ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ.ಕ.
ಸುರತ್ಕಲ್ : ತೋಕೂರು ಗುತ್ತು ಮನೆತನದ ಹಿರಿಯ ಚೇತನ ವಾರಿಜಾಕ್ಷಿ ಶೆಟ್ಟಿ. (ದಿ. ಬಂಬ್ರಾಣ ಕೆಳಗಿನಬೈಲು ಶಂಕರ ಶೆಟ್ರ ಧರ್ಮಪತ್ನಿ ) ಯವರು ತಮ್ಮ 90 ನೇ ವಯಸ್ಸಿನಲ್ಲಿ ನವಂಬರ್ 20 ರಂದು ಮುಂಜಾನೆ ಸ್ವಗೃಹದಲ್ಲಿ ಇಹಲೋಕವನ್ನು ತ್ಯಜಿಸಿದ್ದಾರೆ. ಮೃತರು ಪುತ್ರರಾದ ಉದ್ಯಮಿ ತೋಕೂರುಗುತ್ತು ಶರತ್ಚಂದ್ರ ಶೆಟ್ಟಿ ಮತ್ತು ರತ್ನಶೇಖರ ಶೆಟ್ಟಿ ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಪಡುಬಿದ್ರಿ: ಸುರತ್ಕಲ್ ಟೋಲ್ ಪ್ಲಾಜಾದಲ್ಲಿ ಪಡೆಯುತ್ತಿದ್ದ ಟೋಲನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲಿನ ಗೊಳಿಸಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂಬುದಾಗಿ ಟೋಲ್ ಹೋರಾಟ ಸಮಿತಿಯ ಪ್ರಮುಖರೂ, ದಲಿತ ಮುಖಂಡರು ಆದ ಶೇಖರ್ ಹೆಜಮಾಡಿ ಎಚ್ಚರಿಸಿದ್ದಾರೆ. ಹೆಜಮಾಡಿ ಟೋಲ್ ಪ್ಲಾಜಾ ನಿರ್ಮಾಣದವರಗೆ ಮಾತ್ರ ಸುರತ್ಕಲ್ ಟೋಲ್ ಎಂಬುದಾಗಿ ತಾತ್ಕಾಲಿಕ ನೆಲೆಯಲ್ಲಿ ನಿರ್ಮಾಣಗೊಂಡಿದ್ದ ಸುರತ್ಕಲ್ ಟೋಲನ್ನು ಇದೀಗ ಸಂಸದರು ಸಹಿತ ಕೆಲ
ಸುರತ್ಕಲ್ ಟೋಲ್ ತೆರವಿಗೆ ಕೇಂದ್ರದಿಂದ ತಾಂತ್ರಿಕ ಅಂಶಗಳು ಪೂರ್ಣಗೊಂಡಿದ್ದು, 15 ದಿನದೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಅಧಿಕೃತ ನೋಟಿಫೀಕೇಶನ್ ಆಗಲಿದೆ. ಈ ಮೂಲಕ ಶೀಘ್ರದಲ್ಲೇ ಟೋಲ್ ಸಂಗ್ರಹ ಸ್ಥಗಿತಗೊಳ್ಳಲಿದೆ ಎಂದು ಶಾಸಕ ಡಾ| ವೈ.ಭರತ್ ಶೆಟ್ಟಿ ಹೇಳಿದ್ದಾರೆ.ವಾಓ01: ಮಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 60ಕಿ.ಮೀ ವ್ಯಾಪ್ತಿಯೊಳಗೆ ಎರಡು ಟೋಲ್‍ಗಳು ಅಳವಡಿಕೆಗೆ
ಸುರತ್ಕಲ್ ಟೋಲ್ ಗೇಟಲ್ಲಿ ವಾಹನ ಪಾಸ್ ಆಗದಿದ್ದರೂ, ಪಾಸ್ಟ್ ಟ್ಯಾಗ್ ಮೂಲಕ ಹಣ ವಸೂಲಿ ನಡೆದ ಬಗ್ಗೆ ಕಾರು ಮಾಲಿಕರು ಪೊಲೀಸ್ ದೂರು ನೀಡಿದ್ದಾರೆ. ಕಾಪು ತಾಲೂಕಿನ ಎಲ್ಲೂರು ನಿವಾಸಿ ಲಕ್ಷ್ಮಣ್ ಎಂಬವರೇ ಟೋಲ್ ಗೇಟ್ ನ ವಂಚನೆಗೆ ಒಳಗಾದವರು, ಇವರು ಎಲ್ಲೂರಿನ ಐಟಿಐ ಉದ್ಯೋಗಿ, ಸೋಮವಾರ ಉಚ್ಚಿಲ ಹೊರತು ಪಡಿಸಿ ಕಾರಿನಲ್ಲಿ ಎಲ್ಲೂ ಪ್ರಯಾಣಿಸಿಲ್ಲ, ಆದರೆ ರಾತ್ರಿ ಏಳರ ಸುಮಾರಿಗೆ ಮೊಬೈಲ್ ಗೆ ಮ್ಯಾಸೇಜ್ ವೊಂದು ಬಂದಿದ್ದು, ಸುರತ್ಕಲ್ ಟೋಲ್ ಗೇಟ್ ನಲ್ಲಿ ಪಾಸ್ಟ್ ಟ್ಯಾಗ್
ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು ನಂತೂರಿನಿಂದ ಸುರತ್ಕಲ್ ವರೆಗಿನ ರಸ್ತೆಯ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿಯಾಗಿ ಸಂಗ್ರಹಿಸಲು ಆದೇಶ ನೀಡಿದೆ. ತಲಪಾಡಿಯಿಂದ ಕುಂದಾಪುರದ ವರೆಗಿನ ರಸ್ತೆಯನ್ನು ನವಯುಗ
ಸುರತ್ಕಲ್, ನ.೮: ದೇಶದಲ್ಲಿ ೩೬ ಅಕ್ರಮ ಟೋಲ್‌ಗೇಟ್‌ಗಳಿರುವುದನ್ನು ಒಪ್ಪಿಕೊಂಡಿರುವ ಕೇಂದ್ರ ಹೆದ್ದಾರಿ ಸಚಿವ ಗಡ್ಕರಿಯವರೇ ತೆರವುಗೊಳಿಸಲಾಗುವುದು ಎಂದು ಲೋಕಸಭೆಯಲಿ ಹೇಳಿದ ಬಳಿಕವೂ ಸಂಸದರಾಗಿ ಸುರತ್ಕಲ್ ಅಕ್ರಮ ಟೋಲ್‌ಗೇಟ್ ತೆರವುಗೊಳಿಸಲು ಸಾಧ್ಯವಾಗದಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಜನಪ್ರತಿನಿಧಿಯಾಗಿರಲು ಅರ್ಹರಲ್ಲ ಎಂದು ಐವನ್ ಡಿಸೋಜಾ ಹೇಳಿದರು.ಸುರತ್ಕಲ್ ಟೋಲ್‌ಗೇಟ್ ತೆರವಿಗೆ ಆಗ್ರಹಿಸಿ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಮತ್ತು ಸಮಾನ ಮನಸ್ಕ
ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿರುದ್ಧ ಅನಿರ್ಧಿಷ್ಟಾವಧಿ ಧರಣಿಯ 5ನೇ ದಿನಕ್ಕೆ ಕಾಲಿಟ್ಟಿದ್ದು, ಟೋಲ್ ತೆರವು ಹೋರಾಟಕ್ಕೆ ದೊಡ್ಡ ಮಟ್ಟದ ಬೆಂಬಲ ವ್ಯಕ್ತವಾಗಿದೆ. ಎರಡು ಜಿಲ್ಲೆಯ ಹಲವು ತಾಲೂಕುಗಳ ವಿವಿಧ ಸಂಘಟನೆಗಳ ಪ್ರಮುಖರು ಇಂದಿನ ಧರಣಿಯಲ್ಲಿ ಬೆಳಗ್ಗಿನಿಂದ ಪಾಲ್ಗೊಂಡಿದ್ದಾರೆ. ಹೋರಾಟ ಸಮಿತಿಗೆ ಇದರಿಂದ ಮತ್ತಷ್ಟು ಹುಮ್ಮಸು ದೊರಕಿದೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಹೇಳಿದರು. ಮತ್ತೊಂದೆಡೆ ಒಂದು ವಾರದಿಂದ
ಸುರತ್ಕಲ್ ಅಕ್ರಮ ಟೋಲ್ ಗೇಟ್ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ಜನವಿರೋಧಿ ಆಡಳಿತದ ಸಂಕೇತವಾಗಿ ರಾರಾಜಿಸುತ್ತಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಒಕ್ಕೊರಲ ಆಗ್ರಹದ ಹೊರತಾಗಿಯೂ ಟೋಲ್ ಕೇಂದ್ರ ಮುಚ್ಚದಿರುವುದರ ಹಿಂದೆ ಭ್ರಷ್ಟಾಚಾರ, ಕಮೀಷನ್, ಖಾಸಗಿ ಕಂಪೆನಿಗಳ ಹಿತಾಸಕ್ತಿಗಳು ಕೆಲಸ ಮಾಡುತ್ತಿರುವುದು, ಬಿಜೆಪಿ ಸರಕಾರ ಅಂತಹ ನೀತಿಗಳ ಪರ ನಿರ್ಲಜ್ಜವಾಗಿ ನಿಂತಿರುವುದು ಇಂದು ಜನಸಾಮಾನ್ಯರಿಗೂ ಅರ್ಥವಾಗುತ್ತಿದೆ. ಜನಪರ ಕಾರ್ಯಗಳಿಗೆ ಬೆನ್ನು
ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡುವ ಬಗ್ಗೆ ಬಿಜೆಪಿ ಸದಸ್ಯರು ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ ಮಾಡಿದ್ದು ಇದರಿಂದಾಗಿ ಸಭೆಯಲ್ಲಿ ಗದ್ದಲ ಉಂಟಾಗಿ ಕೆಲ ಕಾಲ ಸಭೆ ಮುಂದೂಡಿಕೆಯಾದ ಘಟನೆ ನಡೆಯಿತು. ಪಾಲಿಕೆಯ ಸಭೆ ಸಾಮಾನ್ಯ ಸಭೆಯಲ್ಲಿ ಸುರತ್ಕಲ್ ಜಂಕ್ಷನ್‍ಗೆ ವೀರ ಸಾವರ್ಕರ್ ಹೆಸರು ಇಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆಗೆ ಇಳಿದಾಗ, ಬಿಜೆಪಿ ಸದಸ್ಯರು ವೀರ ಸಾವರ್ಕರ್ ಕೀ




























