Home ಕರಾವಳಿ Archive by category ಸುಳ್ಯ (Page 14)

ಸುಳ್ಯ: ಸಜ್ಜನ ಪ್ರತಿಷ್ಠಾನದ ವತಿಯಿಂದ ಪತ್ರಕರ್ತರಿಗೆ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ

ಸುಳ್ಯ: ಸದಾ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಆರೋಗ್ಯದ  ಮೇಲೆ ಪರಿಣಾಮ ಬೀರುತ್ತದೆ. ಆದುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿ ದೇಹ ಮತ್ತು ಮನಸ್ಸು ಸದಾ ಉಲ್ಲಸಿತವಾಗಿರಿಸಲು ಕ್ರೀಡೆ ಸಹಕಾರಿ ಎಂದು ಬೀಜದಕಟ್ಟೆ ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ ಹೇಳಿದ್ದಾರೆ. ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ವತಿಯಿಂದ ಸುಳ್ಯ

ಬೆಳ್ಳಾರೆ: ಬೀಡು-ಪಾಟಾಜೆ ದುರಸ್ಥಿಗೆ ಆಗ್ರಹ: ಪ್ರತಿಭಟನೆ ನಡೆಸಲು ನಿರ್ಧರಿಸಿದ ಗ್ರಾಮಸ್ಥರು

ಕಳೆದ 16 ವರುಷಗಳಿಂದ ಹದೆಗೆಟ್ಟಿರುವ ಬೆಳ್ಳಾರೆ ಗ್ರಾಮದ ಬೀಡು-ಪಾಟಾಜೆ ರಸ್ತೆ ಯನ್ನು ಡಾಮರೀಕರಣಗೊಳಿಸುವಂತೆ ಆಗ್ರಹಿಸಿ ಬೆಳ್ಳಾರೆಯ ಮುಖ್ಯ ಪೇಟೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಶೀಘ್ರದಲ್ಲೇ ನಮ್ಮ ಬೀಡು, ಪಾಟಾಜೆ ರಸ್ತೆ ದುರಸ್ತಿಗೊಳಿಸುವ ಭರವಸೆಯನ್ನು ಸರಕಾರ ಹಾಗೂ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕೊಡದೇ ಹೋದಲ್ಲಿ ಇಲ್ಲಿನ ಎಲ್ಲಾ ನಿವಾಸಿಗಳು ರಸ್ತೆಗೆ ಇಳಿದು ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ನೀಡಿದ್ದಾರೆ. ಈ

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ : ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವು ಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ

ಸುಳ್ಯ. ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ,  v4 ನ್ಯೂಸ್  ಹಾಗೂ ಎಂ.ಬಿ. ಫೌಂಡೇಶನ್ ಸಹಯೋಗದಲ್ಲಿ‌ ಅರೆಭಾಷೆ ಕಾಮಿಡಿ ಇದರ ಮೊದಲ ಆಡಿಷನ್ ನ ಉದ್ಘಾಟನಾ ಕಾರ್ಯಕ್ರಮವು ಸುಳ್ಯದ ಲಯನ್ಸ್ ಕ್ಲಬ್ ನಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ  ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಅರೆಭಾಷೆಯ ಸಂಸ್ಕೃತಿ ಆಚಾರ

ನಾಲ್ಕೂರು : ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ಮಂಜೂರು ಆದ ರೂ. 30,000/- ಅನುದಾನದ ಮಂಜೂರಾತಿ ಪತ್ರ ವಿತರಣೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ

ದೇವಚಳ್ಳ : ಶಾಲಾ ರಂಗ ಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ಮಂಜೂರಾದ ರೂ 1,50,000/- ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಗ್ರಾಮದ ದ ಕ ಜಿ ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ ಮತ್ತು ಸಭಾಭವನ ನಿರ್ಮಾಣಕ್ಕೆ ರೂ. 1,50,000/ ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಯೋಜನಾಧಿಕಾರಿರವರು ಮಾತನಾಡುತ್ತ, ಯೋಜನೆಯ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ : ಅಧ್ಯಕ್ಷರಾಗಿ ಕೆ.ಸಿ.ಸದಾನಂದ,ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿ ಆಯ್ಕೆ

ಸುಳ್ಯ: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ – ಆಪರೇಟಿವ್ ಸೊಸೈಟಿ ನೂತನ ಅಧ್ಯಕ್ಷರಾಗಿ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷರಾಗಿ ದಿನೇಶ್ ಮಡಪ್ಪಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇಂದು ನಡೆದ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಸಹಕಾರ ಇಲಾಖೆಯ ಶೋಭಾ ಎನ್.ಎಸ್. ಚುನಾವಣಾಧಿಕಾರಿಯಾಗಿದ್ದರು.ನಿರ್ದೇಶಕರಾದ ಪಿ.ಸಿ.ಜಯರಾಮ, ಎ.ವಿ.ತೀರ್ಥರಾಮ, ಜಾಕೆ ಸದಾನಂದ ಗೌಡ, ಚಂದ್ರಾ ಕೋಲ್ಚಾರ್,

ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ‌ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಡಾ ಅನುರಾಧಾ ಕುರುಂಜಿ

ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರು, ಹಾಗೂ ಎನ್ನೆಂಸಿಯ ಉಪನ್ಯಾಸಕರೂ ಆದ ಡಾ. ಅನುರಾಧಾ ಕುರುಂಜಿ ಯವರು ಕರ್ನಾಟಕ‌ ರಾಜ್ಯಮಟ್ಟದ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿರುತ್ತಾರೆ. ಕರ್ನಾಟಕ ರಾಜ್ಯ ಎನ್ ಎಸ್ ಎಸ್ ಕೋಶ ಮತ್ತು .ಮಂಗಳೂರಿನ ಯೇನೆಪೋಯ ಡೀಮ್ಡ್ ವಿಶ್ವ‌ವಿದ್ಯಾಲಯದ ಸಹಯೋಗದಲ್ಲಿ ಫೆ 3 ರಿಂದ 7 ರವರೆಗೆ ಏನೇಪೋಯ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ನಡೆದ ಶಿಬಿರದಲ್ಲಿ ರಾಜ್ಯದ ವಿವಿಧ ಪದವಿ,

ಸುಳ್ಯ: ಕೆಳ ಮತ್ತು ಮಧ್ಯಮ ವರ್ಗಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ – ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ ಸದಾಶಿವ

ಕೆಳ ಮತ್ತು ಮಧ್ಯಮ ವರ್ಗದ ಜನರ ಏಳಿಗೆಯ ದೃಷ್ಠಿಯಲ್ಲಿ ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಟಲ್ ಟಿಂಕರ್ ಲ್ಯಾಬ್‌ಗಳನ್ನು ಶಾಲೆಗಳಿಗೆ ವಿಸ್ತರಿಸಿರುವುದು, ಆದಾಯ ತೆರಿಗೆ ಪಾವತಿಯ ಮಿತಿಯನ್ನು 12 ಲಕ್ಷ ರೂ.ಗೆ ಏರಿಸಿರುವುದು, ಕಿಸಾನ್ ಕೆಡಿಟ್‌ನ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಜೊತೆಗೆ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸೆಂಟರ್‌ಗಳನ್ನು ತೆರೆಯುವುದಲ್ಲದೆ ಜೀವರಕ್ಷಕ ಔಷಧಗಳಿಗೆ ಜಿಎಸ್‌ಟಿಯಿಂದ

ಬಹುನಿರೀಕ್ಷಿತ “ಮಿಡಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ಅದ್ಧೂರಿ ಬಿಡುಗಡೆ

ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ನಟ ವಿನೀತ್ ಕುಮಾರ್ ಅವರು, “ರಾಜ್