ಸುರತ್ಕಲ್: ಭಾರೀ ಪ್ರತಿಭಟನೆ, ಹೋರಾಟ ನಡೆದು ಕೊನೆಗೆ ಇಲ್ಲಿನ ಎನ್‍ಐಟಿಕೆ ಬಳಿಯ ಟೋಲ್ ಗೇಟ್ ಅನ್ನು ಮುಚ್ಚಲಾಯ್ತು. ಸುಂಕ ಕೊಡೋ ಕಷ್ಟ ತಪ್ಪಿತು ಎಂದು ವಾಹನ ಸವಾರರು ಖುಷಿ ಏನೋ ಪಟ್ಟರು, ಆದರೆ ಈಗ ಟೋಲ್ ಗೇಟ್ ಪರಿಸರದಲ್ಲಿ ಎದ್ದಿರುವ ಗುಂಡಿಗಳಿಂದಾಗಿ ಹೈರಾಣಾಗಿದ್ದಾರೆ. ಟೋಲ್ ಗೇಟ್ ಎರಡೂ ಕಡೆಗಳಲ್ಲಿ ಹತ್ತಾರು ಗುಂಡಿಗಳು ನಿರ್ಮಾಣಗೊಂಡಿದ್ದು ಅದರಲ್ಲಿ
ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್
ಸುರತ್ಕಲ್ :ಬಂಟರ ಸಂಘ ಸುರತ್ಕಲ್ ಮಹಿಳಾ ವೇದಿಕೆಯ ಅಧ್ಯೆಕ್ಷೆಯಾಗಿ ಭವ್ಯಾ ಎ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಬಂಟರ ಭವನದಲ್ಲಿ ನಡೆದ ಮಹಿಳಾ ವೇದಿಕೆಯ ಸಭೆಯಲ್ಲಿ ನೂತನ ಪದಾಧಿಕಾರಿಗಳ ನೇಮಕ ನಡೆಯಿತು. ಅಧ್ಯಕ್ಷರಾಗಿ ಭವ್ಯಾ ಎ ಶೆಟ್ಟಿ, ಉಪಾಧ್ಯಕ್ಷರಾಗಿ ಸರೋಜ ಟಿ ಶೆಟ್ಟಿ, ಕಾರ್ಯದರ್ಶಿಯಾಗಿ ಸುಜಾತ ಶೆಟ್ಟಿ ಕೃಷ್ಣಾಪುರ, ಜೊತೆ ಕಾರ್ಯದರ್ಶಿಯಾಗಿ ವಜ್ರಾಕ್ಷಿ ಶೆಟ್ಟಿ, ಕೋಶಾಧಿಕಾರಿಯಾಗಿ ಜ್ಯೋತಿ ಪಿ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ನಾಗಲತಾ
ಸುರತ್ಕಲ್‍ನ ಜನತಾ ಕಾಲನಿಯಲ್ಲಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದ್ದು, ಇಂದು ಬೆಳಕಿಗೆ ಬಂದಿದೆ. ಇಲ್ಲಿನ ಕಾನ ಕಾಲನಿ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದ ಆರೋಪಿ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ ಕಾನಕಾಲನಿ ಮಸೀದಿಯ ಬಳಿ ಇಬ್ಬರ ನಡುವೆ ಜಗಳವಾಗಿದ್ದು, ತಾಹಿರ್ ಚೂರಿಯಲ್ಲಿ ಇರಿದು ಪರಾರಿಯಾಗಿದ್ದಾನೆ. ಮಸೀದಿಯಲ್ಲಿನ
ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ,
ಬಂಟರ ಸಂಘ ( ರಿ) ಸುರತ್ಕಲ್ 2023-25 ರ ಸಾಲಿನ ಅಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಮುಂಚೂರು ಲೋಕಯ್ಯ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡರು.ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ ಶೆಟ್ಟಿ ಕಟ್ಲ, ಕೋಶಾಧಿಕಾರಿಯಾಗಿ ಅವಿನಾಶ್ ಶೆಟ್ಟಿ, ಜೊತೆ ಕಾರ್ಯದಶಿಯಾಗಿ
ಮುತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳವೂರು ಶಕ್ತಿ ಕೇಂದ್ರ ಸಭೆ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರ ನೇತೃತ್ವದಲ್ಲಿ ಕುಪ್ಪೆಪದವಿನಲ್ಲಿ ಮತಪ್ರಚಾರ ನಡೆಸಿದರು ನಡೆಯಿತು. ಮತದಾನ ಪೂರ್ವದ ಮತದಾರರನ್ನು ಸಂಪರ್ಕಿಸುವ ಮಹಾ ಅಭಿಯಾನದ ಅಂಗವಾಗಿ ಕ್ಷೇತ್ರದಾದ್ಯಂತ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ಭಾಗವಹಿಸುತ್ತಿದ್ದಾರೆ. ಕಾರ್ಯಕರ್ತರಿಗೆ ಪಕ್ಷದ ಶಾಲು ಹಾಕಿ ಶಾಸಕರು ಶುಭಕೋರಿದರು. ಮುತ್ತೂರು ಗ್ರಾಮದ ಕೊಳವೂರು ಶಕ್ತಿ ಕೇಂದ್ರದ ಕಡೆಗುಂಡ್ಯ ಮಹಾಲಿಂಗೇಶ್ವರ
ಸುರತ್ಕಲ್: “ಕರ್ನಾಟಕ ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರದ ಚುಕ್ಕಾಣಿ ಪಡೆಯಲಿದೆ. ಇನಾಯತ್ ಅಲಿ ಅವರಂತಹ ಸಮರ್ಥ ಅಭ್ಯರ್ಥಿಯನ್ನು ಪಕ್ಷವು ಕಣಕ್ಕಿಳಿಸಿದೆ. ಮತದಾರ ಬಾಂಧವರು ಜಾತಿ ಮತ ಬೇಧ ಮರೆತು ಎಲ್ಲರನ್ನೂ ಸಮಾನವಾಗಿ ಕಾಣುವ ಇನಾಯತ್ ಅಲಿ ಅವರನ್ನು ಬೆಂಬಲಿಸಿ” ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದರು. ಅವರು ಸುರತ್ಕಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿಯವರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತಾಡಿದರು.
ಸುರತ್ಕಲ್ ಮಾರ್ಕೆಟ್ ಕಳೆದ 5 ವರ್ಷದಿಂದ ಅಸ್ತಿಪಂಜರದಂತೆ ಉಳಿದಿದ್ದು, ಬಿಜೆಪಿ ಶಾಸಕರ ಅಭಿವೃದ್ಧಿಗೆ ನಿರ್ಲಕ್ಷ್ಯಕ್ಕೆ ಕೈಗನ್ನಡಿಯಾಗಿದೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವೈ.ರಾಘವೇಂದ್ರ ರಾವ್ ಅವರು , ಇಲ್ಲಿನ ಮಾರ್ಕೆಟ್ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಯಾಕೆ, ಯಾವುದೇ ದೊಡ್ಡ ಕಾಮಗಾರಿ ಅಲ್ಲದಿದ್ದರೂ ಸುರತ್ಕಲ್ ಜಂಕ್ಷನ್ ಗೆ 5 ಕೋಟಿ ರೂಪಾಯಿ
ಸುರತ್ಕಲ್: ಭಯೋತ್ಪಾದಕರನ್ನು ಅಮಾಯಕರು ಎಂದು ಕರೆಯುವ ಡಿ.ಕೆ ಶಿವಕುಮಾರ್ ಅವರು ನಿಜವಾದ ಕೋಮುವಾದಿ. ಅವರಿಂದ ಒಂದು ವರ್ಗದ ತುಷ್ಟೀಕರಣವಾಗುತ್ತಿದೆ.ನಾವು ಸರಕಾರದ ಎಲ್ಲಾ ಸೌಲಭ್ಯವನ್ನು ಎಲ್ಲಾ ವರ್ಗಕ್ಕೆ ಸಮಾನವಾಗಿ ಸಿಗುವಂತೆ ಮಾಡಿದೆ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದರು. ಮುಕ್ಕದಲ್ಲಿ ಪಾಲಿಕೆ ವಾರ್ಡ್ 1 ರಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ,ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ಹಿಂದುತ್ವ ಹಾಗೂ ಅಭಿವೃದ್ಧಿ ಎರಡರ ಜತೆ ಯೂ ದಿಟ್ಟ ಹೆಜ್ಜೆ




























