವಾ ಸಂಸ್ಥೆಯವರು ನಿರ್ಮಿಸಿದ್ದಾರೆ. ನಕ್ಷತ್ರವನ್ನು ಶಿರ್ತಾಡಿಯ ಮೌಂಟ್ ಕಾರ್ಮೆಲ್ ಚರ್ಚ್ ನ ಆವರಣದಲ್ಲಿ ಕ್ರಿಸ್ಮಸ್ ಪ್ರಯುಕ್ತ ಡಿ.23 ರಿಂದ ಜ.5 ರವರೆಗೆ ಪ್ರದರ್ಶನಕ್ಕೆ ಇರಿಸಲಾಗುತ್ತದೆ. ನಕ್ಷತ್ರವು 120 ಕೆಜಿ ತೂಕ, 12 ಅಡಿ ಎತ್ತರ, 11 ಅಡಿ ಅಗಲವಿದ್ದು, ನಕ್ಷತ್ರದ ಮಧ್ಯಭಾಗದಲ್ಲಿ
ಮೂಡುಬಿದಿರೆ: ಎಳ್ಳಮವಾಸ್ಯೆಯ ಪ್ರಯುಕ್ತ ಹನ್ನೆರಡು ಕವಲಿನಲ್ಲಿ ಸಾವಿರಾರು ಭಕ್ತರು ತೀರ್ಥಸ್ಥಾನ ಮಾಡಿದರು. ಮೂಡುಬಿದಿರೆಯಿಂದ ಸುಮಾರು 8 ಕಿ.ಮೀ ದೂರದಲ್ಲಿರುವ ತಾಕೊಡೆಯ ಬಳಿಯ ಹನ್ನೆರಡು ಕವಲಿನಲ್ಲಿ ಭಕ್ತರು ತೀರ್ಥಸ್ನಾನ ಮಾಡಿ ನಂತರ ಶ್ರೀ ಪಂಚಲಿಂಗೇಶ್ವರ ದೇವಾಲಯದಲ್ಲಿ ಹಣ್ಣುಕಾಯಿ ಮಾಡಿ, ಪೂಜೆ ಸಲ್ಲಿಸಿ ತದ ನಂತರ ನದಿಯ ನಡುವಿನಲ್ಲಿರುವ ಪಂಚ ಮಹಾಲಿಂಗೇಶ್ವರ ದೇವಾಲಯಕ್ಕೆ ಪೂಜೆಗೈದು ನದಿಯಲ್ಲಿ ದಾನ ಬಿಟ್ಟು ದೇವರ ಕೃಪೆಗೆ ಪಾತ್ರರಾಗುತ್ತಾರೆ. ಈ
ಮೂಡುಬಿದಿರೆ: ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಮಂಜೂರಾದ ರೂ.33.50 ಲಕ್ಷ ಅನುದಾನದಲ್ಲಿ ಮೂಡುಬಿದಿರೆಯ ಮುಖ್ಯ ರಸ್ತೆಯಲ್ಲಿ ಅಳವಡಿಸಲಾದ ದಾರಿದೀಪಗಳನ್ನು ಶಾಸಕ ಉಮಾನಾಥ ಎ.ಕೋಟ್ಯಾನ್ ಲೋಕಾರ್ಪಣೆಗೊಳಿಸಿದರು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್, ಉಪಾಧ್ಯಕ್ಷೆ ಸುಜಾತ, ಸ್ಥಾಯಿ ಸಮಿತಿ ಅಧ್ಯಕ್ಷ ನಾಗರಾಜ ಪೂಜಾರಿ,ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ದಿವ್ಯಾ ಜಗದೀಶ್, ಸ್ವಾತಿ ಪ್ರಭು, ಸೌಮ್ಯ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ