ಸುರತ್ಕಲ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ
ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಿತ್ರಾಪುರ
ಸುರತ್ಕಲ್: “ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ತ್ಯಾಜ್ಯ ರಾಶಿ ಬಿದ್ದು ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ನಾವು ನಾಗರಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ತಂದು 1,100,00 ರೂ. ಖರ್ಚು ಮಾಡಿ ಫ್ಲೈ ಓವರ್ ಕೆಳಗಡೆ ಸುಂದರಗೊಳಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಫೆಬ್ರವರಿ 9ರಂದು ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ ಎಂದುನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಹೇಳಿದರು.
ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”
ವಾದಿರಾಜ್ ಉಪ್ಪೂರ್ ನಿರ್ದೇಶನದ ಪೇಪರ್ ಸ್ಟೂಡೆಂಟ್ಸ್ ತುಳು ಚಿತ್ರ ಸುರತ್ಕಲ್ ಗ್ಯಾಲಕ್ಸಿ ಥೇಟರ್ ನಲ್ಲಿ ಕಳೆದ ಶುಕ್ರವಾರ ಬಿಡುಗಡೆ ಗೊಂಡಿತು. ಹಿರಿಯ ನಿರ್ದೇಶಕ ಕೃಷ್ಣಪ್ಪ ಉಪ್ಪೂರು , ಸಾಹಿತಿ ಯಶವಂತ್ ಬೋಳೂರು , ಯೋಗೀಶ್ ಕಾಂಚನ್ , ಚಿತ್ರದ ನಾಯಕ , ನಾಯಕಿ , ಮುಂತಾದವರು ಪಾಲ್ಗೊಂಡಿದ್ದರು.
ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ
ಸುರತ್ಕಲ್ ಅಕ್ರಮ ಟೋಲ್ ಸುಂಕ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ವಿಲೀನ ಆದ್ಯಾದೇಶ ಶಾಶ್ವತವಾಗಿ ಹಿಂಪಡೆಯಲು ಆಗ್ರಹಿಸಿ ಸುರತ್ಕಲ್ ನಂತೂರು ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯಾಗಿ ಘೋಷಿಸಲು ಒತ್ತಾಯಿಸಿ ಸಾಮೂಹಿಕ ಜನಾಗ್ರಹ ಧರಣಿ ಬನ್ನಂಜೆಯಲ್ಲಿ ನಡೆಯಿತು. ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ
ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.
ಕೃಷ್ಣಾಪುರದಲ್ಲಿ ನಡೆದ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಆಯುಕ್ತರು, ಬಂಧಿತರ ಪೈಕಿ ಇಬ್ಬರು ಕೃತ್ಯದಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳಾಗಿದ್ದರೆ, ಇನ್ನೋರ್ವ ಆರೋಪಿಗಳಿಗೆ ಬೈಕಿನಲ್ಲಿ ಪರಾರಿಯಾಗಲು ನೆರವಾದವನು ಎಂದು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ರವಿವಾರ ರಾತ್ರಿ
ಮೂಲ್ಕಿ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯಂಗಡಿ ಸಮೀಪದ ಪಾವಂಜೆ ಸೇತುವೆಯಲ್ಲಿ ಆಟೋ ಮತ್ತು ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಆಟೋದಲ್ಲಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದ, ಮಹಿಳೆಯನ್ನು ಸ್ಧಳೀಯ ಆಸ್ಪತ್ರಗೆ ದಾಖಲಿಸಿದ್ದಾರೆ. ಗಾಯಗೊಂಡ ಮಹಿಳೆಯನ್ನು ಮಂಗಳೂರು ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಆಟೋ ಮಂಗಳೂರಿನಿಂದ ಮೂಲ್ಕಿ ಕಡೆಗೆ ಹೋಗುತ್ತಿದ್ದು ಆಟೋಗೆ ಪಾವಂಜೆ ಸೇತುವೆ ಬಳಿ ಮುಂಬೈ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಈ




























