Home ಕರಾವಳಿ Archive by category ಸುಳ್ಯ

ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮ

ಸುಳ್ಯದಲ್ಲಿ ಡಿ. 14 ರಂದು ನ್ಯಾಶನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್ (ರಿ.) ಇದರ ನೂತನವಾಗಿ ಪ್ರಾರಂಭವಾದ ಸುಳ್ಯ ಶಾಖೆಯ ಪದಗ್ರಹಣ ಕಾರ್ಯಕ್ರಮವು ಕೆ ವಿ ಜಿ ಆಯುರ್ವೇದ ಫಾರ್ಮಾ ಹಾಗೂ ರಿಸರ್ಚ್ ಸೆಂಟರಿನ ಎ/ಸಿ ಆಡಿಟೋರಿಯಂನಲ್ಲಿ ನೆರವೇರಿತು. ಈ ಕಾರ್ಯಕ್ರಮದ ಪದಗ್ರಹಣ ಅಧಿಕಾರಿ ಆಗಿ ಜಿಲ್ಲಾ ಆಯುಷ್ ಆಫೀಸರ್ ಡಾ. ಮೊಹಮ್ಮದ್ ಇಕ್ಬಾಲ್ ರವರು ಸರಕಾರಿ

ಎನ್‌ಎಸ್‌ಎಸ್ ಸೇವಾ ಸಂಗಮದ ದಶಮಾನೋತ್ಸವ ಲೋಗೋ ಬಿಡುಗಡೆ

ಸುಳ್ಯ: ಎನ್‌ಎಸ್‌ಎಸ್ ಸೇವಾ ಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ದಶಮಾನೋತ್ಸವ ಕಾರ್ಯಕ್ರಮವು ಜನವರಿ 2 ಮತ್ತು 3ರಂದು ಮುಳ್ಯ ಅಟ್ಲೂರು ಶಾಲೆಯಲ್ಲಿ ನಡೆಯಲಿದ್ದು, ಇದರ ಅಂಗವಾಗಿ ದಶಮಾನೋತ್ಸವದ ಲೋಗೋ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷರಾದ ಬಾಲಕೃಷ್ಣ ಬೊಳ್ಳೂರು ವಹಿಸಿದ್ದರು. ಗೌರವ ಸಲಹೆಗಾರರಾದ ಜಯಪ್ರಕಾಶ್ ಕಲ್ಲುಗದ್ದೆ, ಚಂದ್ರಶೇಖರ ಬಿಳಿನಲೆ, ಡಾ.

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಸ್ಪರ್ಧೆಯ ಫಲಿತಾಂಶ

ಎನ್.ಎಸ್.ಎಸ್ ಸೇವಾ ಸಂಗಮ ಟ್ರಸ್ಟ್ (ರಿ.), ಸುಳ್ಯ ವತಿಯಿಂದ ದಶಮಾನೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಮ್ಮಿಕೊಂಡ ಕನ್ನಡ ಗೀತಾ ಗಾಯನ ಆನ್ ಲೈನ್ ಸ್ಪರ್ಧೆಯ ಫಲಿತಾಂಶಪ್ರಕಟಗೊಂಡಿದೆ. ವಿವಿಧ ಶಾಲೆಗಳ ಹಾಗೂ ಸಾರ್ವಜನಿಕವಾಗಿ ಪಿಯುಸಿವರೆಗಿನ ವಿದ್ಯಾರ್ಥಿ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಸುಮಾರು 15 ತಂಡಗಳು ಭಾಗವಹಿಸಿದ್ದು, ಸ್ಪರ್ಧಿಗಳ ಹಾಡಿನ ಪ್ರಸ್ತುತಿ, ಸ್ವರ-ತಾಳ, ಲಯ, ಹೊಂದಾಣಿಕೆಯನ್ನು ಆಧಾರವಾಗಿಟ್ಟುಕೊಂಡು ತೀರ್ಪುಗಾರರ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಸುಳ್ಯ — ಸಂಸ್ಕೃತ ಸಂಭಾಷಣಾ ಶಿಬಿರ ಉದ್ಘಾಟನೆ

ಸುಳ್ಯದ ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 10 ದಿನಗಳ ಸಂಸ್ಕೃತ ಸಂಭಾಷಣಾ ಶಿಬಿರವು ಡಿಸೆಂಬರ್ 08 ರಂದು ಕಾಲೇಜಿನ ಸುಶ್ರುತ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟನೆಯಾಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ.ವಿ. ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ, ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ಈ ಶಿಬಿರವನ್ನು ಸಂಸ್ಕೃತ ಭಾರತೀ ಕಾಸರಗೋಡು–ಮಂಗಳೂರು ಗ್ರಾಮಾಂತರ ವಿಭಾಗದ ಪ್ರಶಿಕ್ಷಕಿಯಾಗಿರುವ

ಸುಳ್ಯ: ಎನ್ನೆಂಸಿಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳು ದಿನಾಂಕ 16 -11-2025 (ಆದಿತ್ಯವಾರ) ರಂದು ಅಸೈಗೊಳಿ (ಕೊಣಾಜೆ)ಯಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಮೂಹ ಜನಪದ ಗೀತೆಯಲ್ಲಿ ಪ್ರಥಮ ,(ಅಭಿಷೇಕ್ ಎಂ ( ದ್ವಿತೀಯ ಬಿ. ಎಸ್ಸಿ ), ಚೈತ್ರ . ಕೆ. ಟಿ, ( ತೃತೀಯ ಬಿ. ಎಸ್ಸಿ ), ಜೀಷ್ಮ . ಬಿ. ಎಸ್( ತೃತೀಯ ಬಿ. ಎಸ್ಸಿ ), ಅಕ್ಷತಾ . ಸಿ, ( ತೃತೀಯ ಬಿ. ಎಸ್ಸಿ ), ಮನಸ್ವಿ […]

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ ಪ್ರಾರ್ಥನೆ

ಶ್ರೀ ಉಳ್ಳಾಕ್ಳು ಕಾಚುಕುಜುಂಬ ದೈವಗಳ ಮೂಲಸ್ಥಾನದಲ್ಲಿ.. ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶಾಭಿಷೇಕ ಅಂಗವಾಗಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಹಾಗೂ ಗರಡಿ ಬೈಲ್ ಶ್ರೀ ಉಳ್ಳಾಕ್ಳು, ಕಾಚು ಕುಜುಂಬ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ಮಾಡಲಾಯಿತು. ಶ್ರೀ ದೇಗುಲದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಕಾಚು ಕುಜುಂಬ

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನ

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನ. 25ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡಿನಲ್ಲಿ ಡಿ. 25ರಿಂದ ನಡೆಯಲಿರುವ 4 ದಿನದ ಎರಡನೇ ವಿಶ್ವ ಆಯುರ್ವೇದ ಸಮ್ಮಿಲನದ ಅಂಗವಾಗಿ ಕಾಲೇಜಿನಲ್ಲಿ ಆಯುರ್ವೇದ ರಥವನ್ನು ಅದ್ಧೂರಿಯಾಗಿ ಸ್ವಾಗತ ಮಾಡಲಾಯಿತು. ಕಾಲೇಜಿನ ಅಕಾಡೆಮಿಕ್ ಕೋ ಆರ್ಡಿನೇಟರ್ ಡಾ. ಕವಿತಾ ಬಿ.ಎಂ ಇವರು ರಥಕ್ಕೆ ಹಾರ ಹಾಕುವ ಮೂಲಕ ಸ್ವಾಗತಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ಎಲ್ಲಾ ವೈದ್ಯರುಗಳನ್ನು ಸನ್ಮಾನಿಸಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಹುಟ್ಟುಹಬ್ಬದ ಪ್ರಯುಕ್ತ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಪೂಜೆ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಖಾವಂದರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ಮಾಡಲಾಯಿತು.ವಿಶೇಷ ಸಭಾ ಕಾರ್ಯಕ್ರಮವನ್ನು ಮಾಡಿದ್ದು ಇತರ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಎಂ.ಬಿ

ಕೆವಿಜಿ ಆಯುರ್ವೇದ ಕಾಲೇಜ್ ವಾರ್ಷಿಕೋತ್ಸವ ಸಮಾರಂಭ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ

ಕಾಡುಪ್ರಾಣಿಗಳ ಹಾವಳಿ ವಿರುದ್ಧ ಕ್ರಮಕ್ಕೆ ಆಗ್ರಹ
ಮಂಡೆಕೋಲು ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಸುಳ್ಯ: ಕಳೆದ ಎರಡು ದಶಕಗಳಿಂದ ಮಂಡೆಕೋಲು ಗ್ರಾಮಸ್ಥರನ್ನು ಕಾಡುತ್ತಿರುವ ಕಾಡಾನೆ ಹಾಗೂ ಇತರ ವನ್ಯಮೃಗಗಳ ಹಾವಳಿ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದು, ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಸೋಮವಾರ ಮಂಡೆಕೋಲಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಬೆಳಗ್ಗೆ ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದ ನೂರಾರು ಗ್ರಾಮಸ್ಥರು ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರಳ್ಯ ಮಾತನಾಡಿ,