ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ ರಸ್ತೆ, ಆಳ್ವಾಸ್ ರಸ್ತೆ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಇಟ್ಟು ಹೋಗುವುದರಿಂದ ಇತರ ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಸಂಚಾರಕ್ಕೆ
ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಆಳ್ವಾಸ್ ಕಾಲೇಜು ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ವಿಷಯಾಧಾರಿತ ರಾಜ್ಯಮಟ್ಟದ ಅಂತರ್ ವಿವಿ ಕಿರು ನಾಟಕ ಸ್ಪರ್ಧೆಯಲ್ಲಿ ಮಂಗಳೂರು: ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ “ಅಮರಕ್ರಾಂತಿ ಹೋರಾಟ: 1837″ನಾಟಕ ಪ್ರಥಮ ಹಾಗೂ ಮೈಸೂರು ವಿ.ವಿಯನ್ನು ಪ್ರತಿನಿಧಿಸಿದ್ಧ
ಮೂಡುಬಿದಿರೆ: ಮಹಾವೀರ ಕಾಲೇಜು ಬಳಿಯ ಕೀರ್ತಿನಗರದ ನಿವಾಸಿ ಅಲ್ಫೋನ್ಸ್ ( 68) ಎಂಬವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಅಲ್ಫೋನ್ಸ್ ಅವರು ಕಳೆದ ಕೆಲವು ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರೆನ್ನಲಾಗಿದೆ. ಮನೆಯವರು ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಬಾವಿಗೆ ಹಾರಿದ್ದು ಬೆಳಿಗ್ಗೆ ಹುಡುಕಾಡಿದಾಗ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ
ಮೂಡುಬಿದಿರೆ : ಇತ್ತೀಚೆಗೆ ನಿಧನ ಹೊಂದಿರುವ ದಲಿತ ಚಳುವಳಿಯ ನೇತಾರ, ಸಮಾಜ ಪರಿವರ್ತನಾ ನಾಯಕ ವಿ.ಡೀಕಯ್ಯ ಅವರಿಗೆ ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ವತಿಯಿಂದ ಜು.31ರಂದು ಬೆಳಗ್ಗೆ ಸಮಾಜ ಮಂದಿರ ವಠಾರದ ಸ್ವರ್ಣ ಮಂದಿರದಲ್ಲಿ ನಡೆಯಲಿದೆ ಎಂದು ತುಲುನಾಡ್ ಮನ್ಸ ಸಮಾಜ ಸೇವಾ ಸಂಘ (ರಿ)ದ ಗೌರವ ಸಲಹೆಗಾರ ಅಚ್ಯುತ ಸಂಪಿಗೆ ತಿಳಿಸಿದ್ದಾರೆ. ಅವರು ಮೂಡುಬಿದಿರೆ ಪ್ರೆಸ್‍ಕ್ಲಬ್‍ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ತುಲುನಾಡ್
ಸಮೃದ್ಧಿ (ರಿ) ಮೂಡಬಿದ್ರಿ ಹಾಗೂ ಇನ್ನಿತರ ಸಂಘಟನೆಗಳ ಸಹಯೋಗದಲ್ಲಿ ಇಂದು ಮೂಡಬಿದ್ರಿಯಲ್ಲಿ ನಡೆದ ಅಡಿಕೆ ಬೆಳೆ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ಹೈನುಗಾರಿಕೆ ಸವಲತ್ತು ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷರು ಮಾಜಿ ಸಚಿವರಾದ ಶ್ರೀ ಅಭಯಚಂದ್ರ ಜೈನ್ ಭಾಗವಹಿಸಿ ಶುಭಹಾರೈಸಿದರು
ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಬೆದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸಭಾಭವನದಲ್ಲಿ ಆ.31ರಿಂದ ಆ.6ರವರೆಗೆ ಏಳು ದಿನಗಳ
ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಖಾಸಗಿ ಬಸ್‍ಗಳಲ್ಲಿ ಶೇ.50 ರಿಯಾಯಿತಿ, ನಿತ್ಯ ಪ್ರಯಾಣಿಕರಿಗೆ ಶೇ.20 ರಿಯಾಯಿತಿಯ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರದಿಂದ ಯಾವುದೇ ರೀತಿಯ ಅನುದಾನ ಪಡೆಯದೆ, ಲಾಭ-ನಷ್ಟಗಳನ್ನು ನೋಡದೆ ಈ ಸೌಲಭ್ಯವನ್ನು ಚಲೋ ಬಸ್ ಕಾರ್ಡ್‍ನ ಮುಖಾಂತರ ನೀಡುತ್ತಿದ್ದು, ಇದು ಸಂಪೂರ್ಣ ಡಿಜಿಟಲ್ ಪ್ರಕ್ರಿಯೆಯನ್ನು ಒಳಗೊಂಡಿರುತ್ತದೆ. ಈಗಾಗಲೇ 25,000 ಅಧಿಕ ಪ್ರಯಾಣಿಕರು ಇದರ ಪ್ರಯೋಜನ
ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.
ಮೂಡುಬಿದಿರೆ : ಇಟ್ಟಿಗೆ, ಮರಳು ಮತ್ತು ಸಿಮೆಂಟಿನಿಂದ ಪಕ್ಷವನ್ನು ಕಟ್ಟಲು ಸಾಧ್ಯವಿಲ್ಲ. ಉನ್ನತ ಮಟ್ಟದಲ್ಲಿ ಪಕ್ಷವನ್ನು ಕಟ್ಟಲು ಮತ್ತು ಮತ ಬ್ಯಾಂಕ್ ಪರಿವರ್ತನೆಯಾಗಬೇಕಾದರೆ ಜನ ಸ್ಪಂದನೆ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದರು. ಅವರು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾಜ ಮಂದಿರದಲ್ಲಿ ನಡೆದ ಪುತ್ತಿಗೆ ಜಿ.ಪಂ.ಕ್ಷೇತ್ರದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಸರಕಾರಗಳು ಗ್ರಾ.ಪಂಗಳ ಮೂಲಕ 42 ವಿವಿಧ