Home ಕರಾವಳಿ Archive by category ಸುರತ್ಕಲ್ (Page 15)

ಸುರತ್ಕಲ್ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ” ಸಭೆ

ಸುರತ್ಕಲ್ “ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ” ಸಭೆ : “ಒಂದು ತಿಂಗಳಲ್ಲಿ ಟೋಲ್ ಗೇಟ್ ತೆರವುಗೊಳ್ಳುತ್ತದೆ” ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಹೇಳಿಕೆ ಹಾಗೂ ಒಂದು ವರ್ಷ ಅವಧಿಗೆ ಟೋಲ್ ಸಂಗ್ರಹ ಗುತ್ತಿಗೆ ನವೀಕರಣ ಗೊಂಡಿರುವ ವಿಚಾರಗಳ ಕುರಿತು ವಿಷದವಾಗಿ ಚರ್ಚಿಸಲಾಯಿತು. ಟೋಲ್ ತೆರವಿಗೆ ಅಧಿಕೃತ ದಿನಾಂಕ ಘೋಷಿಸದೆ ಕೇವಲ

ಒಂದು ತಿಂಗಳೊಳಗೆ ಸುರತ್ಕಲ್ ಟೋಲ್ ವಿಲೀನಕ್ಕೆ ನಿರ್ಧಾರ

ಸುರತ್ಕಲ್ ಟೋಲ್‍ನ್ನು ಹೆಜಮಾಡಿ ಹಾಗೂ ತಲಪಾಡಿ ಜತೆ ಒಂದು ತಿಂಗಳೊಳಗೆ ವಿಲೀನಕ್ಕೆ ನಿರ್ಧರಿಸಲಾಗಿದೆ.ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು. ಎನ್‍ಎಚ್‍ಐ ಅಧಿಕಾರಿ ಲಿಂಗೇಗೌಡ ಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ

ಸ್ವಾತಂತ್ರ್ಯ ದಿನಾಚರಣೆಯ ಮುನ್ನ ಸುರತ್ಕಲ್ ಅಕ್ರಮ ಟೋಲ್ ನಿಂದ ಬಿಡುಗಡೆ ಕೊಡಿಸಿ : ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22 ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್ ಟೋಲ್ ತೆರವು ಸಹಿತ ಜನ ಸಾಮಾನ್ಯರ ಜ್ವಲಂತ ಸಮಸ್ಯೆಗಳನ್ನು ಮರೆಮಾಚುವ ಯತ್ನ ನಡೆಯುತ್ತಿದೆ‌. ಜನಪ್ರತಿನಿಧಿಗಳ ಇಂತಹ ರಾಜಕಾರಣವನ್ನು ಒಪ್ಪಲು ಸಾಧ್ಯವಿಲ್ಲ. ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಸುರತ್ಕಲ್ ಅಕ್ರಮ ಟೋಲ್ ತೆರವುಗೊಳಿಸಿ

ಫಾಜಿಲ್ ಹತ್ಯೆ ಪ್ರಕರಣ ಆರು ಮಂದಿ ಆರೋಪಿಗಳ ಬಂಧನ

ಸುರತ್ಕಲ್‍ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಪ್ರಕರಣದ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಮಾಹಿತಿ ನಿಡಿದರು. ಘಟನೆಗೆ ಸಂಬಂಧಿಸಿದಂತೆ

ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಭೇಟಿ

ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ಕುಟುಂಬದ ಜೊತೆ ನಿಲ್ಲಲಿದೆ ಎಂದರು. ಸಾಂತ್ವಾನ ಹೇಳುವುದರಲ್ಲಿಯೂ ಸರ್ಕಾರ ಅನುಸರಿಸಿದ ತಾರತಮ್ಯ

ಅಹಿತಕರ ಘಟನೆಯಿಂದ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಇಂದು ಸಹಜ ಸ್ಥಿತಿಗೆ

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್‍ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ, ಕೆಎಸ್‍ಆರ್‍ಪಿ ತುಕಡಿಗಳು ಪಥಸಂಚಲನ ನಡೆಸಿ ಜನರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದ್ದರು.

ಸುರತ್ಕಲ್ ರಸ್ತೆ ಅಪಘಾತ, ಕಟಪಾಡಿ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮಟ್ಟು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಮೃತರು ತಾಯಿಯನ್ನು ಅಗಲಿದ್ದಾರೆ

ಮೃತ್ಯುಕೂಪದಂತಿರುವ ರಾಷ್ಟ್ರೀಯ ಹೆದ್ದಾರಿ, ಪ್ರತಿನಿತ್ಯ ಹೆದ್ದಾರಿಗಳಲ್ಲಿ ಅಪಘಾತಗಳ ಸರಮಾಲೆ

ಜಿಲ್ಲೆಯ ಸಾವಿರಾರು ಪ್ರಯಾಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದಲಾಗುತ್ತಿದೆ. ಹೆದ್ದಾರಿಯ ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿಕೊಂಡಿದ್ದು, ಸಂಚಾರ ಕಷ್ಟಕರವಾಗಿದೆ.ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸುವಂತಿದೆ.ಸ್ವಲ್ಪ ಎಚ್ಚರ ತಪ್ಪಿದ್ರೆ ಸಾಕು ವಾಹನ ಹೊಂಡಕ್ಕೆ ಬೀಳುವುದು ಖಚಿತ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೃಹತ್ತಾಕಾರದ ಹೊಂಡಗುಂಡಿಗಳಿಂದ ವಾಹನ ಸವಾರ ನರಕಯಾತನೆ ಅನುಭವಿಸುವಂತಾಗಿದೆ.

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.