ಸುರತ್ಕಲ್ ಟೋಲ್ ಗೇಟ್ ಹೋರಾಟಗಾರರ ಮನೆಗಳಿಗೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ಬಿ.ಕೆ. ಇಮ್ತಿಯಾಝ್, ಪ್ರತಿಭಾ ಕುಳಾಯಿ, ರಾಘವೇಂದ್ರ ರಾವ್ ಸೇರಿದಂತೆ ಹಲವು ಮುಖಂಡರಿಗೆ ಸುರತ್ಕಲ್ ಪೊಲೀಸರು ನೋಟಿಸ್ ನೀಡಿದ್ದಾರೆ. ನೋಟಿಸ್‌ನಲ್ಲಿ ಈಗಾಗಲೇ ಸಭೆ ನಡೆಸಿ ಹೋರಾಟ ಹಿಂಪಡೆಯುವಂತೆ
ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಬೆಂಬಲಿಸಲು ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರ ಉಪಸ್ಥಿತಿಯಲ್ಲಿ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.
ಪ್ರಸಿದ್ಧ ವೈದ್ಯ ಡಾ. ಸುರೇಶ್ ಸುರತ್ಕಲ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಜ್ಞ ವೈದ್ಯರಾಗಿ ಜಿಲ್ಲೆಯಲ್ಲಿಯೇ ಪ್ರಸಿದ್ಧ ರಾಗಿದ್ದರು. ಕೋವಿಡ್ ಸಂದರ್ಭದಲ್ಲಿಯೂ ಜೀವನದ ಹಂಗು ತೊರೆದು ಅನೇಕ ಮಂದಿಗೆ ಚಿಕಿತ್ಸೆ ನೀಡಿ ಮಾದರಿಯಾಗಿದ್ದರು. ಅವರು ಸುರತ್ಕಲ್‍ನಲ್ಲಿ ತನ್ನ ತಾಯಿಯ ಹೆಸರಿನಲ್ಲಿ ಆರಂಭಿಸಿದ್ದ ಸುಸಜ್ಜಿತ ಪುಷ್ಪಾ ಕ್ಲಿನಿಕ್ ಮತ್ತು ಡಯಾಗ್ನೋಸಿಸ್ ಸೆಂಟರ್ ಆರಂಭಿಸಿ ಸುಮಾರು 5 ದಶಕಗಳಿಂದ ಅದನ್ನು
ಯುಪಿಸಿಎಲ್ ಹೋರಾಟದ ಸಂದರ್ಭ ಕಾಮಗಾರಿ ಗುತ್ತಿಗೆಗಾಗಿ ಹೋರಾಟ ನಡೆಸಿದವರು ಬಹಳಷ್ಟು ಮಂದಿ, ಆ ರೀತಿಯ ಹೋರಾಟ ಸುರತ್ಕಲ್ ಟೋಲ್ ತೆರವು ಹೋರಾಟವಲ್ಲ, ಮುನಿರ್ ಕಾಟಿಪಲ್ಲ ನೇತೃತ್ವದಲ್ಲಿ ನಡೆದ ಈ ಹೋರಾಟ ಜಯದೊಂದಿಗೆ ಅಂತ್ಯ ಕಾಣುವುದರಲ್ಲಿ ಸಂಶಯವಿಲ್ಲ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಪಡುಬಿದ್ರಿಯ ಖಾಸಗಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಸೊರಕೆ ಮಾತಿಗೆ ಧ್ವನಿ ಸೇರಿಸಿದ ಸೇರಿದ ಸಭೆ, ಅಂಥಹ ಸ್ವಾರ್ಥಿಗಳ ನೇತೃತ್ವ ಈ ಹೋರಾಟವಾಗಿದ್ದರೆ
ಮಂಗಳೂರು: ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಹಲವು ವರ್ಷಗಳಿಂದ ಪ್ರತಿಭಟನೆ, ಹೋರಾಟ ನಡೆಯುತ್ತಿದ್ದು, ನೂರಾರು ಸಮಾನಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಸ್ಥಾಪಿಸಿರುವ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ನಲ್ಲಿರುವ ಅನಧಿಕೃತ ಟೋಲ್ ಗೇಟ್ ತೆರವುಗೊಳಿಸಲು ಆಗ್ರಹಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದು, ಟೋಲ್ ಗೇಟ್ ತೆರವಿಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳ ಬೇಕು’ ಎಂದು ವಿಧಾನ ಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ ಯು.ಟಿ ಖಾದರ್, ‘ಕಾನೂನು ಪ್ರಕಾರ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದು ಟೋಲ್ ಗೇಟ್ ಇರಬೇಕು, ಆದರೆ,
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ರು. ಇದೇ ವೇಳೆ ಪ್ರತಿಭಟನಾ ನಿರತರು ಟೋಲ್ ಗೇಟ್ ತೆರವು ದಿನಾಂಕ ಘೋಷಣೆ ಮಾಡುವಂತೆ ಅವರನ್ನು ಆಗ್ರಹಿಸಿದರು. ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ, ಟೋಲ್ ಗೇಟ್ ನಿಂದ ಶಾಸಕರಾದ ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶೇ.40 ಕಮಿಷನ್ ಪಡೆಯುತ್ತಿದ್ದಾರೆ ಎಂದು ನೇರ ಆರೋಪ ಮಾಡಿದರು.
ಟೋಲ್ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಸುರತ್ಕಲ್ ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ಸೆ.13ರಂದು ಎನ್‍ಐಟಿಕೆ ಸಮೀಪ ಇರುವ ಸುರತ್ಕಲ್ ಟೋಲ್ ಗೇಟ್ ಮುಂಭಾಗದಲ್ಲಿ ಹಮ್ಮಿಕೊಂಡಿರುವ ಒಂದು ದಿನದ ಸಾಮೂಹಿಕ ಧರಣಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದು ಟೋಲ್‍ಗೇಟ್ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಹೇಳಿದರು.ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಶನ್
ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಿಸಲು ಆಗ್ರಹಿಸಿ ಸೆಪ್ಟಂಬರ್ 13 ರಂದು ನಡೆಯಲಿರುವ ಸಾಮೂಹಿಕ ಧರಣಿಯ ಯಶಸ್ಸಿಗೆ ಬಜ್ಪೆ ಹೋಬಳಿ ಮಟ್ಟದ ಸಭೆ ಬಜ್ಪೆ ಕರಾವಳಿ ಸಭಾಂಗಣದಲ್ಲಿ ಹಿರಿಯ ದಲಿತ ಮುಖಂಡ ಎಂ ದೇವದಾಸ್ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಡಿವೈಎಫ್ಐ ಮುಖಂಡ ಶ್ರೀನಾಥ್ ಕುಲಾಲ್, ಸಾಮಾಜಿಕ ಕಾರ್ಯಕರ್ತ ನಿಸಾರ್ ಕರಾವಳಿ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ರಘು ಎಕ್ಕಾರು,




























